ಬ್ರೇಕಿಂಗ್ ನ್ಯೂಸ್
27-07-26 09:04 pm HK News Staffer ಕ್ರೈಂ
ಕೋಜಿಕ್ಕೋಡ್, ಜುಲೈ 27: ಕೇರಳ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನ ಕೊಡಿಸುವುದಾಗಿ ನಂಬಿಸಿ ಕಾಂಗ್ರೆಸ್ ಶಾಸಕಿ ವಿದ್ಯಾ ಬಾಲಕೃಷ್ಣನ್ ಅವರಿಂದ 3 ಕೋಟಿ ರೂ.ಗೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ದೆಹಲಿ ಮೂಲದ ನಿತಿನ್ ಮತ್ತು ಗೌರವ್ ಎಂಬ ಇಬ್ಬರನ್ನು ಕೋಝಿಕ್ಕೋಡ್ ನಗರ ಸೈಬರ್ ಪೊಲೀಸರು ಬಂಧಿಸಿದ್ದಾರೆ.
ಕೋಜಿಕ್ಕೋಡ್ ಜಿಲ್ಲೆಯ ಎಳತ್ತೂರ್ ಕ್ಷೇತ್ರದ ಶಾಸಕಿ ವಿದ್ಯಾ ಬಾಲಕೃಷ್ಣನ್ ಅವರಿಗೆ ವಂಚಕರು ವಾಟ್ಸ್‌ಆ್ಯಪ್ ಕರೆ ಮಾಡಿ, 3 ಕೋಟಿ ರೂ. ನೀಡಿದರೆ ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆ ಹೇಳಿಸಿ ಕೇರಳ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಮಾಡಿಸಿ ಕೊಡುವುದಾಗಿ ಹೇಳಿ ಆಮಿಷ ಒಡ್ಡಿದ್ದರು. ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಪೊಲೀಸರು, ಆರೋಪಿಗಳನ್ನು ದಿಲ್ಲಿ–ಹರ್ಯಾಣ ಗಡಿಯಿಂದ ಬಂಧಿಸಿದ್ದಾರೆ ಎಂದು ಕೋಝಿಕ್ಕೋಡ್ ಪೊಲೀಸ್ ಆಯುಕ್ತ ಎ.ಪಿ. ಶೌಕತ್ ಅಲಿ ತಿಳಿಸಿದ್ದಾರೆ.
ಬಂಧಿತ ಆರೋಪಿಗಳು ವಿಚಾರಣೆ ವೇಳೆ ತಮ್ಮ ಕೃತ್ಯವನ್ನು ಒಪ್ಪಿಕೊಂಡಿದ್ದಾರೆ. ಅವರನ್ನು ದೆಹಲಿಯ ನ್ಯಾಯಾಲಯವೊಂದಕ್ಕೆ ಹಾಜರುಪಡಿಸಿದ ಬಳಿಕ ಟ್ರಾನ್ಸಿಟ್ ಜಾಮೀನಿನಲ್ಲಿ ಕೇರಳಕ್ಕೆ ಕರೆತರಲಾಗಿದೆ. ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸರ ವಶಕ್ಕೆ ಪಡೆಯಲಾಗಿದೆ ಎಂದು ಅವರು ಹೇಳಿದರು.
ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳು ಇದೇ ಮಾದರಿಯ ವಂಚನೆ ಪ್ರಕರಣಗಳಲ್ಲಿ ಇತರ ರಾಜ್ಯಗಳಲ್ಲಿಯೂ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ನಾಶಿಕ್ ನಲ್ಲಿ ಪ್ರಧಾನಿ ಕಾರ್ಯಾಲಯದಿಂದ ಮಾತನಾಡುತ್ತಿರುವುದಾಗಿ ಹೇಳಿ ರಾಜಕೀಯ ಪಕ್ಷದ ನಾಯಕರನ್ನು ವಂಚಿಸಲು ಯತ್ನಿಸಿದ್ದರು. ಇದೇ ರೀತಿಯ ಪ್ರಕರಣಗಳು ಹಿಮಾಚಲ ಪ್ರದೇಶ ಮತ್ತು ರಾಜಸ್ಥಾನದಲ್ಲಿಯೂ ನಡೆದಿರುವ ಮಾಹಿತಿಯಿದ್ದು, ಹೆಚ್ಚಿನ ವಿವರಗಳನ್ನು ಕಲೆಹಾಕಲಾಗುತ್ತಿದೆ ಎಂದು ಶೌಕತ್ ಅಲಿ ತಿಳಿಸಿದರು.
ವಂಚಕರು ವಾಟ್ಸ್‌ಆ್ಯಪ್ ಕರೆ ಮಾಡಲು ಬಳಸಿದ್ದ ಸಿಮ್ ಕಾರ್ಡ್ ಬೆನ್ನತ್ತಿ ತನಿಖೆ ನಡೆಸಿದ ಪೊಲೀಸರು ದೆಹಲಿ ಮೂಲದ ದಿನಗೂಲಿ ಕಾರ್ಮಿಕನನ್ನು ವಶಕ್ಕೆ ಪಡೆದಿದ್ದರು. ಆತ ತಾನು ಯಾವುದೇ ಕರೆ ಮಾಡಿಲ್ಲ ಎಂದು ಹೇಳಿದ್ದಲ್ಲದೆ, ಒಂದು ತಿಂಗಳ ಹಿಂದೆ ತನ್ನ ಮೊಬೈಲ್ ಫೋನ್ ಹಾಗೂ ಸಿಮ್ ಎರಡನ್ನೂ ಕಳೆದುಕೊಂಡಿರುವುದಾಗಿ ಪೊಲೀಸರಿಗೆ ತಿಳಿಸಿದ್ದ. ಬಳಿಕ ಹಲವು ಮಂದಿಯನ್ನು ವಿಚಾರಣೆಗೆ ಒಳಪಡಿಸಿ, ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ನಿಜವಾದ ಆರೋಪಿಗಳನ್ನು ಪತ್ತೆಹಚ್ಚಲಾಯಿತು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಜುಲೈ 6ರಂದು ಶಾಸಕಿ ವಿದ್ಯಾ ಬಾಲಕೃಷ್ಣನ್ ಅವರಿಗೆ ವಾಟ್ಸ್‌ಆ್ಯಪ್ ಕರೆ ಬಂದಿತ್ತು. ಕರೆಯ ಬಗ್ಗೆ ಅನುಮಾನಗೊಂಡ ಅವರು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರನ್ನು ಸಂಪರ್ಕಿಸಿದ್ದರು. ಬಳಿಕ ಪ್ರಿಯಾಂಕಾ ಗಾಂಧಿಯ ಆಪ್ತ ಕಾರ್ಯದರ್ಶಿಯ ಸೋಗಿನಲ್ಲಿ ವಂಚಕರು ಕರೆ ಮಾಡಿರುವುದು ದೃಢಪಟ್ಟಿತ್ತು. ಶಾಸಕಿ ಬಳಿಕ ಪೊಲೀಸರಿಗೆ ದೂರು ನೀಡಿದ್ದರು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am