ಬ್ರೇಕಿಂಗ್ ನ್ಯೂಸ್
31-07-26 10:53 pm HK News Staffer ಕ್ರೈಂ
ಮಂಗಳೂರು, ಜುಲೈ 31: ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವ ನಾಟಕವಾಡಿ ಅತ್ಯಾಚಾರ ಎಸಗಿದ್ದಲ್ಲದೆ, ಆಕೆಯ ಸ್ನಾನದ ವೀಡಿಯೊ ಮಾಡಿ ನಗ್ನ ಚಿತ್ರಗಳನ್ನು ವೈರಲ್ ಮಾಡುವುದಾಗಿ ಜೀವ ಬೆದರಿಕೆಯೊಡ್ಡಿದ್ದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.
ಕುಂಜತ್ತಬೈಲಿನ ದೇವಿನಗರ ನಿವಾಸಿ ಸೋನು ಮ್ಯಾಕ್ಲಿನ್ ನೊರೊನ್ಹ (20) ಶಿಕ್ಷೆಗೆ ಗುರಿಯಾದ ಆರೋಪಿ. ಈತನ ವಿರುದ್ಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಸೋನು ಮ್ಯಾಕ್ಲಿನ್ 2024ರ ಫೆಬ್ರವರಿಯಿಂದ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವಂತೆ ಮನವೊಲಿಸಿದ್ದ. ಬಳಿಕ 2024ರ ಸೆಪ್ಟೆಂಬರ್‌ನಲ್ಲಿ ಶಕ್ತಿನಗರದ ಬಾಡಿಗೆ ಮನೆಯಲ್ಲಿ ಹಾಗೂ 2024ರ ನವೆಂಬರ್‌ನಿಂದ 2025ರ ಜೂನ್ ಅವಧಿಯಲ್ಲಿ ಅಳಪೆ ಗ್ರಾಮದ ಕೆಂಬಾರು ಕೆಇಬಿ ಮುಂಭಾಗದ ಮನೆಯಲ್ಲಿ ಬಾಲಕಿಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದ. ಅಲ್ಲದೆ, ಬಾಲಕಿ ಸ್ನಾನ ಮಾಡುತ್ತಿದ್ದಾಗ ವೀಡಿಯೊ ಕಾಲ್ ಮಾಡಿ, ನಗ್ನ ಚಿತ್ರಗಳ ಸ್ಕ್ರೀನ್‌ಶಾಟ್ ಸಂಗ್ರಹಿಸಿಟ್ಟುಕೊಂಡಿದ್ದ. ಮುಂದೆ ದೈಹಿಕ ಸಂಪರ್ಕಕ್ಕೆ ಬಾರದಿದ್ದರೆ ಚಿತ್ರಗಳನ್ನು ವೈರಲ್ ಮಾಡುವುದಾಗಿ ಹಾಗೂ ಬಾಲಕಿ, ಆಕೆಯ ತಾಯಿ ಮತ್ತು ಅಕ್ಕನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ.
ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿತ್ತು. ಆಗಿನ ಇನ್ಸ್‌ಪೆಕ್ಟರ್ ಟಿ.ಡಿ.ನಾಗರಾಜ್ ತನಿಖೆ ನಡೆಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕಿ ಸಹನಾ ದೇವಿ ವಾದ ಮಂಡಿಸಿದ್ದರು. ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಮಾನು ಕೆ.ಎಸ್. ಅವರು ಆರೋಪಿಗೆ ಶಿಕ್ಷೆ ಪ್ರಕಟಿಸಿದ್ದಾರೆ. ಪೋಕ್ಸೋ ಕಾಯ್ದೆಯಡಿ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹50,000 ದಂಡ, ಕಲಂ 77 BNS: 1 ವರ್ಷ ಜೈಲು ಶಿಕ್ಷೆ ಹಾಗೂ ₹5,000 ದಂಡ, ಕಲಂ 15 POCSO: 1 ವರ್ಷ ಜೈಲು ಶಿಕ್ಷೆ ಹಾಗೂ ₹5,000 ದಂಡ, ಕಲಂ 66 (E) IT Act: 1 ವರ್ಷ ಜೈಲು ಶಿಕ್ಷೆ ಹಾಗೂ ₹5,000 ದಂಡ ವಿಧಿಸಲಾಗಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am