ಬ್ರೇಕಿಂಗ್ ನ್ಯೂಸ್
17-07-26 09:07 pm HK News Staffer ಕ್ರೈಂ
ಮಂಗಳೂರು, ಜುಲೈ 17: ಬಿಸಿ ರೋಡಿನಲ್ಲಿ ಯುವತಿ ಹತ್ಯೆ ಪ್ರಕರಣದ ನೆಪದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಹಾಗೂ ಪ್ರಚೋದನಾತ್ಮಕ ಪೋಸ್ಟ್ ಪ್ರಸಾರ ಮಾಡಿದ ಮೂವರ ವಿರುದ್ದ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಚೇತನ್ ಭಾವಚಿತ್ರಕ್ಕೆ ಕೇಸರಿ ಶಾಲು ಹಾಗೂ ಕುಂಕುಮವನ್ನು ಅಳವಡಿಸಿ, ಬಜರಂಗದಳದ ಕಾರ್ಯಕರ್ತ ಎಂದು ಎಡಿಟ್ ಮಾಡಿ ಸುಳ್ಳು ಹಾಗೂ ಸಮಾಜದ ಶಾಂತಿ ಕದಡುವ ಬರಹಗಳನ್ನು ಹಾಕಿದ್ದರ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇದಕ್ಕೆ ಸಂಬಂಧಿಸಿ ಟ್ರೋಲ್ ಮಾಸ್ಟರ್ ಎಂಬ ಇನ್ ಸ್ಟಾ ಪೇಜ್ ನಲ್ಲಿ ಪೋಸ್ಟ್ ಹಾಕಿದ ಯುವ ಬೆಳ್ತಂಗಡಿ, ವಾಟ್ಸಪ್ ಗ್ರೂಪಿಗೆ ಹಾಕಿದ ಪದ್ಮರಾಜ್, ಯುವ ಕಾಂಗ್ರೆಸ್ ಬೆಳ್ತಂಗಡಿ ವಾಟ್ಸಪ್ ಗ್ರೂಪ್ ಗಳ ವಿರುದ್ದ ಅ.ಕ್ರ: 96/2026 ಕಲಂ: 196, 353(2) BNS-2023 ಅನ್ವಯ ಕೇಸು ದಾಖಲಾಗಿದೆ.
ಫೇಸ್ಬುಕ್ನಲ್ಲಿ ಕಾಂಗ್ರೆಸ್ ಕಾರ್ಯಕರ್ತೆ ಎನ್ನಲಾದ Shailaja Amarnath ಎಂಬವರ ಖಾತೆಯಲ್ಲಿ ಸುಳ್ಳು ಹಾಗೂ ಸಮಾಜದ ಶಾಂತಿ ಕದಡುವ ರೀತಿಯಲ್ಲಿ ಹಿಂದು ಸಂಘಟನೆಯನ್ನು ಹೀಯಾಳಿಸಿ ಫೋಸ್ಟ್ ಹಾಕಿರುವ ಬಗ್ಗೆ ಅ.ಕ್ರ: 97/2026 ಕಲಂ: 353(2) BNS-2023 ಪ್ರಕರಣ ದಾಖಲಾಗಿದೆ. Chethan Belchada ಎಂಬ ಫೇಸ್ ಬುಕ್ ಖಾತೆಯಲ್ಲಿ ಪ್ರಕರಣದ ಆರೋಪಿಯ ಪೋಟೋವನ್ನು ಕಾಂಗ್ರೆಸ್ ಪಾರ್ಟಿಯ ಕಾರ್ಯಕರ್ತೆನೆಂದು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಹಾಗೂ ಸಮಾಜದ ಶಾಂತಿ ಕದಡುವ ರೀತಿಯಲ್ಲಿ ಪೋಸ್ಟ್ ಮಾಡಿರುವ ಬಗ್ಗೆ ಬಂಟ್ವಾಳ ನಗರ ಠಾಣಾ 98/2026 ಕಲಂ: 353(2) BNS-2023 ರಂತೆ ಪ್ರಕರಣ ದಾಖಲಾಗಿರುತ್ತದೆ.
ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳನ್ನು ದಾಖಲಿಸಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಿಸಿ ರೋಡಿನಲ್ಲಿ ಹತ್ಯೆ ಘಟನೆ ಆದ ಬೆನ್ನಲ್ಲೇ ಅದನ್ನು ಕೆಲವು ಸಂಘಟನೆಗಳ ಹಣೆಗೆ ಕಟ್ಟುವ ಯತ್ನವಾಗಿ ಪೋಸ್ಟ್ ಗಳನ್ನು ಹಾಕಲು ತೊಡಗಿದ್ದರು. ಇದಕ್ಕೆ ಪ್ರತಿಯಾಗಿ ಬಿಜೆಪಿ ಪರ ಇರುವವರು ಇದು ಸರ್ಕಾರದ ವೈಫಲ್ಯವೆಂದು ಶಾಸಕ ಅಶೋಕ ರೈ, ಗೃಹ ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ಟೀಕಿಸಿ ಪೋಸ್ಟ್ ಹಾಕಿದ್ದರು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am