ಬ್ರೇಕಿಂಗ್ ನ್ಯೂಸ್
31-07-26 02:21 pm HK News Staffer ಕ್ರೈಂ
ಮಂಗಳೂರು, ಜುಲೈ 31: 2015ರಲ್ಲಿ ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆಯತ್ನ ಪ್ರಕರಣದಲ್ಲಿ ನೇರ ಭಾಗಿಯಾಗಿ 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕು ಮಲ್ಲೇನಹಳ್ಳಿ ನಿವಾಸಿ ಚುಂಕಿ ಆಕಾಶಭವನ @ ಸಂತೋಷ್ ಎಸ್ (34) ಬಂಧಿತ ವ್ಯಕ್ತಿ. 2015ರಲ್ಲಿ ಮಂಗಳೂರು ನಗರದ ಆಕಾಶಭವನದಲ್ಲಿ ನಡೆದ ಮದುವೆಯ ಮದರಂಗಿ ಶಾಸ್ತ್ರದ ಸಂದರ್ಭದಲ್ಲಿ ಅಶೋಕ ಕುಮಾರ ಕೊಟ್ಟಾರಿ ಹಾಗೂ ಆರೋಪಿ ಜಗ್ಗು ಎಂಬುವರ ನಡುವೆ ಮಾತಿನ ಚಕಮಕಿ ನಡೆದ ವಿಚಾರದಲ್ಲಿ ಚುಂಕಿ ಆಕಾಶಭವನ @ ಸಂತೋಷ್ ಇತರ ಆರೋಪಿಗಳಾದ ರಂಜಿತ್, ಧನು, ಧೂಮ, ಸ್ವೀಟಿ @ ನರೇಶ್ ಮತ್ತು ಜಗ್ಗು ರವರ ಜೊತೆ ಸೇರಿಕೊಂಡು ಅಶೋಕ ಕುಮಾರ್ ಕೊಟ್ಟಾರಿ ಅವರಿಗೆ ತಲವಾರಿನಿಂದ ಕಡಿದು ಮಾರಣಾಂತಿಕ ಹಲ್ಲೆ ನಡೆಸಿ ಗಂಭೀರ ಗಾಯವುಂಟು ಮಾಡಿ ಕೊಲೆಯತ್ನ ನಡೆಸಿದ್ದು, ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ 135/2015 ರಂತೆ ಕೊಲೆಯತ್ನ ಪ್ರಕರಣ ದಾಖಲಾಗಿತ್ತು.
ಪ್ರಕರಣದಲ್ಲಿ ಪ್ರಮುಖ ಆರೋಪಿ ಚುಂಕಿ ಆಕಾಶಭವನ ಎಂಬಾತ ಪ್ರಕರಣ ದಾಖಲಾದ ದಿನದಿಂದ ದಸ್ತಗಿರಿಗೆ ಸಿಗದೇ ಸುಮಾರು 11 ವರ್ಷಗಳಿಂದ ತಲೆಮರೆಸಿದ್ದು, ನ್ಯಾಯಾಲಯವು ಆತನ ವಿರುದ್ಧ 25/2025 ರಂತೆ ಎಲ್ಪಿಸಿ (LPC) ವಾರಂಟ್ ಹೊರಡಿಸಿತ್ತು. ಯಾವುದೇ ಸುಳಿವು ಇಲ್ಲದ ಈತನ ಬಗ್ಗೆ ಬಹಳ ಸಮಯದಿಂದ ಮಾಹಿತಿ ಸಂಗ್ರಹಿಸುತ್ತಿದ್ದ ಸಿಸಿಬಿ ಪೊಲೀಸರಿಗೆ ಈತ ಶಿವಮೊಗ್ಗದಲ್ಲಿ ಇದ್ದಾನೆಂದು ಖಚಿತ ಮಾಹಿತಿ ಸಂಗ್ರಹಿಸಿ ಜುಲೈ 29 ರಂದು ಹಾವೇರಿ ಜಿಲ್ಲೆಯ ಚಿಕ್ಕೆರೂರು ಎಂಬಲ್ಲಿ ವಶಕ್ಕೆ ಪಡೆದು ಕಾವೂರು ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಹಾಗೂ ಸಿಸಿಬಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am