ಬ್ರೇಕಿಂಗ್ ನ್ಯೂಸ್
11-08-26 12:38 pm HK News Staffer ಕ್ರೈಂ
ಮಣಿಪಾಲ, ಆ.11: ರಸ್ತೆ ಬದಿಯ ಮರಕ್ಕೆ ಬುಲೆಟ್ ಬೈಕ್ ಡಿಕ್ಕಿ ಹೊಡೆದ ಪರಿಣಾಮ 21 ವರ್ಷದ ಯುವಕ ಮೃತಪಟ್ಟ ದಾರುಣ ಘಟನೆ ಹೆರ್ಗ ಗ್ರಾಮದ ಕೆಳಪರ್ಕಳ ಇಳಿಜಾರಿನಲ್ಲಿರುವ ಗೋಪಾಲಕೃಷ್ಣ ದೇವಸ್ಥಾನದ ಬಳಿ ಮಂಗಳವಾರ ನಸುಕಿನ ಜಾವ 1.25ರ ಸುಮಾರಿಗೆ ನಡೆದಿದೆ.
ಮೃತರನ್ನು ಆತ್ರಾಡಿ ನಿವಾಸಿ ಸನತ್ (21) ಎಂದು ಗುರುತಿಸಲಾಗಿದೆ. ಸನತ್ ಅವರು ಗೆಳೆಯರೊಂದಿಗೆ ಮಣಿಪಾಲದಲ್ಲಿ ರಾತ್ರಿ ಊಟ ಮುಗಿಸಿ, ಬಳಿಕ ಗೆಳೆಯ ಆಶಿಶ್ ಅವರ ಬುಲೆಟ್ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದರು ಎನ್ನಲಾಗಿದೆ.
ಮಣಿಪಾಲ ಕಡೆಯಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಕೆಳಪರ್ಕಳ ಇಳಿಜಾರಿನಲ್ಲಿ ಸಾಗುತ್ತಿದ್ದ ವೇಳೆ ಅತಿವೇಗ ಹಾಗೂ ಅಜಾಗರೂಕತೆಯಿಂದ ಸವಾರನ ನಿಯಂತ್ರಣ ತಪ್ಪಿದೆ ಎನ್ನಲಾಗಿದೆ. ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸನತ್ ಅವರು ಬುಲೆಟ್ ಸಮೇತ ರಸ್ತೆ ಬದಿಯ ಚರಂಡಿಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು.
ತೀವ್ರವಾಗಿ ಗಾಯಗೊಂಡಿದ್ದ ಸನತ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಆದರೆ, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 04:49 pm
HK News Staffer
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
11-08-26 03:08 pm
HK News Staffer
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am