ಬ್ರೇಕಿಂಗ್ ನ್ಯೂಸ್
13-07-26 10:57 pm HK News Staffer ಕ್ರೈಂ
ಮಂಗಳೂರು, ಜುಲೈ 13: ಉರ್ವಾ ಠಾಣೆ ವ್ಯಾಪ್ತಿಯ ಕೋಡಿಕಲ್ ಮತ್ತು ಕುಂಟಿಕಾನದಲ್ಲಿ ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಒಟ್ಟು 11 ಮಂದಿ ಬಾಂಗ್ಲಾ ನಿವಾಸಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಪೈಕಿ ನಾಲ್ವರು ಅಪ್ರಾಪ್ತರು ಅನ್ನುವ ಮಾಹಿತಿಯನ್ನು ಪೊಲೀಸರು ತಿಳಿಸಿದ್ದಾರೆ.
ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆಯ ನಿವಾಸಿಗಳಾದ ಕೌಸರ್ ಅಲಿ (21), ನೂರ್ ಅಮೀನ್ (34), ನಹೀದುಲ್ ಇಸ್ಲಾಂ (22), ಹುಮಾಯೂನ್ ಕಬೀರ್ (22), ರಮ್ಜಾನ್ ಅಲಿ(23), ಅಬ್ದುಲ್ ರಹಮಾನ್ (19), ನೂಯಾನ್ (24) ಮತ್ತು ಇತರ ನಾಲ್ಕು ಮಂದಿ ಅಪ್ರಾಪ್ತರನ್ನು ಪೊಲೀಸರು ಬಂಧಿಸಿದ್ದಾರೆ. ಇವೆರಲ್ಲ ರಾಜಶಾಹಿ ಜಿಲ್ಲೆಯ ಒಂದೇ ಭಾಗದ ನಿವಾಸಿಗಳೆಂದು ಪೊಲೀಸರು ದೃಢಪಡಿಸಿದ್ದಾರೆ.
ವಿದೇಶಿಗರ ಪ್ರಾದೇಶಿಕ ನೋಂದಣಿ ವಿಭಾಗಕ್ಕೆ ಮಾಹಿತಿ ನೀಡಲಾಗಿದ್ದು ಅವರನ್ನು ಗಡೀಪಾರು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ. ಎಸ್ಐಆರ್ ಹಿನ್ನೆಲೆಯಲ್ಲಿ ಅಕ್ರಮವಾಗಿ ಕಟ್ಟಡ ಇನ್ನಿತರ ಕೆಲಸಗಳಿಗಾಗಿ ಬಂದು ಉಳಿಯುತ್ತಿರುವ ಕಾರ್ಮಿಕರ ಬಗ್ಗೆ ನಿಗಾ ಇಟ್ಟಿರುವ ಜನರು ಶಂಕೆಯ ಮೇರೆಗೆ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದಾರೆ.
ಪಶ್ಚಿಮ ಬಂಗಾಳಕ್ಕೆ ಬಂದು ಅಲ್ಲಿ ಸ್ಥಳೀಯ ಏಜಂಟರ ಮೂಲಕ ಅಕ್ರಮವಾಗಿ ಆಧಾರ್ ಕಾರ್ಡ್ ಮಾಡಿಸಿಕೊಂಡು ಬಳಿಕ ಭಾರತದ ಇತರ ಕಡೆಗಳಿಗೆ ಕೆಲಸಗಳಿಗಾಗಿ ತೆರಳುತ್ತಿರುವುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ. ಮಂಗಳೂರಿಗೆ ಇವರನ್ನು ಕೆಲಸಕ್ಕೆ ಕಳಿಸಿಕೊಟ್ಟ ಏಜಂಟರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm