ಬ್ರೇಕಿಂಗ್ ನ್ಯೂಸ್
21-07-26 04:54 pm HK News Staffer ಕ್ರೈಂ
ಮಂಗಳೂರು, ಜುಲೈ 21: ಮದುವೆಯಾಗುವುದಾಗಿ ನಂಬಿಸಿ ಮ್ಯಾಟ್ರಿಮೋನಿ ಆ್ಯಪ್ ಮೂಲಕ ಪರಿಚಯವಾಗಿದ್ದ ಯುವತಿ ಉದ್ಯಮಿಯೊಬ್ಬರಿಗೆ ಬರೋಬ್ಬರಿ 87.22 ಲಕ್ಷ ರೂ. ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನಲ್ಲಿ ವ್ಯವಹಾರ ನಡೆಸುತ್ತಿದ್ದ ಬೆಳ್ತಂಗಡಿ ಮೂಲದ ಅನನ್ಯ ಕೃಷ್ಣ ಎಂಬುವರಿಗೆ ಈ ವಂಚನೆ ನಡೆದಿದ್ದು, ಯುವತಿ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪೊಲೀಸರ ಮಾಹಿತಿ ಪ್ರಕಾರ, ಮ್ಯಾಟ್ರಿಮೋನಿ ಆ್ಯಪ್ ಮೂಲಕ ಅನನ್ಯ ಕೃಷ್ಣ ಅವರಿಗೆ ಅನಿಷಾ ಪಾಲನ್ ಎಂಬ ಹೆಸರಿನಲ್ಲಿ ಯುವತಿಯೊಬ್ಬಳು ಪರಿಚಯವಾಗಿದ್ದಳು. ಆರಂಭದಲ್ಲಿ ಮದುವೆಯಾಗುವ ಭರವಸೆ ನೀಡಿ ನಂಬಿಕೆ ಗಳಿಸಿದ್ದ ಯುವತಿ, ಬಳಿಕ ತನ್ನ ವ್ಯವಹಾರದಲ್ಲಿ ಆರ್ಥಿಕ ಸಮಸ್ಯೆ ಎದುರಾಗಿದೆ ಎಂದು ಹೇಳಿ ವಿವಿಧ ಕಾರಣಗಳನ್ನು ಮುಂದಿಟ್ಟು ಹಣ ಕೇಳಲು ಆರಂಭಿಸಿದ್ದಾಳೆ.
ಯುವತಿಯ ಪ್ರೀತಿಗೆ ಮರುಳಾಗಿದ್ದ ಕೃಷ್ಣ, 2024ರ ಸೆಪ್ಟೆಂಬರ್ 26ರಿಂದ 2025ರ ಜನವರಿ 20ರವರೆಗೆ ಹಂತ ಹಂತವಾಗಿ ವಿವಿಧ ಬ್ಯಾಂಕ್ ಖಾತೆಗಳು ಹಾಗೂ ಗೂಗಲ್ ಪೇ ಮೂಲಕ ಹಣ ವರ್ಗಾವಣೆ ಮಾಡಿದ್ದಾರೆ. ಒಟ್ಟಾರೆ 87,22,710 ರೂ. ಹಣವನ್ನು ವಿವಿಧ ಖಾತೆಗಳಿಗೆ ಜಮೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಹಣ ಪಡೆದ ಬಳಿಕ ಸುಂದರಿ ತನ್ನ ಮೊಬೈಲ್‌ನ್ನು ಸ್ವಿಚ್ ಆಫ್ ಮಾಡಿಕೊಂಡು ಸಂಪರ್ಕಕ್ಕೆ ಸಿಗದೇ ನಾಪತ್ತೆಯಾಗಿದ್ದಾಳೆ. ಇದರಿಂದ ತಾನು ವಂಚನೆಗೆ ಒಳಗಾಗಿರುವುದು ಅರಿವಾದ ಕೃಷ್ಣ ಬೆಳ್ತಂಗಡಿ ಪೊಲೀಸ್ ಠಾಣೆಗೆ ಓಡಿ ಬಂದು ದೂರು ನೀಡಿದ್ದಾರೆ.
ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಯುವತಿಯ ಪತ್ತೆಗಾಗಿ ತನಿಖೆ ಮುಂದುವರಿಸಿದ್ದಾರೆ. ಮ್ಯಾಟ್ರಿಮೋನಿ ಆ್ಯಪ್‌ನಲ್ಲಿ ಶುರುವಾದ ಈ ಪರಿಚಯ, ಮದುವೆ ಮಂಟಪದವರೆಗೆ ತಲುಪಲಿಲ್ಲ. ಬದಲಾಗಿ ನೇರವಾಗಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದು, ₹87 ಲಕ್ಷ ವಂಚನೆಯ ಪ್ರಕರಣವಾಗಿ ಮಾರ್ಪಟ್ಟಿದ್ದು ಮಾತ್ರ ವಿಪರ್ಯಾಸ.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
20-07-26 09:32 pm
HK News Staffer
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್‌ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm