ಬ್ರೇಕಿಂಗ್ ನ್ಯೂಸ್
20-06-26 09:13 pm HK News Staffer ಕ್ರೈಂ
ಮಂಗಳೂರು, ಜೂನ್ 20 : ಪತ್ನಿಯನ್ನು ಪತಿಯೇ ಕತ್ತಿಯಿಂದ ಕಡಿದು ಕೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಆಲಂಕಾರು ಪೇಟೆಯ ಕಜೆ ಎಂಬಲ್ಲಿ ನಡೆದಿದ್ದು ಎರಡು ವರ್ಷದ ಕಂದಮ್ಮ ಅನಾಥವಾಗಿ ಪರಿಣಮಿಸಿದೆ.
ಬಜಗೋಳಿ ನಿವಾಸಿ ದಿನೇಶ್ ಹಾಗೂ ಸಿದ್ದಕಟ್ಟೆ ನಿವಾಸಿ ಸಂಗೀತಾ ಮೃತಪಟ್ಟ ದಂಪತಿ. ಪತಿ ದಿನೇಶ್ ಮತ್ತು ಪತ್ನಿ ಸಂಗೀತಾ ನಡುವೆ ಆಗಿಂದಾಗ್ಗೆ ಕೌಟುಂಬಿಕ ಕಲಹ ನಡೆಯುತ್ತಿದ್ದು ಜೂನ್ 19ರ ರಾತ್ರಿ ಪತಿಯೇ ಪತ್ನಿಯನ್ನು ಹತ್ಯೆಗೈದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ದಂಪತಿ ಇಬ್ಬರೂ ಸೇರಿಕೊಂಡು ಆಲಂಕಾರು ಪೇಟೆಯಲ್ಲಿ ಹೋಟೆಲ್ ನಡೆಸುತ್ತಿದ್ದರು. ಎರಡು ವರ್ಷದ ಮಗುವಿನೊಂದಿಗೆ ಕಜೆಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಒಂದು ತಿಂಗಳ ಹಿಂದೆ ಹೊಟೇಲ್ ಬಂದ್ ಮಾಡಿದ್ದು ದಂಪತಿ ನಡುವೆ ವೈಮನಸ್ಸಿನಿಂದ ಕಲಹ ಉಂಟಾಗಿತ್ತು. ಹೀಗಾಗಿ ಒಂದು ತಿಂಗಳಿನಿಂದ ದಿನೇಶ್ ಮನೆ ಬಿಟ್ಟು ತೆರಳಿದ್ದ. ನಿನ್ನೆ ಏಕಾಏಕಿ ಮನೆಗೆ ಮರಳಿದ್ದು ಪತ್ನಿಯ ಜೊತೆಗೆ ಜಗಳವಾಡಿ ಕತ್ತಿಯಿಂದ ಕಡಿದು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.


ಇಂದು ಬೆಳಗ್ಗೆ ಮನೆಯಲ್ಲಿ ಯಾವುದೇ ಚಲನವಲನ ಇರಲಿಲ್ಲ. ಸಂಗೀತಾ ತವರು ಮನೆಯಿಂದ ಕರೆ ಮಾಡಿದಾಗ ಮೊಬೈಲ್ ಸ್ವೀಕರಿಸಿರಲಿಲ್ಲ. ಸಂಶಯದಿಂದ ಇವರ ಮನೆ ಕಡೆಗೆ ಬಂದಿದ್ದು ಒಳಗಿನಿಂದ ಬಾಗಿಲು ಹಾಕಿದ್ದನ್ನು ಒಡೆದು ನೋಡಿದಾಗ ಸಂಗೀತಾ ರಕ್ತದ ಮಡುವಿನಲ್ಲಿ ಬಿದ್ದಿದ್ದರೆ, ದಿನೇಶ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಗು ತಾಯಿ ಮೃತಪಟ್ಟಿರುವುದನ್ನು ತಿಳಿಯದೆ ಎರಡು ವರ್ಷದ ಮಗು ಅತ್ತು ಅತ್ತು ಶವದ ಪಕ್ಕದಲ್ಲಿಯೇ ಮಲಗಿತ್ತು. ಕಡಬ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ. ದಂಪತಿ ದುರಂತ ಸಾವಿಗೀಡಾದ ಹಿನ್ನೆಲೆಯಲ್ಲಿ ಎರಡು ವರ್ಷದ ಹೆಣ್ಣು ಮಗು ಅನಾಥವಾಗಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am