ಬ್ರೇಕಿಂಗ್ ನ್ಯೂಸ್
15-07-26 12:40 pm HK News Staffer ಕ್ರೈಂ
ಕಾಸರಗೋಡು, ಜುಲೈ 15: ಕಾಸರಗೋಡಿನ ಕರಂದಕ್ಕಾಡ್ ಜಂಕ್ಷನ್‌ನಲ್ಲಿ ಭಾನುವಾರ ಮಧ್ಯರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದ ಸಿಸಿಟಿವಿ ದೃಶ್ಯ ಇದೀಗ ಹೊರಬಿದ್ದಿದ್ದು, ಅಪಘಾತದ ಭೀಕರತೆ ಮತ್ತೊಮ್ಮೆ ಆತಂಕ ಮೂಡಿಸಿದೆ. ಎರಡು ಕಾರುಗಳು ಜಂಕ್ಷನ್‌ನಲ್ಲಿ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಬಳಿಕ, ಇನ್ನೋವಾ ಕಾರು ನಿಯಂತ್ರಣ ತಪ್ಪಿ ಹಲವು ಬಾರಿ ಪಲ್ಟಿಯಾಗಿ ರಸ್ತೆಯಲ್ಲಿ ದೂರದವರೆಗೆ ಉರುಳುತ್ತಾ ವಿದ್ಯುತ್ ಕಂಬ ಹಾಗೂ ಕಟ್ಟಡದ ಗೋಡೆಯ ಸಮೀಪ ಬಂದು ನಿಂತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.
ಇನ್ನೋವಾ ಕಾರಿನಲ್ಲಿ ಮಂಗಳೂರಿನಿಂದ ಕಾಞಂಗಾಡ್ ಕಡೆಗೆ ಸಹೋದರ-ಸಹೋದರಿ ಪ್ರಯಾಣಿಸುತ್ತಿದ್ದರು. ಕಾರು ನಿಯಂತ್ರಣ ತಪ್ಪಿ ಸಂಪೂರ್ಣ ನಜ್ಜುಗುಜ್ಜಾಗಿದ್ದರೂ, ವಾಹನದಲ್ಲಿದ್ದ ಎಲ್ಲಾ ಏರ್‌ಬ್ಯಾಗ್‌ಗಳು ಸಮಯಕ್ಕೆ ಸರಿಯಾಗಿ ತೆರೆದ ಪರಿಣಾಮ ಇಬ್ಬರೂ ಗಂಭೀರ ಗಾಯಗಳಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಜೀವ ಉಳಿಸಿಕೊಂಡಿದ್ದಾರೆ.
ಇನ್ನೊಂದೆಡೆ, ಮಧೂರುನಲ್ಲಿ ಮದುವೆ ಸಮಾರಂಭ ಮುಗಿಸಿ ಮನೆಗೆ ಮರಳುತ್ತಿದ್ದ ಎರಿಯಾಳ ಮೂಲದ ಯುವತಿ, ಅವರ ತಾಯಿ ಹಾಗೂ ಮಕ್ಕಳು ಪ್ರಯಾಣಿಸುತ್ತಿದ್ದ ಮಾರುತಿ ಕಾರಿಗೂ ಇನ್ನೋವಾ ಗಾಡಿ ಡಿಕ್ಕಿ ಹೊಡದಿದೆ, ಅದೃಷ್ಟವಶಾತ್ ಕಾರಿನ ಏರ್‌ಬ್ಯಾಗ್ ಓಪನ್ ಆದದರಿಂದ ಸಣ್ಣಪುಟ್ಟ ಗಾಯಗಳಿಂದ ಕುಟುಂಬ ಪಾರಾಗಿದೆ.
ಸಿಸಿಟಿವಿ ದೃಶ್ಯಗಳು ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದ್ದು, ಕಾರಂತಾಕಡ್ ಜಂಕ್ಷನ್‌ನ ಸುರಕ್ಷತೆ ಬಗ್ಗೆ ಸಾರ್ವಜನಿಕರಲ್ಲಿ ಮತ್ತೆ ಆತಂಕ ವ್ಯಕ್ತವಾಗಿದೆ. ಈ ಜಂಕ್ಷನ್‌ನಲ್ಲಿ ಈ ಹಿಂದೆಯೂ ಹಲವು ಬಾರಿ ಅಪಘಾತಗಳು ಸಂಭವಿಸಿರುವ ಹಿನ್ನೆಲೆಯಲ್ಲಿ, ಸ್ಪೀಡ್ ಲಿಮಿಟ್ ವ್ಯವಸ್ಥೆ, ಟ್ರಾಫಿಕ್ ನಿಯಂತ್ರಣ ಹಾಗೂ ಶಾಶ್ವತ ಸುರಕ್ಷತಾ ಕ್ರಮಗಳನ್ನು ತಕ್ಷಣ ಜಾರಿಗೊಳಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
Shocking CCTV from #Kasaragod! A Toyota #Innova flips multiple times after a high-impact crash at #Karanthakkad Junction. Miraculously, everyone survived as the airbags deployed just in time. How many more accidents will it take before authorities fix this notorious black spot? pic.twitter.com/101CN1g910
— Headline Karnataka (@hknewsonline) July 15, 2026
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am