ಬ್ರೇಕಿಂಗ್ ನ್ಯೂಸ್
02-07-26 12:10 pm HK News Staffer ಕ್ರೈಂ
ರಾಮನಗರ, ಜು.2: ಬೆಂಗಳೂರು ದಕ್ಷಿಣ ಜಿಲ್ಲೆಯ ತಾವರೆಕರೆ ಸಮೀಪದ ಮಾದಪಟ್ಟಣ ಗ್ರಾಮದ ಕಲ್ಲು ಕ್ವಾರಿಯಲ್ಲಿ ಗುರುವಾರ ಬೆಳಗ್ಗೆ ಭೀಕರ ದುರಂತ ಸಂಭವಿಸಿದೆ. ಕಾವೇರಿ ಕಂಪನಿಗೆ ಸೇರಿದ ಕ್ರಷರ್ ಕ್ವಾರಿಯಲ್ಲಿ ಕೆಲಸ ನಡೆಯುತ್ತಿದ್ದ ವೇಳೆ ಬೃಹತ್ ಬಂಡೆ ಕುಸಿದು ಏಳು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಇನ್ನೂ ಹಲವು ಕಾರ್ಮಿಕರು ಬಂಡೆಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಮುಂದುವರಿದಿದೆ.
ಇಂದು ಬೆಳಗ್ಗೆ ಸುಮಾರು 7.30ರ ವೇಳೆಗೆ ಕಾರ್ಮಿಕರು ಎಂದಿನಂತೆ ಇಟಾಚಿ ಯಂತ್ರದ ಸಹಾಯದಿಂದ ಕಲ್ಲು ತೆಗೆಯುವ ಕಾಮಗಾರಿ ನಡೆಸುತ್ತಿದ್ದರು. ಇದೇ ವೇಳೆ ಮೇಲ್ಭಾಗದಲ್ಲಿದ್ದ ಬೃಹತ್ ಬಂಡೆ ದಿಢೀರ್ ಕುಸಿದು ಬಿದ್ದಿದೆ. ಬಂಡೆಗಳು ಗಾಳಿಯಲ್ಲಿ ತೂರಿಬಂದು ನೇರವಾಗಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಬಿದ್ದ ಪರಿಣಾಮ ಸ್ಥಳದಲ್ಲೇ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.
ಘಟನೆಯ ತೀವ್ರತೆಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ದುರಂತದ ಸುದ್ದಿ ತಿಳಿಯುತ್ತಿದ್ದಂತೆ ತಾವರೆಕರೆ ಪೊಲೀಸರು, ಜಿಲ್ಲಾಡಳಿತದ ಅಧಿಕಾರಿಗಳು ಹಾಗೂ ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.
ಸದ್ಯ ಸಾವನ್ನಪ್ಪಿರುವ ಏಳು ಕಾರ್ಮಿಕರ ಪೈಕಿ ನಾಲ್ವರು ಮೃತದೇಹಗಳನ್ನು ಹೊರತೆಗೆದು ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ. ಉಳಿದ ಮೃತದೇಹಗಳನ್ನು ಹೊರತೆಗೆಯುವ ಕಾರ್ಯವೂ ಮುಂದುವರಿದಿದೆ. ಇದೇ ವೇಳೆ ಬಂಡೆಗಳಡಿ ಇನ್ನೂ ಐದು ಮಂದಿ ಕಾರ್ಮಿಕರು ಸಿಲುಕಿರುವ ಸಾಧ್ಯತೆ ವ್ಯಕ್ತವಾಗಿದ್ದು, ಅವರನ್ನು ರಕ್ಷಿಸಲು ಜೆಸಿಬಿ ಹಾಗೂ ಇತರ ಯಂತ್ರಗಳ ಸಹಾಯದಿಂದ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಈ ದುರ್ಘಟನೆ ತಾವರೆಕರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಕ್ವಾರಿಯಲ್ಲಿ ಸುರಕ್ಷತಾ ನಿಯಮಗಳನ್ನು ಪಾಲಿಸಲಾಗಿತ್ತೇ ಎಂಬ ವಿಚಾರವೂ ತನಿಖೆಯ ಭಾಗವಾಗಿದೆ. ಘಟನೆಯ ಕುರಿತು ಅಧಿಕಾರಿಗಳಿಂದ ಅಧಿಕೃತ ವರದಿ ಇನ್ನಷ್ಟೇ ಹೊರಬರಬೇಕಿದ್ದು, ರಕ್ಷಣಾ ಕಾರ್ಯಾಚರಣೆ ಪೂರ್ಣಗೊಂಡ ಬಳಿಕ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am