ಬ್ರೇಕಿಂಗ್ ನ್ಯೂಸ್
23-08-26 05:20 pm HK News Staffer ಕ್ರೈಂ
ಹಾಸನ, ಆ.23: ಮೂರು ವರ್ಷದ ಮಗು ಆಟವಾಡುತ್ತ ನಿಲ್ಲಿಸಿದ್ದ ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ್ದರಿಂದ ಮಗುವನ್ನು ರಕ್ಷಿಸಲು ಹೋದ ತಂದೆಯ ಮೇಲೆಯೇ ಟ್ರ್ಯಾಕ್ಟರ್ ಚಕ್ರ ಹರಿದು ದಾರುಣವಾಗಿ ಸಾವನ್ನಪ್ಪಿದ ಘಟನೆ ಹೊಳೆನರಸೀಪುರ ಪಟ್ಟಣದ ಕೋಟೆ ಒಕ್ಕಲಿಗರ ಬೀದಿಯಲ್ಲಿ ನಡೆದಿದೆ.
ಕೆಎಸ್ಆರ್ಟಿಸಿ ಅರಕಲಗೂಡು ಘಟಕದಲ್ಲಿ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದ ಯಶ್ವಂತ್ (37) ಮೃತಪಟ್ಟ ದುರ್ದೈವಿ. ವರ ಮಹಾಲಕ್ಷ್ಮೀ ಹಬ್ಬದ ಶುಭ ದಿನದಂದು ತಮ್ಮ ನೂತನ ಮನೆ ನಿರ್ಮಾಣದ ಆರ್ಸಿಸಿ ಕೆಲಸಕ್ಕಾಗಿ ಟ್ರಾಕ್ಟರ್ನಲ್ಲಿ ಸೆಂಟ್ರಿಂಗ್ ಸಾಮಗ್ರಿಗಳನ್ನು ತರಿಸಲಾಗಿತ್ತು. ಈ ವೇಳೆ ಯಶ್ವಂತ್ ಅವರು ಅಳುತ್ತಾ ಬಂದ ತನ್ನ ಮೂರು ವರ್ಷದ ಮಗುವನ್ನು ಆಟವಾಡಿಸುತ್ತಾ ಟ್ರ್ಯಾಕ್ಟರ್ ಸೀಟ್ ಮೇಲೆ ಕೂರಿಸಿದ್ದರು.
ಟ್ರ್ಯಾಕ್ಟರ್ ಮೇಲೆ ಆಟವಾಡುತ್ತಿದ್ದ ಮಗು ಏಕಾಏಕಿ ಕೀ ಆನ್ ಮಾಡಿದ್ದರಿಂದ ಟ್ರ್ಯಾಕ್ಟರ್ ಸಡನ್ ಆಗಿ ಮುಂದಕ್ಕೆ ಚಲಿಸಿದೆ. ಇದರಿಂದ ಮಗು ಕೆಳಗೆ ಬಿದ್ದು ಗಾಯಗೊಳ್ಳಬಹುದು ಎಂಬ ಗಾಬರಿಯಲ್ಲಿ, ಅಲ್ಲಿಯೇ ಪಕ್ಕದಲ್ಲಿ ನಿಂತಿದ್ದ ಯಶವಂತ್, ಮಗುವನ್ನು ರಕ್ಷಿಸಲು ಧಾವಿಸಿದ್ದಾರೆ. ಆದರೆ ಟ್ರಾಕ್ಟರ್ ಕೈಗೆ ಸಿಗದೆ ಯಶ್ವಂತ್ ಬಿದ್ದಿದ್ದು ಅವರ ಮೇಲೆಯೇ ಟ್ರ್ಯಾಕ್ಟರ್ ಚಕ್ರ ಹರಿದಿದೆ. ತೀವ್ರ ಗಾಯಗೊಂಡಿದ್ದ ಯಶ್ವಂತ್ ಅವರನ್ನು ತಕ್ಷಣವೇ ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಿಸದೇ ಅವರು ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕೆ ಹೊಳೆನರಸೀಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm