ಬ್ರೇಕಿಂಗ್ ನ್ಯೂಸ್
05-08-26 11:44 am HK News Staffer ಕ್ರೈಂ
ಮಂಗಳೂರು, ಆಗಸ್ಟ್ 05: ಮಂಗಳೂರಿನ ಪ್ರತಿಷ್ಠಿತ ಶ್ರೀನಿವಾಸ್ ಕಾಲೇಜಿನಲ್ಲಿ ಮತ್ತೆ ರ್ಯಾಗಿಂಗ್ ಪ್ರಕರಣ ಬೆಳಕಿಗೆ ಬಂದಿದ್ದು, ಕೇವಲ ಕಪ್ಪು ಬಣ್ಣದ ಶೂ ಧರಿಸಿದ್ದ ವಿಚಾರಕ್ಕೆ ಇಬ್ಬರು ಪ್ರಥಮ ವರ್ಷದ ವಿದ್ಯಾರ್ಥಿಗಳ ಮೇಲೆ ಸೀನಿಯರ್ ವಿದ್ಯಾರ್ಥಿಗಳ ಗುಂಪು ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದು, ಆರು ಮಂದಿ ಸೀನಿಯರ್ ವಿದ್ಯಾರ್ಥಿಗಳ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಗರದ ಗುಜ್ಜರಕೆರೆ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಪ್ರಥಮ ವರ್ಷದ ವಿದ್ಯಾರ್ಥಿಗಳಾದ ಆದರ್ಶ ಮತ್ತು ಜಾಸಿನ್ ಮೇಲೆ ದ್ವಿತೀಯ ವರ್ಷದ ಲಾಜೆಸ್ಟಿಕ್ ವಿಭಾಗದ ವಿದ್ಯಾರ್ಥಿಗಳ ಗುಂಪು ಹಲ್ಲೆ ನಡೆಸಿದೆ ಎನ್ನಲಾಗಿದೆ. ಹಲ್ಲೆಗೊಳಗಾದ ಇಬ್ಬರೂ ವಿದ್ಯಾರ್ಥಿಗಳು ಕೇರಳ ಮೂಲದವರಾಗಿದ್ದಾರೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಕಪ್ಪು ಶೂ ಹಾಕಿಕೊಂಡು ಬಂದಿದ್ದನ್ನು ನೆಪವನ್ನಾಗಿ ಮಾಡಿಕೊಂಡು ಸೀನಿಯರ್ ವಿದ್ಯಾರ್ಥಿಗಳು ಜೂನಿಯರ್ ವಿದ್ಯಾರ್ಥಿಗಳೊಂದಿಗೆ ವಾಗ್ವಾದ ನಡೆಸಿ, ಬಳಿಕ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಘಟನೆಯಿಂದ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪಾಂಡೇಶ್ವರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಆಸ್ಪತ್ರೆಗೆ ತೆರಳಿ ಗಾಯಗೊಂಡ ವಿದ್ಯಾರ್ಥಿಗಳ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಈ ಸಂಬಂಧ ದ್ವಿತೀಯ ವರ್ಷದ ಲಾಜೆಸ್ಟಿಕ್ ವಿಭಾಗದ ಆರು ಮಂದಿ ವಿದ್ಯಾರ್ಥಿಗಳ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಕಾಲೇಜುಗಳಲ್ಲಿ ರ್ಯಾಗಿಂಗ್ ಪ್ರಕರಣಗಳು ಮತ್ತೆ ತಲೆ ಎತ್ತುತ್ತಿರುವುದು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಆತಂಕ ಮೂಡಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.
05-08-26 10:56 pm
mangalore
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
ರಾಜಕೀಯ ಡಬಲ್ ಗೇಮ್, ಮೋಸದಿಂದ ಕೂಡಿದೆ; ತಲೆ ಹೊಡೆದವ...
04-08-26 08:11 pm
ಸಂಪುಟ ಸಂಕಟ; ಸಚಿವ ಸ್ಥಾನ ಸಿಗದ್ದಕ್ಕೆ ರಾಜ್ಯಾದ್ಯಂತ...
04-08-26 03:53 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
05-08-26 08:08 pm
HK News Staffer
ಉಳ್ಳಾಲ ಚೀರುಂಭ ಭಗವತಿ ಕ್ಷೇತ್ರ ; ಸಂಘ ನೋಂದಣಿ ಆಗಿಲ...
03-08-26 10:50 pm
Sweethin Harman, Latent Show, Mangalore: ಜನಪ್...
03-08-26 11:42 am
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
05-08-26 09:08 pm
HK News Staffer
ಯಾದಗಿರಿ ಔಷಧ ಕಂಪನಿಯಲ್ಲಿ ಭೀಕರ ದುರಂತ ; ರಾಸಾಯನಿಕ...
05-08-26 06:20 pm
ಬ್ರಾಹ್ಮಣರಿಗೆ ಮನೆ ಇದೆಯೇ? ನಾವು ಇನ್ಫೋಸಿಸ್ ಉದ್ಯೋಗ...
05-08-26 04:42 pm
ಕಾಡಾನೆ ಜೊತೆ ಸೆಲ್ಫಿ ತೆಗೆಯಲು ಹೋಗಿ ಜೀವ ಕಳೆದುಕೊಂಡ...
05-08-26 04:29 pm
Srinivas College Ragging, Mangalore: ಶ್ರೀನಿವಾ...
05-08-26 11:44 am