ಬ್ರೇಕಿಂಗ್ ನ್ಯೂಸ್
04-07-26 03:12 pm HK News Staffer ಕ್ರೈಂ
ಉಡುಪಿ, ಜುಲೈ 4: ಮಲ್ಪೆಯ ಉದ್ಯಮಿ ಸಂದೀಪ್ ಸಾಲಿಯಾನ್ ನಿಗೂಢ ಸಾವಿನ ಪ್ರಕರಣದಲ್ಲಿ ಗೋವಾ ಪೊಲೀಸರು ಮಂಗಳೂರು ಮೂಲದ ಮಹಿಳೆಯನ್ನು ಬಂಧಿಸಿದ್ದಾರೆ. ಕ್ಯಾಸಿನೋಗಳಿಗೆ ಬರುವ ಉದ್ಯಮಿಗಳನ್ನು ದೋಚುವುದನ್ನೇ ಹವ್ಯಾಸ ಮಾಡಿಕೊಂಡಿದ್ದ ಅಕ್ಷತಾ ಅಲಿಯಾಸ್ ಮಮತಾ ಅಲಿಯಾಸ್ ರೂಪಶ್ರೀ(36) ಬಂಧಿತ ಮಹಿಳೆ.
ಮಲ್ಪೆಯಲ್ಲಿ ವಾಟರ್ ಸ್ಪೋರ್ಟ್ಸ್ ಉದ್ಯಮ ನಡೆಸುತ್ತಿದ್ದ ಸಂದೀಪ್ ಸಾಲಿಯಾನ್(41) ಜೂನ್ 30ರಂದು ಗೋವಾಕ್ಕೆ ತೆರಳಿದ್ದ ವೇಳೆ ಲಾಡ್ಜ್ ಒಂದರಲ್ಲಿ ತಂಗಿದ್ದಾಗ ನಿಗೂಢ ರೀತಿ ಸಾವನ್ನಪ್ಪಿದ್ದರು. ಮೊದಲಿಗೆ ಹೃದಯಾಘಾತ ಎಂದು ಹೇಳಲಾಗಿದ್ದರೂ ಅವರ ಮೈಮೇಲಿದ್ದ ಚಿನ್ನಾಭರಣ ಕಾಣೆಯಾಗಿದ್ದರಿಂದ ಸಾವಿನ ಬಗ್ಗೆ ಶಂಕೆ ಮೂಡಿತ್ತು. ಗೋವಾ ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸಿದಾಗ ಮಹಿಳೆಯೊಬ್ಬಳು ಜೊತೆಗಿದ್ದು ಲಾಡ್ಜ್ ನಿಂದ ತೆರಳಿರುವುದು ಪತ್ತೆಯಾಗಿತ್ತು. ಹೀಗಾಗಿ ಗೋವಾ ಪೊಲೀಸರು ಆಕೆಯ ಬೆನ್ನುಬಿದ್ದು ಜುಲೈ 3ರಂದು ಶುಕ್ರವಾರ ರಾತ್ರಿ ಮಂಗಳೂರಿನಲ್ಲಿ ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದೇನೆಂದು ಹೇಳುತ್ತಿದ್ದ ಮಮತಾ ತನ್ನ ಹೆಸರನ್ನು ಪ್ರದೇಶಕ್ಕೆ ತಕ್ಕಂತೆ ಬದಲಾಯಿಸುತ್ತಿದ್ದಳು. ಜಾಲತಾಣದಲ್ಲಿ ಶ್ರೀಮಂತರನ್ನು ಬಲೆಗೆ ಹಾಕಿ, ಕ್ಯಾಸಿನೋಗಳಿಗೆ ಕರೆಸಿಕೊಂಡು ದೋಚುತ್ತಿದ್ದಳು. ಗೋವಾ ಪೊಲೀಸರು ಇದೀಗ ಆಕೆಯ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ. ಕ್ಯಾಸಿನೋಗಳಿಗೆ ಬರುವ ಶ್ರೀಮಂತರನ್ನು ಬಲೆಗೆ ಬೀಳಿಸಿ ಹೋಟೆಲ್ಗಳಿಗೆ ಕರೆದುಕೊಂಡು ಹೋಗಿ ದರೋಡೆ ಮಾಡುವುದು ಮತ್ತು ಹನಿ ಟ್ರ್ಯಾಪ್ಗಳಲ್ಲಿ ಸಿಲುಕಿಸಿ ಬ್ಲ್ಯಾಕ್ಮೇಲ್ ಮಾಡುವುದನ್ನು ರೂಢಿ ಮಾಡಿದ್ದಳು.
ಇದಕ್ಕೂ ಮೊದಲು, ಈ ಮಹಿಳೆ ಗುಜರಾತ್ ಉದ್ಯಮಿ ತೋಮೇಶ್ ಯಾದವ್ ಎಂಬವರನ್ನು ಹೋಟೆಲ್ಗೆ ಕರೆಸಿಕೊಂಡು ಇದೇ ರೀತಿ ಪ್ರಜ್ಞಾಹೀನರನ್ನಾಗಿ ಮಾಡಿ 2.40 ಲಕ್ಷ ರೂ. ಮೌಲ್ಯದ ಆಭರಣಗಳನ್ನು ದೋಚಿದ್ದು ಆ ಪ್ರಕರಣದಲ್ಲಿ ಬಂಧನಕ್ಕೀಡಾಗಿ ಬಿಡುಗಡೆಯಾಗಿದ್ದಳು. ಇದೀಗ ಮಲ್ಪೆ ಉದ್ಯಮಿ ಸಂದೀಪ್ ಸಾಲಿಯಾನ್ ಅವರಿಗೆ ಮತ್ತು ಬರುವ ಔಷಧಿ ಕೊಟ್ಟು ಚಿನ್ನ ದೋಚಿರುವ ಶಂಕೆಯಿದೆ. ಸಂದೀಪ್ ಸಾಲಿಯಾನ್ ಈ ಹಿಂದೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜೊತೆಗೆ ಕಾರು ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಆನಂತರ, ಮಲ್ಪೆಯಲ್ಲಿ ವಾಟರ್ ಸ್ಫೋರ್ಟ್ಸ್ ವ್ಯವಹಾರವನ್ನು ಪ್ರಾರಂಭಿಸಿದ್ದು ವ್ಯವಹಾರದಲ್ಲಿ ಉತ್ತಮ ಯಶಸ್ಸು ಸಾಧಿಸಿದ್ದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am