ಬ್ರೇಕಿಂಗ್ ನ್ಯೂಸ್
02-09-26 10:37 am HK News Staffer ಕ್ರೈಂ
ಮಂಗಳೂರು, ಸೆ 02: ಕೇರಳಂ ಲಾಟರಿ ಚೀಟಿಯಲ್ಲಿ 8 ಲಕ್ಷ ರೂಪಾಯಿ ಬಹುಮಾನ ಬಂದಿದೆ ಎಂದು ನಂಬಿಸಿ, ತೆರಿಗೆ ಶುಲ್ಕದ ನೆಪದಲ್ಲಿ ವ್ಯಕ್ತಿಯೊಬ್ಬರಿಂದ ಹಂತ-ಹಂತವಾಗಿ 3.81 ಲಕ್ಷ ರೂಪಾಯಿ ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ಮಂಗಳೂರಿನ ಸಿಇಎನ್ (CEN) ಅಪರಾಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂದು ಮಂಗಳೂರು ನಗರ ಪೊಲೀಸ್ ಪ್ರಕಟಣೆ ತಿಳಿಸಿದೆ.
ದಿನಾಂಕ 14-08-2026 ರಂದು 42 ವರ್ಷದ ದೂರುದಾರರ ಮೊಬೈಲ್ ಸಂಖ್ಯೆಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ, ನಿಮ್ಮ ಹೆಸರಿಗೆ 8,00,000 ರೂ. ಮೌಲ್ಯದ ಕೇರಳ ಲಾಟರಿ ಬಹುಮಾನ ಬಂದಿದೆ ಎಂದು ನಂಬಿಸಿದ್ದಾನೆ. ಆ ಬಹುಮಾನದ ಹಣವನ್ನು ಪಡೆಯಲು ತೆರಿಗೆ ಪಾವತಿಸಬೇಕೆಂದು ತಿಳಿಸಿದ್ದಾನೆ.
ಇದನ್ನು ಸತ್ಯವೆಂದು ನಂಬಿದ ದೂರುದಾರರು, ಅಪರಿಚಿತ ವ್ಯಕ್ತಿಗಳು ವಾಟ್ಸಾಪ್ ಮೂಲಕ ಕಳುಹಿಸಿದ ಗೂಗಲ್ ಪೇ ಹಾಗೂ ಫೋನ್ ಪೇ ಕ್ಯೂಆರ್ ಕೋಡ್ ಸ್ಕ್ಯಾನರ್‌ಗಳಿಗೆ ದಿನಾಂಕ 15-08-2026 ರಿಂದ 26-08-2026 ರ ಅವಧಿಯಲ್ಲಿ ಹಂತ-ಹಂತವಾಗಿ ಒಟ್ಟು 3,81,300 ರೂಪಾಯಿ ಹಣವನ್ನು ವರ್ಗಾಯಿಸಿದ್ದಾರೆ.
ಬಳಿಕ ಮತ್ತೊಂದು ಮೊಬೈಲ್ ಸಂಖ್ಯೆಯಿಂದ ಕರೆ ಮಾಡಿದ ವಂಚಕರು, ಲಾಟರಿ ಹಣ ಡಬಲ್ ಆಗಿದೆ ಎಂದು ನಂಬಿಸಿ ಮತ್ತೆ ತೆರಿಗೆ ಹಣ ಕಟ್ಟುವಂತೆ ಒತ್ತಾಯಿಸಿದ್ದಾರೆ. ಇದರಿಂದ ಅನುಮಾನಗೊಂಡ ದೂರುದಾರರು ಇದೊಂದು ಸೈಬರ್ ವಂಚನೆ ಜಾಲವೆಂದು ಅರಿತು, ತಕ್ಷಣವೇ ಸೈಬರ್ ಹೆಲ್ಪ್‌ಲೈನ್ 1930ಗೆ ಕರೆ ಮಾಡಿ ದೂರು ದಾಖಲಿಸಿದ್ದಾರೆ.
ಕಳೆದುಹೋದ ಹಣ ಮರಳಿ ಬರಬಹುದೆಂದು ಕಾದಿದ್ದ ದೂರುದಾರರಿಗೆ ಯಾವುದೇ ಹಣ ವಾಪಸ್ ಬಾರದ ಕಾರಣ, ಸಿಇಎನ್ ಅಪರಾಧ ಪೊಲೀಸ್ ಠಾಣೆಗೆ ತೆರಳಿ ವಂಚಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಲಿಖಿತ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಸಿಇಎನ್ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm