ಬ್ರೇಕಿಂಗ್ ನ್ಯೂಸ್
31-07-26 06:01 pm HK News Staffer ಕ್ರೈಂ
ಧಾರವಾಡ, ಜುಲೈ 31: ಜಿಲ್ಲೆಯ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಜಿಲ್ಲಾ ಪಂಚಾಯಿತಿ ಸದಸ್ಯ, ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೀಡಾಗಿದ್ದ ಮಾಜಿ ಸಚಿವ ಹಾಗೂ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದ ವಿನಯ್ ಕುಲಕರ್ಣಿ ಅವರಿಗೆ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿಗಳಾದ ಬಸವರಾಜ್ ಹಾಗೂ ಮೊಹಮ್ಮದ್ ನವಾಜ್ ಅವರಿದ್ದ ವಿಭಾಗೀಯ ಪೀಠ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದ್ದ ಶಿಕ್ಷೆಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿ, ದೋಷಿ ಎನ್ನುವ ತೀರ್ಪಿಗೂ ಮಧ್ಯಂತರ ತಡೆ ನೀಡಿದೆ. ಅಗತ್ಯ ಷರತ್ತುಗಳನ್ನು ಪೂರೈಸಿದ ಬಳಿಕ ವಿನಯ್ ಕುಲಕರ್ಣಿ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ವಿನಯ್ ಕುಲಕರ್ಣಿ ಸೇರಿದಂತೆ 10 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಚನ್ನಕೇಶವ ಟಿಂಗರಿಕರ್‌ಗೂ ಜಾಮೀನು ದೊರೆತಿದೆ.
"ನಮಗೂ ಕಾನೂನು ಇದೆ, ಅವರಿಗೂ ಇದೆ"
ಹೈಕೋರ್ಟ್ ಆದೇಶದ ಬಗ್ಗೆ ಪ್ರತಿಕ್ರಿಯಿಸಿದ ಮೃತ ಯೋಗೇಶ್ ಗೌಡ ಅವರ ಸಹೋದರ ಗುರುನಾಥಗೌಡರ್, ತಮ್ಮ ವಕೀಲರಿಂದ ಜಾಮೀನು ಕುರಿತ ಮಾಹಿತಿ ದೊರೆತಿದೆ. ಆದರೆ ಈ ದೇಶದಲ್ಲಿ ನಮಗೂ ಕಾನೂನು ಇದೆ, ಅವರಿಗೂ ಕಾನೂನು ಇದೆ. ಹಿಂದೆ ನ್ಯಾಯಾಲಯದ ಮೊರೆ ಹೋಗಿ ನಮಗೆ ನ್ಯಾಯ ದೊರೆತಿತ್ತು. ಈಗ ಅವರು ಹೈಕೋರ್ಟ್‌ನಲ್ಲಿ ಜಾಮೀನು ಪಡೆದಿದ್ದಾರೆ. ಆದರೆ ಆದೇಶದ ಸಂಪೂರ್ಣ ಪ್ರತಿಯನ್ನು ಪರಿಶೀಲಿಸಿದ ಬಳಿಕ ಮುಂದಿನ ಕಾನೂನು ಕ್ರಮದ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ" ಎಂದು ಹೇಳಿದರು.
ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ
ಹೈಕೋರ್ಟ್ ಆದೇಶದ ವಿವರಗಳನ್ನು ಅಧ್ಯಯನ ಮಾಡಿದ ಬಳಿಕ ಹಿರಿಯ ಹೋರಾಟಗಾರ ಬಸವರಾಜ್ ಕೊರವರ ಅವರೊಂದಿಗೆ ಸಮಾಲೋಚನೆ ನಡೆಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ಗುರುನಾಥಗೌಡರ್ ತಿಳಿಸಿದರು. "ಈ ಆದೇಶದಿಂದ ನಮ್ಮ ಹೋರಾಟಕ್ಕೆ ಹಿನ್ನಡೆಯಾಗಿಲ್ಲ. ಯೋಗೇಶ್ ಗೌಡ ಅವರಿಗೆ ನ್ಯಾಯ ಸಿಗುವವರೆಗೂ ನಮ್ಮ ಕಾನೂನು ಹೋರಾಟ ಮುಂದುವರಿಯಲಿದೆ" ಎಂದು ಅವರು ಸ್ಪಷ್ಟಪಡಿಸಿದರು.
ಯೋಗೇಶ್ ಗೌಡ ಪತ್ನಿಯಿಂದ ವಿಭಿನ್ನ ನಿಲುವು
ಇನ್ನೊಂದೆಡೆ, ಮೃತ ಯೋಗೇಶ್ ಗೌಡ ಅವರ ಪತ್ನಿ ಮಲ್ಲಮ್ಮ ಗೌಡ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಹ"ಅವರಿಗೆ ಶಿಕ್ಷೆ ಆದಾಗ ಖುಷಿಪಟ್ಟಿಲ್ಲ, ಈಗ ಜಾಮೀನು ಸಿಕ್ಕಿದೆ ಎಂದು ದುಃಖವೂ ಇಲ್ಲ. ನ್ಯಾಯಾಲಯದ ಆದೇಶವನ್ನು ಗೌರವಿಸಬೇಕು. ನ್ಯಾಯಾಧೀಶರು ಅಂದು ಶಿಕ್ಷೆ ನೀಡಿದ್ದರು, ಇಂದು ಜಾಮೀನು ನೀಡಿದ್ದಾರೆ. ಎರಡನ್ನೂ ನಾವು ಗೌರವಿಸಬೇಕು" ಎಂದು ಹೇಳಿದರು.
ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ಬಗ್ಗೆ ಪ್ರತಿಕ್ರಿಯಿಸಿದ ಅವರು, "ನಾನು ಯಾರಿಗೂ ಬೆಂಬಲ ನೀಡುವುದಿಲ್ಲ. ನಾನು ನನ್ನ ಜಮೀನಿನಲ್ಲಿ ಕೆಲಸ ಮಾಡಿಕೊಂಡು ಬದುಕುತ್ತಿದ್ದೇನೆ. ನನ್ನ ಬಗ್ಗೆ ಹಲವು ಆರೋಪಗಳು ಬಂದಿವೆ. ನಾನು ಯಾವುದೇ ಹಣ ಪಡೆದಿಲ್ಲ. ಹಣ ಪಡೆದಿದ್ದರೆ ಹಗಲು-ರಾತ್ರಿ ದುಡಿಯುವ ಪರಿಸ್ಥಿತಿ ಬರುತ್ತಿರಲಿಲ್ಲ. ನಾನು ಸುಪ್ರೀಂ ಕೋರ್ಟ್‌ಗೆ ಹೋಗುವುದಿಲ್ಲ" ಎಂದು ಸ್ಪಷ್ಟಪಡಿಸಿದರು.
ಧಾರವಾಡದಲ್ಲಿ ಬೆಂಬಲಿಗರ ಸಂಭ್ರಮ
ಮಧ್ಯಂತರ ಜಾಮೀನು ಆದೇಶದ ಸುದ್ದಿ ಜೈಲಿಗೆ ತಲುಪುತ್ತಿದ್ದಂತೆ ವಿನಯ್ ಕುಲಕರ್ಣಿ ಸಂತಸ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಧಾರವಾಡದಲ್ಲಿ ಅವರ ಬೆಂಬಲಿಗರು ಅಗಸಿ ವೃತ್ತದ ಬಳಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದರು. "ಸತ್ಯಮೇವ ಜಯತೆ" ಎಂಬ ಘೋಷಣೆಗಳನ್ನು ಕೂಗಿ ವಿಜಯೋತ್ಸವ ಆಚರಿಸಿದರು.
2016ರ ಜೂನ್‌ನಲ್ಲಿ ಧಾರವಾಡದಲ್ಲಿ ಬಿಜೆಪಿ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಅವರ ಹತ್ಯೆಯಾಗಿತ್ತು. ಕಳೆದ ಏಪ್ರಿಲ್‌ನಲ್ಲಿ ಬೆಂಗಳೂರಿನ ವಿಶೇಷ ನ್ಯಾಯಾಲಯವು ವಿನಯ್ ಕುಲಕರ್ಣಿ ಸೇರಿದಂತೆ 17 ಆರೋಪಿಗಳನ್ನು ದೋಷಿಗಳೆಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿತ್ತು. ಇದರ ಪರಿಣಾಮವಾಗಿ ವಿನಯ್ ಕುಲಕರ್ಣಿ ಶಾಸಕ ಸ್ಥಾನದಿಂದ ಅನರ್ಹರಾಗಿದ್ದರು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am