ಬ್ರೇಕಿಂಗ್ ನ್ಯೂಸ್
09-01-21 12:03 pm Headline Karnataka News Network ಕ್ರೈಂ
ಮುಂಬೈ, ಜ.9 : ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಸುಮಾರು 10 ನವಜಾತ ಶಿಶುಗಳು ಮೃತಪಟ್ಟ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಈ ದುರಂತ ಬಾಂದ್ರಾದ ಜಿಲ್ಲಾ ಜನರಲ್ ಆಸ್ಪತ್ರೆಯಲ್ಲಿ ನಸುಕಿನ ಜಾವ ಸುಮಾರು 2 ಗಂಟೆಗೆ ನಡೆದಿದೆ. ಮೃತಪಟ್ಟ 10 ಶಿಶುಗಳು ಕೂಡ ಎಸ್‍ಎನ್‍ಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದವು.

ಆಸ್ಪತ್ರೆಯಲ್ಲಿ ಇದ್ದ ಅಗ್ನಿ ಶಾಮಕ ಸಾಧನಗಳನ್ನು ಬಳಸಿಕೊಂಡು ಸಿಬ್ಬಂದಿ ಬೆಂಕಿ ಆರಿಸಲು ಪ್ರಯತ್ನಿಸಿದರು. ಇಡೀ ಆಸ್ಪತ್ರೆ ತುಂಬ ಹೊಗೆ ಆವರಿಸಿತ್ತು. ಈ ದುರಂತದ ಬಗ್ಗೆ ಆಸ್ಪತ್ರೆ ಸಿಬ್ಬಂದಿ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ರಕ್ಷಿಸಲಾದ ಮಕ್ಕಳನ್ನು ಬೇರೆ ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ.
ಇದಲ್ಲದೆ ಸಮೀಪದ ಐಸಿಯು ವಾರ್ಡ್, ಡಯಾಲಿಸಿಸ್ ವಾರ್ಡ್ ಮತ್ತು ಹೆರಿಗೆ ವಾರ್ಡ್‌ಗಳಲ್ಲಿದ್ದ ರೋಗಿಗಳನ್ನು ಕೂಡ ಸುರಕ್ಷತೆಗಾಗಿ ಆಸ್ಪತ್ರೆಯ ಬೇರೆ ವಾರ್ಡ್‌ಗಳಿಗೆ ಕೂಡಲೇ ಸ್ಥಳಾಂತರಿಸಲಾಯಿತು. ಶಾರ್ಟ್ ಸರ್ಕ್ಯೂಟ್ ಈ ಅವಘಡಕ್ಕೆ ಕಾರಣ ಎನ್ನಲಾಗಿದ್ದರೂ, ಅದರ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಘಟಕದಲ್ಲಿದ್ದ ಎಲ್ಲ ಮಕ್ಕಳೂ ಒಂದು ತಿಂಗಳಿನಿಂದ ಮೂರು ತಿಂಗಳ ವಯಸ್ಸಿನವರಾಗಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಅಲ್ಲಿಗೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ರಾಜಧಾನಿ ಮುಂಬೈನಿಂದ ಭಂಡಾರಾ ಸುಮಾರು 900 ಕಿಮೀ ದೂರದಲ್ಲಿದೆ.
ಈ ಘಟನೆ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಆರೋಗ್ಯ ಸಚಿವ ರಾಜೇಶ್ ತೋಪ್, ಭಂಡಾರಾ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಜತೆಗೆ ಮಾತನಾಡಿದ್ದು, ತನಿಖೆಗೆ ಆದೇಶ ನೀಡಿದ್ದಾರೆ.
Ten newborn babies on Saturday died in a fire at the Sick Newborn Care Unit (SNCU) at Bhandara District General Hospital in Maharashtra.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 04:54 pm
HK News Staffer
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm