ಪ್ರೇಮಿಗಳ ನಡುವೆ ಕಾರಲ್ಲೇ ಗಲಾಟೆ, ಯುವತಿಗೆ ಚಾಕು ಇರಿದು ಪೆಟ್ರೋಲ್‌ ಬಾಂಬ್‌ ಸಿಡಿಸಿಕೊಂಡು ಯುವಕ ಆತ್ಮಹತ್ಯೆ, ಅಂಕೋಲಾಕ್ಕೆ ಹೊರಟಿದ್ದವರ ಮದ್ಯೆ ಏನಾಯ್ತು?

27-06-26 04:23 pm       HK News Staffer   ಕ್ರೈಂ

ಪ್ರೇಮಿಗಳ ನಡುವೆ ಕಾರಲ್ಲೇ ಗಲಾಟೆ ನಡೆದು, ಪೆಟ್ರೋಲ್‌ ಬಾಂಬ್‌ ಸಿಡಿಸಿಕೊಂಡು ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ನಡೆದಿದೆ.

ತುಮಕೂರು, ಜೂ 27: ಪ್ರೇಮಿಗಳ ನಡುವೆ ಕಾರಲ್ಲೇ ಗಲಾಟೆ ನಡೆದು, ಪೆಟ್ರೋಲ್‌ ಬಾಂಬ್‌ ಸಿಡಿಸಿಕೊಂಡು ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ನಡೆದಿದೆ.

ನಾಗೇಂದ್ರ (30) ಸಜೀವ ದಹನವಾದ ವ್ಯಕ್ತಿ. ತುಮಕೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿನಲ್ಲಿ ಪೆಟ್ರೋಲ್‌ ಬಾಂಬ್‌ ಸಿಡಿಸಿಕೊಂಡಿದ್ದಾನೆ. ಇದರಿಂದ ಸ್ಥಳದಲ್ಲೇ ಆತ ಸಾವಿಗೀಡಾಗಿದ್ದಾನೆ. ಇದಕ್ಕೂ ಮುನ್ನ, ಕಾರಿನಲ್ಲಿದ್ದ ಯುವತಿ ತಲೆಗೆ ನಾಗೇಂದ್ರ ಚಾಕು ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ಆಕೆಯನ್ನು ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. 

ಇಬ್ಬರು ಕಾರಿನಲ್ಲಿ ಬೆಂಗಳೂರಿನಿಂದ ಅಂಕೋಲಗೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪೊಲೀಸರು ಈ ಸಂಬಂಧ ತನಿಖೆ ನಡೆಸುತ್ತಿದ್ದಾರೆ.

ನಾಗೇಂದ್ರ ಬಾಡಿಗೆ ಕಾರು ಮಾಡಿಕೊಂಡು, ಮೊದಲೇ ಪ್ಲ್ಯಾನ್‌ ಮಾಡಿ ಪೆಟ್ರೋಲ್ ಬಾಂಬ್ ತೆಗೆದುಕೊಂಡು ಬಂದಿದ್ದ ಎಂದು ತಿಳಿದು ಬಂದಿದೆ. 

ಸ್ಥಳಕ್ಕೆ ತುಮಕೂರು ಎಸ್ಪಿ ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.