ಬ್ರೇಕಿಂಗ್ ನ್ಯೂಸ್
21-07-26 11:47 am HK News Staffer ಕ್ರೈಂ
ನವದೆಹಲಿ, ಜುಲೈ 21: ಉಕ್ರೇನ್‌ನ ಒಡೆಸ್ಸಾ ಕರಾವಳಿಯಲ್ಲಿ ಸರಕು ನೌಕೆಯ ಮೇಲೆ ರಷ್ಯಾ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಕೇರಳದ ಕಾಸರಗೋಡು ಮೂಲದ ಮಲಯಾಳಿ ನಾವಿಕ ಸೇರಿದಂತೆ ನಾಲ್ವರು ಭಾರತೀಯರು ಮೃತಪಟ್ಟಿದ್ದಾರೆ.
ಉಕ್ರೇನ್‌ನ ಒಡೆಸ್ಸಾ ಬಂದರಿನಿಂದ ಹೊರಟಿದ್ದ ಸರಕು ನೌಕೆಯ ಮೇಲೆ ರಷ್ಯಾ ಪಡೆಗಳು ನಡೆಸಿದ ಕ್ಷಿಪಣಿ ದಾಳಿಯಲ್ಲಿ ಕೇರಳದ ಕಾಸರಗೋಡು ಜಿಲ್ಲೆಯ ವೆಳ್ಳರಿಕುಂಡು ನಿವಾಸಿ, 26 ವರ್ಷದ ನಾವಿಕ ಅಖಿಲ್ ಜೋಯನ್ ದುರಂತ ಅಂತ್ಯ ಕಂಡಿದ್ದಾರೆ. ಗಿನಿಯಾ- ಬಿಸ್ಸಾವ್ ದೇಶದ ಧ್ವಜ ಹೊಂದಿದ್ದ, ಉಕ್ರೇನಿಯನ್ ಜೋಳವನ್ನು ಒಯ್ಯುತ್ತಿದ್ದ ‘ಎಂವಿ ಗೋಲ್ಡನ್ ಲಿಯೋ’ ಎಂಬ ಸರಕು ನೌಕೆಯ ಮೇಲೆ ಒಡೆಸ್ಸಾ ಕರಾವಳಿ ಬಳಿ ರಷ್ಯಾ ಪಡೆಗಳು ದಾಳಿ ನಡೆಸಿವೆ. ಈ ದಾಳಿಯಲ್ಲಿ ನಾಲ್ವರು ಭಾರತೀಯರು ಮತ್ತು ಐವರು ಸಿರಿಯನ್ನರು ಸೇರಿದಂತೆ ಒಟ್ಟು 10 ಸಿಬ್ಬಂದಿ ಮೃತಪಟ್ಟಿದ್ದು, 8 ಜನರನ್ನು ರಕ್ಷಿಸಲಾಗಿದೆ.
ಅಖಿಲ್ ಕಳೆದ 6 ವರ್ಷಗಳಿಂದ ಮರ್ಚೆಂಟ್ ನೇವಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಇದೇ ಹಡಗಿನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಮೂರು ತಿಂಗಳ ಹಿಂದೆಯಷ್ಟೇ ನಿಶ್ಚಿತಾರ್ಥ ಮಾಡಿಕೊಂಡಿದ್ದು ಮಳೆಗಾಲ ಕಳೆದ ಕೂಡಲೇ ಇನ್ನೆರಡು ತಿಂಗಳಲ್ಲಿ ಅವರ ವಿವಾಹ ನಡೆಯಬೇಕಿತ್ತು.
ತಂದೆ ಜೋಯನ್ ಇಲೆಕ್ಟ್ರೀಶಿಯನ್ ಕೆಲಸ ಮಾಡುತ್ತಿದ್ದರೆ, ತಾಯಿ ಇನ್ಶೂರೆನ್ಸ್ ಏಜೆಂಟ್ ಆಗಿದ್ದು ಇವರ ಏಕೈಕ ಪುತ್ರನಾಗಿದ್ದ ಅಖಿಲ್, ಇತ್ತೀಚಿಗಷ್ಟೇ ಕುಟುಂಬಕ್ಕಾಗಿ ಸ್ವಂತ ಮನೆಯನ್ನು ನಿರ್ಮಿಸಿದ್ದರು.
ಹಡಗು ಕಂಪನಿಯು ಕಳುಹಿಸಿದ ಇಮೇಲ್ ಮೂಲಕ ಅಖಿಲ್ ಸಾವಿನ ಸುದ್ದಿ ಕುಟುಂಬಕ್ಕೆ ತಲುಪಿದೆ. ಮೃತದೇಹವನ್ನು ತಾಯ್ನಾಡಿಗೆ ತರಲು ಭಾರತೀಯ ವಿದೇಶಾಂಗ ಸಚಿವಾಲಯ ಮತ್ತು ರಷ್ಯನ್ ಕಾನ್ಸುಲೇಟ್ ಜೊತೆ ಸಂಯೋಜನೆ ನಡೆಸುವಂತೆ ಕೇರಳ ಮುಖ್ಯಮಂತ್ರಿ ಕಚೇರಿ ನೋರ್ಕಾ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದೆ.
ಘಟನೆಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದ್ದು ಭಾರತೀಯರಿದ್ದ ಹಡಗಿನ ಮೇಲೆ ದಾಳಿ ನಡೆಸಿರೋದು ಖಂಡನೀಯ ಮತ್ತು ಅತ್ಯಂತ ವಿಷಾದನೀಯ. ವಾಣಿಜ್ಯ ಹಡಗುಗಳ ಮೇಲೆ ದಾಳಿ ನಡೆಸುವುದು, ನಿರಪರಾಧಿ ನಾಗರಿಕ ಸಿಬ್ಬಂದಿಯನ್ನ ಕೊಲ್ಲುವುದು ಹಾಗೂ ಸಾಗರ ಮಾರ್ಗದ ಸ್ವತಂತ್ರ ವ್ಯಾಪಾರಕ್ಕೆ ಅಡ್ಡಿಪಡಿಸುವುದು ಖಂಡನೀಯ. ಇಂತಹ ದಾಳಿಗಳನ್ನ ತಕ್ಷಣವೇ ನಿಲ್ಲಿಸಬೇಕು ಎಂದು ರಷ್ಯಾಕ್ಕೆ ಭಾರತ ಆಗ್ರಹಿಸಿದೆ.
ಸರ್ಕಾರದ ಮಾಹಿತಿ ಪ್ರಕಾರ, ಎಂವಿ ಗೋಲ್ಡನ್ ಲಿಯೋ ಹಡಗಿನಲ್ಲಿ ಹಡಗಿನಲ್ಲಿ ಒಟ್ಟು 17 ಸಿಬ್ಬಂದಿ ಇದ್ದು, ಅವರಲ್ಲಿ ಐವರು ಭಾರತೀಯರಿದ್ದರು. ಈ ಪೈಕಿ ನಾಲ್ವರು ಭಾರತ ಮೂಲದವರು ಸಾವನ್ನಪ್ಪಿದ್ದು, ಮತ್ತೊಬ್ಬ ಸಿಬ್ಬಂದಿ ಗಂಭೀರ ಗಾಯಗೊಂಡಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am