ಬ್ರೇಕಿಂಗ್ ನ್ಯೂಸ್
28-08-26 07:40 pm HK News Staffer ಕ್ರೈಂ
ಭೋಪಾಲ್, ಆಗಸ್ಟ್ 28: ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯ ಬಿಯೋರಾ ನಗರದಲ್ಲಿ ಶುಕ್ರವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪ್ರಯಾಣಿಕರ ಬಸ್ ನಿಯಂತ್ರಣ ತಪ್ಪಿ ಸುಮಾರು 30 ಅಡಿ ಎತ್ತರದ ಸೇತುವೆಗೆ ಡಿಕ್ಕಿ ಹೊಡೆದು ಕೆಳಗೆ ಉರುಳಿದೆ. ಅಪಘಾತದಲ್ಲಿ ಬೆಂಗಳೂರು ಸೈಬರ್ ಕ್ರೈಂ ತಂಡದ ಇನ್‌ಸ್ಪೆಕ್ಟರ್ ಸೇರಿದಂತೆ ನಾಲ್ವರು ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದೆ.
ಬೆಂಗಳೂರಿನಿಂದ ಇಂದೋರ್‌ಗೆ ತೆರಳುತ್ತಿದ್ದ ಬಸ್ ಭೋಪಾಲ್ ಬೈಪಾಸ್‌ನ ಸೇತುವೆ ಬಳಿ ನಿಯಂತ್ರಣ ಕಳೆದುಕೊಂಡು ಸೇತುವೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್‌ನಲ್ಲಿದ್ದ ಕೆಲವರು ಹೊರಕ್ಕೆ ಎಸೆಯಲ್ಪಟ್ಟು ಸುಮಾರು 30 ಅಡಿ ಕೆಳಗಿನ ಸರ್ವಿಸ್ ರಸ್ತೆಗೆ ಬಿದ್ದಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ರಕ್ಷಿಸಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸೈಬರ್ ಕ್ರೈಂ ತಂಡಕ್ಕೆ ಭಾರಿ ಆಘಾತ;
ಅಪಘಾತದಲ್ಲಿ ಬೆಂಗಳೂರಿನ ಸೈಬರ್ ಕ್ರೈಂ ತಂಡದ ಇನ್‌ಸ್ಪೆಕ್ಟರ್ ರವಿ ಕೆ.ವಿ. ಮೃತಪಟ್ಟಿದ್ದಾರೆ. ಅವರೊಂದಿಗೆ ಬಸ್ ಚಾಲಕ ವಿಕಾಸ್ ಶುಕ್ಲಾ, ಬೆಲಾಲ್ ಅಲಿ ಹಾಗೂ ಜ್ಯೋತಿರಾದಿತ್ಯ ಸಿಂಗ್ ಗೌಡ್ ಮೃತಪಟ್ಟಿದ್ದಾರೆ.
ಸೈಬರ್ ಕ್ರೈಂ ತಂಡದ ಸಬ್‌ಇನ್‌ಸ್ಪೆಕ್ಟರ್ ರಮೇಶ್ ನಾಯಕ್, ಎಎಸ್‌ಐ ಶ್ರೀನಿವಾಸ್ ಹಾಗೂ ತಾಂತ್ರಿಕ ಸಿಬ್ಬಂದಿ ವಿಶ್ವನಾಥ್ ಗಾಯಗೊಂಡಿದ್ದಾರೆ. ಈ ಪೈಕಿ ಶ್ರೀನಿವಾಸ್ ಅವರ ಸ್ಥಿತಿ ಗಂಭೀರವಾಗಿದೆ.

ಆರೋಪಿಯ ಹುಡುಕಾಟಕ್ಕೆ ತೆರಳಿದ್ದ ಪೊಲೀಸ್ ತಂಡ ;
ಬೆಂಗಳೂರು ಸೈಬರ್ ಕ್ರೈಂ ತಂಡವು ಆರೋಪಿಯೊಬ್ಬನನ್ನು ಪತ್ತೆಹಚ್ಚುವ ಕಾರ್ಯಾಚರಣೆಗಾಗಿ ಮಧ್ಯಪ್ರದೇಶಕ್ಕೆ ತೆರಳುತ್ತಿತ್ತು ಎನ್ನಲಾಗಿದೆ. ಇದೇ ವೇಳೆ ಬಸ್ ಅಪಘಾತಕ್ಕೀಡಾಗಿದೆ. ಪೊಲೀಸರ ಪ್ರಕಾರ, ಬಸ್ ನಿಯಂತ್ರಣ ತಪ್ಪಿರುವುದೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 07:40 pm
HK News Staffer
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm