ಬ್ರೇಕಿಂಗ್ ನ್ಯೂಸ್
15-06-26 04:54 pm HK News Staffer ಕ್ರೈಂ
ಕಾರವಾರ, ಜೂನ್ 15: ಸಾಮಾಜಿಕ ಜಾಲತಾಣಗಳಿಗಾಗಿ ರೀಲ್ಸ್ ಚಿತ್ರೀಕರಣ ಮಾಡಲು ಹೋಗಿದ್ದ ಐಟಿ ಉದ್ಯೋಗಿಯೊಬ್ಬ ಸಮುದ್ರದ ಅಲೆಗಳಿಗೆ ಸಿಲುಕಿ ನಾಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಡ್ಲೆ ಸಮುದ್ರ ತೀರದಲ್ಲಿ ನಡೆದಿದೆ.
ಮಹಾರಾಷ್ಟ್ರದ ಪುಣೆ ಮೂಲದ ಹಾಗೂ ಖಾಸಗಿ ಐಟಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಜೀವನ್ ಭಟ್ಟರಾಯಿ (26) ಸಮುದ್ರದಲ್ಲಿ ಕೊಚ್ಚಿಹೋಗಿರುವ ಯುವಕ. ಪ್ರವಾಸದ ಭಾಗವಾಗಿ ಐವರು ಸ್ನೇಹಿತರೊಂದಿಗೆ ಕುಮಟಾ ಭಾಗಕ್ಕೆ ಬಂದಿದ್ದ ಅವರು ಕಳೆದ ಮೂರು ದಿನಗಳಿಂದ ಖಾಸಗಿ ರೆಸಾರ್ಟ್‌ನಲ್ಲಿ ತಂಗಿದ್ದರು.
ಭಾನುವಾರ ರೆಸಾರ್ಟ್‌ನಿಂದ ಚೆಕ್‌ಔಟ್ ಆಗುವ ಮುನ್ನ ಸ್ನೇಹಿತರೊಂದಿಗೆ ಕಡ್ಲೆ ಸಮುದ್ರ ತೀರಕ್ಕೆ ತೆರಳಿದ್ದ ಜೀವನ್, ರೀಲ್ಸ್ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದರು. ಈ ವೇಳೆ ಸಮುದ್ರದೊಳಗೆ ಇಳಿದಿದ್ದ ಅವರು ಪ್ರಬಲ ಅಲೆಗಳ ಹೊಡೆತಕ್ಕೆ ಸಿಲುಕಿ ಕೊಚ್ಚಿಹೋಗಿದ್ದಾರೆ ಎನ್ನಲಾಗಿದೆ.
ಘಟನೆ ಗಮನಕ್ಕೆ ಬರುತ್ತಿದ್ದಂತೆಯೇ ಸ್ಥಳೀಯರು ಹಾಗೂ ಸ್ನೇಹಿತರು ಹುಡುಕಾಟ ಆರಂಭಿಸಿದ್ದು, ಬಳಿಕ ಕರಾವಳಿ ಕಾವಲುಪಡೆ, ಸ್ಥಳೀಯ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶೋಧ ಕಾರ್ಯ ಆರಂಭಿಸಿದ್ದಾರೆ.
ಆದರೆ ಸಂಜೆ ವೇಳೆಯಾದರೂ ಜೀವನ್ ಅವರ ಸುಳಿವು ಲಭ್ಯವಾಗಿಲ್ಲ. ಸಮುದ್ರದಲ್ಲಿ ನಿರಂತರ ಶೋಧ ಕಾರ್ಯ ಮುಂದುವರಿದಿದ್ದು, ಘಟನೆ ಸಂಬಂಧ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಡಲ ತೀರಗಳಲ್ಲಿ ಸೆಲ್ಫಿ ಹಾಗೂ ರೀಲ್ಸ್ ಚಿತ್ರೀಕರಣಕ್ಕಾಗಿ ಅಪಾಯಕಾರಿ ಪ್ರದೇಶಗಳಿಗೆ ತೆರಳುವ ಪ್ರವೃತ್ತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಘಟನೆ ಮತ್ತೊಮ್ಮೆ ಎಚ್ಚರಿಕೆಯ ಗಂಟೆ ಮೊಳಗಿಸಿದೆ. ಸಾರ್ವಜನಿಕರು ಸಮುದ್ರ ತೀರಗಳಲ್ಲಿ ಸುರಕ್ಷತಾ ಸೂಚನೆಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm