Riyaz Farangipete: ಬೆಳ್ತಂಗಡಿ ಪಿಎಫ್ಐ ಪ್ರತಿಭಟನೆಯಲ್ಲಿ ಧಾರ್ಮಿಕ ಪ್ರಚೋದನಕಾರಿ ಭಾಷಣ ; 'ತಾಂಟ್ರೆ ಬಾ ತಾಂಟ್' ಎಸ್ಡಿಪಿಐ ಮುಖಂಡ ರಿಯಾಜ್ ಫರಂಗಿಪೇಟೆಗೆ ಶಿಕ್ಷೆ ವಿಧಿಸಿದ ಕೋರ್ಟ್ 

04-08-26 10:13 pm       HK News Staffer   ಕ್ರೈಂ

ಬೆಳ್ತಂಗಡಿ ತಾಲೂಕು ಕಚೇರಿ ಎದುರಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ವಲಯ ಎಂಬ ಸಂಘಟನೆಯ ವತಿಯಿಂದ ನಡೆದಿದ್ದ ಪ್ರತಿಭಟನಾ ಸಭೆಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತೆ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಲ್ಲಿ ಎಸ್ಡಿಪಿಐ ಮುಖಂಡ ಮಹಮ್ಮದ್ ರಿಯಾಜ್ ಫರಂಗಿಪೇಟೆ ವಿರುದ್ಧ ಬೆಳ್ತಂಗಡಿ ನ್ಯಾಯಾಲಯ ಆರು ತಿಂಗಳ ಶಿಕ್ಷೆ ವಿಧಿಸಿದೆ.

ಮಂಗಳೂರು, ಆಗಸ್ಟ್ 4: ಬೆಳ್ತಂಗಡಿ ತಾಲೂಕು ಕಚೇರಿ ಎದುರಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ವಲಯ ಎಂಬ ಸಂಘಟನೆಯ ವತಿಯಿಂದ ನಡೆದಿದ್ದ ಪ್ರತಿಭಟನಾ ಸಭೆಯಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತೆ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದಲ್ಲಿ ಎಸ್ಡಿಪಿಐ ಮುಖಂಡ ಮಹಮ್ಮದ್ ರಿಯಾಜ್ ಫರಂಗಿಪೇಟೆ ವಿರುದ್ಧ ಬೆಳ್ತಂಗಡಿ ನ್ಯಾಯಾಲಯ ಆರು ತಿಂಗಳ ಶಿಕ್ಷೆ ವಿಧಿಸಿದೆ. 

2015ರ ಜುಲೈ 23ರಂದು ಭಾಷಣ ಮಾಡಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 315/2015, ಕಲಂ: 153(A)295(A) ಭಾ.ದಂ.ಸಂ (IPC)ರಂತೆ ಪ್ರಕರಣ ದಾಖಲಾಗಿತ್ತು. ಸದ್ರಿ ಪ್ರಕರಣದ ತನಿಖೆ ನಡೆಸಿದ ಅಂದಿನ ಬೆಳ್ತಂಗಡಿ ಠಾಣೆಯ ಪೊಲೀಸ್ ಉಪ ನಿರೀಕ್ಷಕರು ಹಾಗೂ ಸದ್ರಿ ಪ್ರಕರಣದ ತನಿಖಾಧಿಕಾರಿ ರವಿ ಬಿ.ಎಸ್ ಅವರು ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ಬೆಳ್ತಂಗಡಿ ಜೆಎಂಎಫ್ ನ್ಯಾಯಾಲಯಕ್ಕೆ ದೊಷಾರೊಪಣಾ ಪಟ್ಟಿ ಸಲ್ಲಿಸಿದ್ದರು. 

ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ರಾಮಲಿಂಗಪ್ಪ ಅವರು ಕಲಂ 153(A) ಅಡಿಯಲ್ಲಿ ಆರೋಪಿ ವಿರುದ್ಧ 6 ತಿಂಗಳ ಸಾದಾ ಕಾರಾಗೃಹ ವಾಸ ಮತ್ತು 10,000 ದಂಡ ವಿಧಿಸಿ ಅದೇಶಿಸಿದ್ದಾರೆ. ಪೊಲೀಸರ ಪರವಾಗಿ ಸರಕಾರಿ ಅಭಿಯೋಜಕಿ ಆಶೀತ ಆವರು ವಾದಮಂಡನೆ ನಡೆಸಿದ್ದರು.