ಬ್ರೇಕಿಂಗ್ ನ್ಯೂಸ್
14-06-26 10:30 pm HK News Staffer ಕ್ರೈಂ
ಬಳ್ಳಾರಿ, ಜೂನ್ 14 : ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣವನ್ನು ಹೋಲುವಂತಹ ಮತ್ತೊಂದು ಭೀಕರ ಕೊಲೆ ಪ್ರಕರಣ ಬಳ್ಳಾರಿಯಲ್ಲಿ ಬೆಳಕಿಗೆ ಬಂದಿದೆ. ವಿವಾಹಿತ ಮಹಿಳೆಗೆ ಅಶ್ಲೀಲ ವಿಡಿಯೋ ಕಳುಹಿಸಿ, ತನ್ನೊಂದಿಗೆ ಸಹಕರಿಸುವಂತೆ ಒತ್ತಾಯಿಸಿ ನಿರಂತರ ಕಿರುಕುಳ ನೀಡುತ್ತಿದ್ದ ಯುವಕನನ್ನು ಮಹಿಳೆಯ ಪತಿ ಹಾಗೂ ಸಹೋದರ ಸೇರಿ ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿ, ಬಳಿಕ ಶವಕ್ಕೆ ಬೆಂಕಿ ಹಚ್ಚಿ ಸಾಕ್ಷ್ಯ ನಾಶಪಡಿಸಲು ಯತ್ನಿಸಿರುವ ಆರೋಪ ಕೇಳಿಬಂದಿದೆ.
ಖಾಸಗಿ ಲ್ಯಾಬ್‌ನಲ್ಲಿ ಕೆಲಸ ಮಾಡುತ್ತಿದ್ದ ಬಸವನಗೌಡ ಪಾಟೀಲ್ (26) ಕೊಲೆಯಾದ ಯುವಕ. ಪ್ರಕರಣ ಸಂಬಂಧ ದೊಡ್ಡ ಬಸವನಗೌಡ, ಆತನ ಪತ್ನಿ ಶ್ವೇತಾ ಹಾಗೂ ಆಕೆಯ ಸಹೋದರ ವಿಜಯ್ ಅವರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ನಾಪತ್ತೆಯಾಗಿದ್ದ ಯುವಕ ಅರೆಬೆಂದ ಸ್ಥಿತಿಯಲ್ಲಿ ಪತ್ತೆ
ಜೂನ್ 7ರಂದು ರಾತ್ರಿ ಬಸವನಗೌಡ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ. ಮರುದಿನ ಬೆಳಗ್ಗೆ ಮೋಕಾ ಪೊಲೀಸ್ ಠಾಣೆ ವ್ಯಾಪ್ತಿಯ ಶಿವಪುರ-ತಂಬ್ರಹಳ್ಳಿ ಎಲ್‌ಎಲ್‌ಸಿ ಕಾಲುವೆ ಸಮೀಪ ಅರೆಬೆಂದ ಸ್ಥಿತಿಯಲ್ಲಿ ಆತನ ಶವ ಪತ್ತೆಯಾಗಿತ್ತು. ಆರಂಭದಲ್ಲಿ ಇದೊಂದು ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದ ಹತ್ಯೆ ಇರಬಹುದು ಎಂದು ಶಂಕಿಸಲಾಗಿತ್ತು. ಆದರೆ ತನಿಖೆ ಮುಂದುವರಿದಂತೆ ಬೆಚ್ಚಿಬೀಳಿಸುವ ಸತ್ಯಾಂಶಗಳು ಹೊರಬಿದ್ದಿವೆ.
ಒಂದು ವರ್ಷದಿಂದ ಕಿರುಕುಳ ಆರೋಪ
ಪೊಲೀಸರ ಮಾಹಿತಿ ಪ್ರಕಾರ, ಮೃತ ಬಸವನಗೌಡ ಕಳೆದ ಒಂದು ವರ್ಷದಿಂದ ವಿವಾಹಿತ ಮಹಿಳೆ ಶ್ವೇತಾಗೆ ಅಶ್ಲೀಲ ವಿಡಿಯೋಗಳು ಹಾಗೂ ಸಂದೇಶಗಳನ್ನು ಕಳುಹಿಸಿ, ತನ್ನೊಂದಿಗೆ ಸಹಕರಿಸುವಂತೆ ಒತ್ತಾಯಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಬಸವನಗೌಡನ ವರ್ತನೆಯಿಂದ ಬೇಸತ್ತ ಶ್ವೇತಾ ಈ ವಿಷಯವನ್ನು ತನ್ನ ಪತಿ ಹಾಗೂ ಸಹೋದರನಿಗೆ ತಿಳಿಸಿದ್ದಳು.
