ಪಂಜುರ್ಲಿ ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ಮೇಲೆ ಪೂಜಾರಿಯಿಂದ ಲೈಂಗಿಕ ದೌರ್ಜನ್ಯ ; ಗರ್ಭಿಣಿ ಮೆಹಿಳೆಯ ದೂರು ದಾಖಲಾಗ್ತಿದ್ದಂತೆ ಎಸ್ಕೇಪ್ ಆದ ಕಾಮುಕ

20-07-26 07:47 pm       HK News Staffer   ಕ್ರೈಂ

ಅನಾರೋಗ್ಯ ನಿವಾರಣೆಯಾಗಲೆಂದು ದೇವಸ್ಥಾನಕ್ಕೆ ತೆರಳುತ್ತಿದ್ದ ಮಹಿಳೆಯೊಬ್ಬರ ಮೇಲೆ ದೇವಸ್ಥಾನದ ಪೂಜಾರಿಯೇ ನಂಬಿಕೆ ದುರುಪಯೋಗಪಡಿಸಿಕೊಂಡು ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಮಹಿಳೆ ಚಿಕ್ಕಮಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ.

ಚಿಕ್ಕಮಗಳೂರು,  ಜುಲೈ 20: ಅನಾರೋಗ್ಯ ನಿವಾರಣೆಯಾಗಲೆಂದು ದೇವಸ್ಥಾನಕ್ಕೆ ತೆರಳುತ್ತಿದ್ದ ಮಹಿಳೆಯೊಬ್ಬರ ಮೇಲೆ ದೇವಸ್ಥಾನದ ಪೂಜಾರಿಯೇ ನಂಬಿಕೆ ದುರುಪಯೋಗಪಡಿಸಿಕೊಂಡು ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಮಹಿಳೆ ಚಿಕ್ಕಮಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ.

ಜುಲೈ 17ರಂದು ದಾಖಲಾಗಿರುವ ದೂರಿನ ಪ್ರಕಾರ, ಅನಾರೋಗ್ಯದ ಹಿನ್ನೆಲೆಯಲ್ಲಿ ಮಹಿಳೆ ಬಸ್ಕಲ್‌ನ ಪಂಜುರ್ಲಿ ದೇವಸ್ಥಾನಕ್ಕೆ ಆಗಾಗ್ಗೆ ಪೂಜೆಗಾಗಿ ತೆರಳುತ್ತಿದ್ದರು. ಈ ವೇಳೆ ದೇವಸ್ಥಾನದ ಪೂಜಾರಿ ಶ್ರೀಧರ್ ಪರಿಚಯವಾಗಿತ್ತು. ಈ ಪರಿಚಯವನ್ನು ದುರುಪಯೋಗಪಡಿಸಿಕೊಂಡ ಪೂಜಾರಿ, ಹಲವು ಬಾರಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.

ಈ ಘಟನೆ ಬಗ್ಗೆ ಯಾರಿಗಾದರೂ ಮಾಹಿತಿ ನೀಡಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಪೂಜಾರಿ ಬೆದರಿಕೆ ಹಾಕಿದ್ದರಿಂದ ಇಷ್ಟುದಿನ ಮೌನವಾಗಿದ್ದೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೆ, ಈ ದೌರ್ಜನ್ಯದ ಪರಿಣಾಮ ತಾನು ಗರ್ಭಿಣಿಯಾಗಿರುವುದಾಗಿ ಕೂಡ ಮಹಿಳೆ ಆರೋಪಿಸಿದ್ದಾರೆ.

ಆರೋಪಿ ಪತ್ತೆಗೆ ಪೊಲೀಸರ ಶೋಧ;

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತಲೆಮರೆಸಿಕೊಂಡಿರುವ ಆರೋಪಿ ಪೂಜಾರಿ ಶ್ರೀಧರ್‌ನ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ. ಪ್ರಕರಣದ ಎಲ್ಲ ಆಯಾಮಗಳಲ್ಲೂ ತನಿಖೆ ಮುಂದುವರಿದಿದ್ದು, ಮಹಿಳೆಯ ಆರೋಪಗಳು ಹಾಗೂ ಲಭ್ಯವಾಗುವ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.