ಬ್ರೇಕಿಂಗ್ ನ್ಯೂಸ್
11-08-26 01:04 pm HK News Staffer ಕ್ರೈಂ
ಸುರತ್ಕಲ್, ಆಗಸ್ಟ್ 11: ಶೀಟ್ ಮೇಲ್ಛಾವಣಿ ನಿರ್ಮಾಣ ಕಾಮಗಾರಿ ವೇಳೆ ಕಬ್ಬಿಣದ ರಾಡ್ ಹೈಟೆನ್ಷನ್ ವಿದ್ಯುತ್ ತಂತಿಗೆ ತಾಗಿ ಗುತ್ತಿಗೆದಾರರೊಬ್ಬರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾಪುರ 6ನೇ ಬ್ಲಾಕ್ನಲ್ಲಿ ಸಂಭವಿಸಿದೆ. ಮೃತರನ್ನು ಕೃಷ್ಣಾಪುರ ಚಕ್ರವರ್ತಿ ಕ್ರೀಡಾಂಗಣ ಸಮೀಪದ ನಿವಾಸಿ, ಶೀಟ್ ಮೇಲ್ಛಾವಣಿ ನಿರ್ಮಾಣ ಗುತ್ತಿಗೆದಾರ ಭಾಸ್ಕರ ಎಂದು ಗುರುತಿಸಲಾಗಿದೆ.
ಕೃಷ್ಣಾಪುರ 6ನೇ ಬ್ಲಾಕ್ನಲ್ಲಿರುವ ವಸತಿ ಸಮುಚ್ಚಯವೊಂದರಲ್ಲಿ ತಗುಡು ಶೀಟ್ ಮೇಲ್ಛಾವಣಿ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಕಾಮಗಾರಿಯ ಭಾಗವಾಗಿ ಭಾಸ್ಕರ ಅವರು ಕಬ್ಬಿಣದ ರಾಡ್ ಬಳಸಿ ಅಳತೆ ತೆಗೆದುಕೊಳ್ಳುತ್ತಿದ್ದರು. ಈ ವೇಳೆ ಕಬ್ಬಿಣದ ರಾಡ್ ಅನ್ನು ಕಂಕುಳಲ್ಲಿಟ್ಟುಕೊಂಡು ತಿರುಗುತ್ತಿದ್ದ ಸಂದರ್ಭದಲ್ಲಿ, ಕಟ್ಟಡದ ಪಕ್ಕದಲ್ಲೇ ಹಾದುಹೋಗಿದ್ದ ಹೈಟೆನ್ಷನ್ ವಿದ್ಯುತ್ ತಂತಿಗೆ ರಾಡ್ ಆಕಸ್ಮಿಕವಾಗಿ ಸ್ಪರ್ಶಿಸಿದೆ ಎನ್ನಲಾಗಿದೆ.
ವಿದ್ಯುತ್ ತಂತಿಗೆ ರಾಡ್ ತಾಗುತ್ತಿದ್ದಂತೆ ಭಾಸ್ಕರ ಅವರ ದೇಹದ ಮೂಲಕ ತೀವ್ರ ಪ್ರಮಾಣದ ವಿದ್ಯುತ್ ಪ್ರವಹಿಸಿದ್ದು, ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕ್ಷಣಾರ್ಧದಲ್ಲಿ ಸಂಭವಿಸಿದ ಈ ದುರ್ಘಟನೆಯಿಂದ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಘಟನೆಯ ಮಾಹಿತಿ ತಿಳಿದು ಸುರತ್ಕಲ್ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತ ಭಾಸ್ಕರ ಅವರ ಪುತ್ರ ನೀಡಿದ ದೂರಿನ ಆಧಾರದ ಮೇಲೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 04:49 pm
HK News Staffer
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
11-08-26 03:08 pm
HK News Staffer
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
11-08-26 01:04 pm
HK News Staffer
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am