ಬ್ರೇಕಿಂಗ್ ನ್ಯೂಸ್
13-07-26 02:54 pm HK News Staffer ಕ್ರೈಂ
ನೆಲಮಂಗಲ , ಜುಲೈ 13: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿ ಪ್ರೀತಿಸಿ, ಧರ್ಮಸ್ಥಳದಲ್ಲಿ ಗುಟ್ಟಾಗಿ ಮದುವೆಯಾಗಿದ್ದ ನವವಿವಾಹಿತೆಯೊಬ್ಬರು ಮದುವೆಯಾದ ಕೇವಲ ಮೂರು ತಿಂಗಳಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ.
ಮೃತರನ್ನು ಗೌರಿಬಿದನೂರು ತಾಲೂಕಿನ ಬೀರಮ್ಮನಹಳ್ಳಿ ನಿವಾಸಿ ತನುಜಾ ಎಂದು ಗುರುತಿಸಲಾಗಿದೆ. ಮೃತ ತನುಜಾ ಯಲಹಂಕದ ಮಾಯಸಂದ್ರ ನಿವಾಸಿ ರವೀಂದ್ರ ಅವರನ್ನು ಕೆಲ ತಿಂಗಳ ಹಿಂದೆ ಧರ್ಮಸ್ಥಳದಲ್ಲಿ ಪ್ರೀತಿಸಿ ವಿವಾಹವಾಗಿದ್ದರು ಎನ್ನಲಾಗಿದೆ.
ಮದುವೆಯ ವಿಚಾರ ರವೀಂದ್ರ ಕುಟುಂಬಕ್ಕೆ ತಿಳಿದಿರಲಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕೆಲ ದಿನಗಳ ಬಳಿಕ ಮನೆಯವರೊಂದಿಗೆ ಮಾತನಾಡುವುದಾಗಿ ಹೇಳಿದ್ದ ರವೀಂದ್ರ, ಆರಂಭದಲ್ಲಿ ತನುಜಾರನ್ನು ಪಿಜಿಯಲ್ಲಿ ಇರಿಸಿ, ಬಳಿಕ ಯಲಹಂಕದ ಸಿಂಗಾಪುರ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸಕ್ಕೆ ವ್ಯವಸ್ಥೆ ಮಾಡಿದ್ದನು.
ಶನಿವಾರ ರಾತ್ರಿ ತನುಜಾ ರವೀಂದ್ರಗೆ ಕರೆ ಮಾಡಿ ಮನೆಗೆ ಬರುವಂತೆ ಕೋರಿದ್ದರು. ಆದರೆ ತಕ್ಷಣ ಬರಲು ಸಾಧ್ಯವಿಲ್ಲ, ಬೆಳಿಗ್ಗೆ ಬರುತ್ತೇನೆ ಎಂದು ರವೀಂದ್ರ ಹೇಳಿದ್ದಾನೆ. ಇದರಿಂದ ಮನನೊಂದ ತನುಜಾ ಮೊಬೈಲ್ ಸ್ವಿಚ್ ಆಫ್ ಮಾಡಿದ್ದರು.
10 ಗಂಟೆ ವೇಳೆಗೆ ತನುಜಾ ರವೀಂದ್ರಗೆ "ವಿಷ ಕುಡಿದಿದ್ದೇನೆ" ಎಂದು ಸಂದೇಶ ಕಳುಹಿಸಿದ್ದು, ತಾವು ನೆಲಮಂಗಲದ ಬಸವನಹಳ್ಳಿ ಬಳಿ ಇರುವುದಾಗಿ ತಿಳಿಸಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ರವೀಂದ್ರ, ತನುಜಾವರನ್ನು ಆಸ್ಪತ್ರೆಗೆ ಕರೆದೊಯ್ದರೂ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.
ಈ ಸಂಬಂಧ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ಕಾರಣವಾದ ಸಂದರ್ಭಗಳು ಹಾಗೂ ಘಟನೆಯ ಹಿನ್ನೆಲೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am