ಬ್ರೇಕಿಂಗ್ ನ್ಯೂಸ್
18-06-26 01:20 pm HK News Staffer ಕ್ರೈಂ
ಭಟ್ಕಳ, ಜೂನ್ ̇18: ಇತ್ತೀಚಿನ ದಿನಗಳಲ್ಲಿ ಶಾಂತವಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದಲ್ಲಿ ಮತ್ತೆ ಕೋಮು ಉದ್ವಿಗ್ನತೆ ಕಾಣಿಸಿಕೊಂಡಿದೆ. ಹಿಂದೂ ಯುವತಿಯೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ಮುಸ್ಲಿಂ ಯುವಕನನ್ನು ತಡೆದು ಪ್ರಶ್ನಿಸಿ ಪೊಲೀಸರಿಗೆ ಒಪ್ಪಿಸಿದ್ದ ಹಿಂದೂ ಮುಖಂಡರ ವಿರುದ್ಧವೇ ಪ್ರಕರಣ ದಾಖಲಾಗಿರುವುದನ್ನು ಖಂಡಿಸಿ ನೂರಾರು ಹಿಂದೂ ಕಾರ್ಯಕರ್ತರು ಭಟ್ಕಳ ಶಹರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.
ಮಾಹಿತಿಯ ಪ್ರಕಾರ, ಮುಸ್ಲಿಂ ಯುವಕನೊಬ್ಬ ಹಿಂದೂ ಯುವತಿಯನ್ನು ತನ್ನ ಕಾರಿನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಅನುಮಾನಗೊಂಡ ಕೆಲವು ಹಿಂದೂ ಮುಖಂಡರು ಹಾಗೂ ಕಾರ್ಯಕರ್ತರು ವಾಹನವನ್ನು ತಡೆದು ಪ್ರಶ್ನಿಸಿದ್ದಾರೆ. “ನೀವಿಬ್ಬರೂ ಎಲ್ಲಿಗೆ ಹೋಗುತ್ತಿದ್ದೀರಿ? ಭಟ್ಕಳದಿಂದ ಸಾಗರದ ಕಾಡು ಪ್ರದೇಶದ ಕಡೆಗೆ ಏಕೆ ತೆರಳುತ್ತಿದ್ದೀರಿ?” ಎಂದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.
ಆದರೆ ಕಾರಿನಲ್ಲಿದ್ದ ಯುವಕ ಮತ್ತು ಯುವತಿಯಿಂದ ಸಮರ್ಪಕ ಉತ್ತರ ದೊರೆಯದ ಹಿನ್ನೆಲೆಯಲ್ಲಿ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಮುಖಂಡರು, ಇಬ್ಬರನ್ನೂ ಭಟ್ಕಳ ಶಹರ ಪೊಲೀಸ್ ಠಾಣೆಗೆ ಕರೆತಂದು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಆದರೆ ಯುವಕ-ಯುವತಿಯನ್ನು ಠಾಣೆಗೆ ಕರೆತಂದು ಒಪ್ಪಿಸಿದ ಹಿಂದೂ ಮುಖಂಡರ ವಿರುದ್ಧವೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ನೂರಾರು ಹಿಂದೂ ಕಾರ್ಯಕರ್ತರು ಪೊಲೀಸ್ ಠಾಣೆಯ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದರು.
ಪ್ರಕರಣವನ್ನು ತಕ್ಷಣ ಹಿಂಪಡೆಯಬೇಕು ಹಾಗೂ ಸಂಬಂಧಿತ ಯುವಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ ಪ್ರತಿಭಟನಾಕಾರರು ಸರ್ಕಾರ ಮತ್ತು ಪೊಲೀಸ್ ಇಲಾಖೆಯ ವಿರುದ್ಧ ಘೋಷಣೆಗಳನ್ನು ಕೂಗಿದರು. ರಾತ್ರಿ ತಡರವರೆಗೂ ನಡೆದ ಪ್ರತಿಭಟನೆಯಿಂದ ಠಾಣೆ ಸುತ್ತಮುತ್ತ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.
ಪರಿಸ್ಥಿತಿ ಹದಗೆಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಭಟ್ಕಳ ಶಹರ ಪೊಲೀಸ್ ಠಾಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am