ಬ್ರೇಕಿಂಗ್ ನ್ಯೂಸ್
06-07-26 11:59 am HK News Staffer ಕ್ರೈಂ
ಮಂಗಳೂರು, ಜುಲೈ 6: ಕಾಲೇಜು ತೆರಳಲು ಬಸ್ಸಿಗೆ ಕಾಯುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳಿಗೆ ಯುವಕನೊಬ್ಬ ಚೂರಿ ಇರಿದು ಕೊಲೆಗೆ ಯತ್ನಿಸಿದ ಘಟನೆ ಬಂಟ್ವಾಳ ತಾಲೂಕಿನ ಇರಾ ಸಮೀಪದ ಮೋಂತಿಮಾರು ಎಂಬಲ್ಲಿ ನಡೆದಿದೆ.
ಇಂದು ಬೆಳಗ್ಗೆ ಕಾಲೇಜಿಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದ ಪಿಯುಸಿ ವಿದ್ಯಾರ್ಥಿನಿಗೆ ಸ್ಥಳೀಯ ನಿವಾಸಿ ಜವ್ವರ್ (28) ಎಂಬಾತ ಏಕಾಏಕಿ ಚೂರಿಯಿಂದ ದಾಳಿ ನಡೆಸಿದ್ದಾನೆ. ಪ್ರೀತಿ ವಿಚಾರದಲ್ಲಿ ನಿರಾಕರಿಸಿದ್ದಕ್ಕೆ ವಿದ್ಯಾರ್ಥಿನಿಯ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.



ಇಬ್ಬರು ಕೂಡ ಇರಾ ಬಳಿಯ ಮೋಂತಿಮಾರ್ ಪಡ್ಪು ನಿವಾಸಿಗಳಾಗಿದ್ದು ಪ್ರೀತಿ ನೆಪದಲ್ಲಿ ಯುವಕ ಜವ್ವಾರ್ ಯುವತಿಯ ಹಿಂದೆ ಬಿದ್ದಿದ್ದ. ಪ್ರೀತಿ ನಿರಾಕರಿಸಿದ ಕಾರಣಕ್ಕೆ ಇಂದು ಬೆಳಗ್ಗೆ ಹಿಂಬಾಲಿಸುತ್ತಾ ಬಂದು ಬಸ್ ನಿಲ್ದಾಣದಲ್ಲಿ ನಿಂತಿದ್ದ ವಿದ್ಯಾರ್ಥಿನಿಗೆ ಚೂರಿಯಿಂದ ಹಲ್ಲೆ ನಡೆಸಿದ್ದಾನೆ. ಅಲ್ಲಿದ್ದ ಸ್ಥಳೀಯರು ಬೊಬ್ಬೆ ಹಾಕಿದ್ದರಿಂದ ವಿದ್ಯಾರ್ಥಿನಿಯ ಕೈಗೆ ಗಾಯವಾಗಿದ್ದು ಅಪಾಯದಿಂದ ಪಾರಾಗಿದ್ದಾಳೆ. ಆಕೆಯನ್ನು ಬಳಿಕ ಸ್ಥಳೀಯರು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಚೂರಿ ಇರಿತದಿಂದ ತೀವ್ರ ರಕ್ತ ಸ್ರಾವವಾಗಿದ್ದು ಬಸ್ ನಿಲ್ದಾಣದಲ್ಲಿ ರಕ್ತ ಚೆಲ್ಲಿದೆ. ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿದ್ದಾರೆ. ಯುವಕನನ್ನು ವಶಕ್ಕೆ ಪಡೆದಿದ್ದಾರೆಂಬ ಮಾಹಿತಿ ಇದೆ. ಆರೋಪಿ ಜವ್ಬಾರ್ ಅದೇ ಬಸ್ ನಿಲ್ದಾಣ ಬಳಿಯಲ್ಲಿ ದಿನಸಿ ಅಂಗಡಿ ಸಡೆಸುತ್ತಿದ್ದ. ಏಕಾಏಕಿ ಚೂರಿಯಿಂದ ಹಲ್ಲೆ ನಡೆಸಿದ್ದು ವಿದ್ಯಾರ್ಥಿನಿ ಬೊಬ್ಬೆ ಹಾಕಿ ಆತನ ಕೈಯಿಂದ ಪಾರಾಗಿದ್ದಾಳೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am