ಬ್ರೇಕಿಂಗ್ ನ್ಯೂಸ್
16-07-26 02:29 pm HK News Staffer ಕ್ರೈಂ
ಮಂಗಳೂರು, ಜುಲೈ 16: ಜುಲೈ 1ರಂದು ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದಲ್ಲಿ ವಿದ್ಯುತ್ ಸಬ್ ಸ್ಟೇಶನ್ ಬಳಿಯಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾದ ಪ್ರಕರಣದಲ್ಲಿ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ.
ಅಸಹಜ ಸಾವು ಪ್ರಕರಣ ದಾಖಲಿಸಿದ್ದ ಪೊಲೀಸರು ತನಿಖೆ ನಡೆಸಿದ್ದರು. ತಣ್ಣೀರುಪಂಥ ಗ್ರಾಮದ ನಿವಾಸಿ, ಲಾರಿ ಚಾಲಕನಾಗಿದ್ದ ಮುಶ್ತಾಕ್ ಎಂಬವನ ಶವ ಪತ್ತೆಯಾಗಿದ್ದು ಕೊಲೆ ಶಂಕೆ ವ್ಯಕ್ತವಾಗಿತ್ತು. ಪೊಲೀಸರ ತನಿಖೆಯಲ್ಲಿ ಸ್ಥಳದಲ್ಲಿ ಕಳವು ಕೃತ್ಯ ನಡೆದಿರುವುದು ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಅಪರಾಧ ಕ್ರಮಾಂಕ 73/2026, ಕಲಂ 331(4),305 ಜೊತೆಗೆ 3(5) ಬಿಎನ್ ಎಸ್-2023 ಪ್ರಕರಣ ದಾಖಲಾಗಿದ್ದು, ಕಳವು ಕೃತ್ಯದ ತನಿಖೆ ನಡೆಸಿದ ಪೊಲೀಸರು ಬೆಳ್ತಂಗಡಿ ಕಾಶಿಪಟ್ನ ನಿವಾಸಿ ಇಬ್ರಾಹಿಂ ಲತೀಫ್ (36) ಎಂಬಾತನನ್ನು ಜುಲೈ 14ರಂದು ದಸ್ತಗಿರಿ ಮಾಡಿದ್ದಾರೆ.
ಆರೋಪಿಯ ವಿಚಾರಣೆಯ ವೇಳೆ ಮೃತ ಮುಶ್ತಾಕ್ ಹಾಗೂ ಇಬ್ರಾಹಿಂ ಲತೀಫ್ (36) ಮತ್ತೋರ್ವ ಆರೋಪಿಯೊಂದಿಗೆ ಸೇರಿ ಜೂನ್ 30 ರಂದು ರಾತ್ರಿ ಬೆಳ್ತಂಗಡಿ ಕುವೆಟ್ಟು ಶಕ್ತಿನಗರ ಎಂಬಲ್ಲಿರುವ ಯೇನಪೋಯ ಸಂಸ್ಥೆಯ ವಿದ್ಯುತ್ ಸಬ್ ಸ್ಟೇಶನ್ ಆವರಣದಲ್ಲಿದ್ದ ಅಲ್ಯೂಮಿನಿಯಂ/ಕಬ್ಬಿಣದ ಸೊತ್ತುಗಳನ್ನು ಕಳವು ಮಾಡಿದ್ದರು. ಈ ವೇಳೆ ಆಕಸ್ಮಿಕವಾಗಿ ಮುಶ್ತಾಕ್ ಕುತ್ತಿಗೆಗೆ ಕಬ್ಬಿಣದ ತಂತಿ ಸಿಲುಕಿ ಮೃತಪಟ್ಟಿರುವುದಾಗಿ ಬಂಧಿತ ಇಬ್ರಾಹಿಂ ಲತೀಫ್ ತಿಳಿಸಿದ್ದಾನೆ. ಆರೋಪಿ ಕಳ್ಳತನ ಮಾಡಿದ ಒಟ್ಟು 550 ಕೆಜಿ ಅಲ್ಯೂಮಿನಿಯಂ ವಯರ್ ಗಳನ್ನು ಸ್ವಾಧೀನಪಡಿಸಲಾಗಿದೆ.
ಆರೋಪಿಯ ವಿಚಾರಣೆಯ ವೇಳೆ ವೇಣೂರು ಠಾಣೆ, ಉಪ್ಪಿನಂಗಡಿ ಠಾಣೆ, ಅರೆಹಳ್ಳಿ ಠಾಣೆ ಹಾಗೂ ಶಿವಮೊಗ್ಗ ಗ್ರಾಮಾಂತರ ಠಾಣೆಗಳಲ್ಲಿ ಸೇರಿದಂತೆ ಒಟ್ಟು 16 ಕಳವು ಪ್ರಕರಣಗಳಲ್ಲಿ ಭಾಗಿಯಾಗಿರುವುದು ತಿಳಿದುಬಂದಿರುತ್ತದೆ. ಇನ್ನೊಬ್ಬ ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am