ಇದರಿಂದ ಆಕ್ರೋಶಗೊಂಡ ಮೂವರು ಸೇರಿ ಯುವಕನನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರು ಎಂದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಮಹಿಳೆಯಿಂದಲೇ ಕರೆ ಮಾಡಿಸಿ ನಿರ್ಜನ ಪ್ರದೇಶಕ್ಕೆ ಕರೆಸಿಕೊಂಡಿದ್ದ ಪತಿ
ಯೋಜನೆಯಂತೆ ಜೂನ್ 7ರಂದು ಶ್ವೇತಾಳ ಮೂಲಕವೇ ಬಸವನಗೌಡನಿಗೆ ಕರೆ ಮಾಡಿ ಮೋಕಾ ಸಮೀಪದ ನಿರ್ಜನ ಪ್ರದೇಶಕ್ಕೆ ಬರಲು ಹೇಳಲಾಗಿತ್ತು. ಅಲ್ಲಿಗೆ ಬಂದ ತಕ್ಷಣ ಮೊದಲೇ ಹೊಂಚು ಹಾಕಿ ಕಾದಿದ್ದ ಮಹಿಳೆಯ ಪತಿ ದೊಡ್ಡ ಬಸವನಗೌಡ ಮತ್ತು ಸಹೋದರ ವಿಜಯ್ ಸೇರಿ ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.
ಬಳಿಕ ಶವವನ್ನು ಸುಮಾರು 10 ಕಿಲೋಮೀಟರ್ ದೂರದ ನಿರ್ಜನ ಪ್ರದೇಶಕ್ಕೆ ಸಾಗಿಸಿ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸಾಕ್ಷ್ಯ ನಾಶಪಡಿಸಲು ಯತ್ನಿಸಿದ್ದಾರೆ. ಕೃತ್ಯ ಎಸಗಿದ ಬಳಿಕ ಮೂವರೂ ಬೆಂಗಳೂರಿಗೆ ಪರಾರಿಯಾಗಿದ್ದರು.
ಮೊಬೈಲ್ ತನಿಖೆಯಿಂದ ಬಯಲಾಯ್ತು ಸತ್ಯ
ಮೃತ ಬಸವನಗೌಡನ ಮೊಬೈಲ್ ಪರಿಶೀಲಿಸಿದ ವೇಳೆ ಆತ ಹಲವು ಮಹಿಳೆಯರಿಗೆ ಅಸಭ್ಯ ಸಂದೇಶಗಳನ್ನು ಕಳುಹಿಸಿರುವುದು ಪತ್ತೆಯಾಗಿದೆ. ಮೊಬೈಲ್ ಲೊಕೇಶನ್, ಕಾಲ್ ಡೀಟೇಲ್ಸ್ ಹಾಗೂ ತಾಂತ್ರಿಕ ಮಾಹಿತಿಗಳ ಆಧಾರದ ಮೇಲೆ ಆರೋಪಿಗಳ ಸುಳಿವು ಪತ್ತೆಹಚ್ಚಿದ ಪೊಲೀಸರು ಅವರನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಎಸ್ಪಿ ಹೇಳಿದ್ದೇನು?
ಪ್ರಕರಣ ಕುರಿತು ಮಾಹಿತಿ ನೀಡಿದ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ. ಪೆನ್ನೇಕರ್, “ಮೃತ ಯುವಕ ಮಹಿಳೆಗೆ ವಿಡಿಯೋ ಕಳುಹಿಸಿ ತನ್ನೊಂದಿಗೆ ಸಹಕರಿಸುವಂತೆ ಒತ್ತಾಯಿಸಿ ಕಿರುಕುಳ ನೀಡುತ್ತಿದ್ದ. ಮಹಿಳೆ ಈ ವಿಚಾರವನ್ನು ತನ್ನ ಪತಿ ಹಾಗೂ ಸಹೋದರನಿಗೆ ತಿಳಿಸಿದ್ದಳು. ಕಿರುಕುಳ ಮುಂದುವರಿದ ಹಿನ್ನೆಲೆಯಲ್ಲಿ ಆತನನ್ನು ಕೊಲೆ ಮಾಡಲು ಯೋಜನೆ ರೂಪಿಸಲಾಗಿತ್ತು. ಅದರಂತೆ ಮಹಿಳೆಯಿಂದ ಕರೆ ಮಾಡಿಸಿ ಶಿವಪುರ-ತಂಬ್ರಹಳ್ಳಿ ಕಾಲುವೆ ಸಮೀಪಕ್ಕೆ ಕರೆಯಿಸಿಕೊಂಡು ಹಗ್ಗದಿಂದ ಕೊಲೆ ಮಾಡಲಾಗಿದೆ. ಕಾರಿನಲ್ಲೇ ಹಗ್ಗ ಹಾಗೂ ಪೆಟ್ರೋಲ್ ತಂದಿದ್ದು, ಕೊಲೆ ಬಳಿಕ ಶವಕ್ಕೆ ಬೆಂಕಿ ಹಚ್ಚಿ ಸಾಕ್ಷ್ಯ ನಾಶಪಡಿಸಲು ಯತ್ನಿಸಿದ್ದಾರೆ. ಬೆಂಗಳೂರಿಗೆ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ತನಿಖೆ ಮುಂದುವರಿದಿದೆ” ಎಂದು ತಿಳಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am