ಬ್ರೇಕಿಂಗ್ ನ್ಯೂಸ್
20-07-26 07:45 pm HK News Staffer ಕ್ರೈಂ
ಚಿಕ್ಕಬಳ್ಳಾಪುರ, ಜುಲೈ 20: ಜಿಲ್ಲೆಯ ಪೆರೇಸಂದ್ರ ಗ್ರಾಮ… ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ರಾಜಕೀಯದಲ್ಲಿ ಪವರ್ ಸೆಂಟರ್, ಇದು ಸಂಸದ ಡಾ.ಕೆ ಸುಧಾಕರ್ ಹಾಗೂ ಶಾಸಕ ಪ್ರದೀಪ್ ಈಶ್ವರ್ ಅವರ ತವರು ಗ್ರಾಮ. ಆದರೆ ಇದೇ ಗ್ರಾಮದಲ್ಲಿರುವ ಸರ್ಕಾರಿ ಪ್ರಾಥಮಿಕ ಆಸ್ಪತ್ರೆಯಲ್ಲಿ ಸಕಾಲಕ್ಕೆ ವೈದ್ಯರಿಲ್ಲ, ಅಗತ್ಯ ವೈದ್ಯಕೀಯ ಸೌಲಭ್ಯಗಳಿಲ್ಲ ಎಂಬ ಆರೋಪ ಕೇಳಿಬಂದಿದೆ. ತೀವ್ರ ಅಸ್ವಸ್ಥಗೊಂಡ 8 ವರ್ಷದ ಬಾಲಕಿಗೆ ಸಕಾಲದಲ್ಲಿ ಚಿಕಿತ್ಸೆ ಸಿಗದೇ ಮೃತಪಟ್ಟಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ಘಟನೆ ಬಳಿಕ ಗ್ರಾಮಸ್ಥರು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದರು.
ಪೆರೇಸಂದ್ರ ಗ್ರಾಮದ ಚಂದ್ರಿಕಾ ಮತ್ತು ನವೀನ್ ದಂಪತಿಯ 8 ವರ್ಷದ ಪುತ್ರಿ ಶಶಿಕಲಾ ನಿನ್ನೆ ಸಂಜೆ ಮನೆ ಮೇಲೆ ಕೋತಿ ಬಂದಿದೆ ಅಂತ ಭಯದಿಂದ ಮನೆಗೆ ಓಡಿ ಬಂದಿದ್ದಾಳೆ. ಏಕಾಏಕಿ ತೀವ್ರ ಅಸ್ವಸ್ಥಗೊಂಡು ಪ್ರಜ್ಞೆ ತಪ್ಪಿದ್ದಾಳೆ. ಕೂಡಲೇ ಕುಟುಂಬಸ್ಥರು ಆಕೆಯನ್ನ ಪೆರೇಸಂದ್ರ ಸರ್ಕಾರಿ ಪ್ರಾಥಮಿಕ ಆಸ್ಪತ್ರೆಗೆ ಕರೆತಂದಿದ್ದಾರೆ. ಆದರೆ ಭಾನುವಾರವಾದ ಕಾರಣ ಆಸ್ಪತ್ರೆಯಲ್ಲಿ ವೈದ್ಯರಿಲ್ಲ, ಅಗತ್ಯ ವೈದ್ಯಕೀಯ ಉಪಕರಣಗಳೂ ಇಲ್ಲ. ಕರ್ತವ್ಯದಲ್ಲಿದ್ದ ನರ್ಸ್ ಚಿಕಿತ್ಸೆ ನೀಡಲು ಸಾಧ್ಯವಾಗಲಿಲ್ಲ, ಇದರಿಂದ ಸಕಾಲಕ್ಕೆ ಚಿಕಿತ್ಸೆ ದೊರೆಯದೇ ಬಾಲಕಿ ಮೃತಪಟ್ಟಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಇನ್ನೂ ಘಟನೆಯಿಂದ ಆಕ್ರೋಶಗೊಂಡ ಗ್ರಾಮಸ್ಥರು ಆಸ್ಪತ್ರೆ ಮುಂದೆ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಆಸ್ಪತ್ರೆಗೆ ಖಾಯಂ ವೈದ್ಯರನ್ನು ನೇಮಿಸಬೇಕು. ಆಕ್ಸಿಜನ್ ಸೇರಿದಂತೆ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಮಾಹಿತಿ ತಿಳಿದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚೇತನ್ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿದರು. ಈ ಬಗ್ಗೆ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚೇತನ್, ಬಾಲಕಿ ಆಸ್ಪತ್ರೆಗೆ ಬಂದಾಗಲೇ ಪಲ್ಸ್ ಇರಲಿಲ್ಲ, ಉಸಿರಾಟವೂ ಅತ್ಯಂತ ಕಡಿಮೆ ಇತ್ತು. ಕರ್ತವ್ಯದಲ್ಲಿದ್ದ ಸಿಬ್ಬಂದಿ ತಕ್ಷಣ ಪ್ರಾಥಮಿಕ ಚಿಕಿತ್ಸೆ ನೀಡಿ ಮೇಲ್ದರ್ಜೆಯ ಆಸ್ಪತ್ರೆಗೆ ರವಾನಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿದರೆ ಮಾತ್ರ ಸಾವಿನ ನಿಖರ ಕಾರಣ ತಿಳಿಯುತ್ತದೆ ಎಂದರು
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am