ಬ್ರೇಕಿಂಗ್ ನ್ಯೂಸ್
02-09-26 07:12 pm HK News Staffer ಕ್ರೈಂ
ಬೆಂಗಳೂರು , ಸೆ.2: ಕಾಲೇಜು ವಿದ್ಯಾರ್ಥಿಯೊಬ್ಬರನ್ನು ಕಾರಿನಲ್ಲಿ ಅಪಹರಿಸಿ, ಚಲಿಸುತ್ತಿದ್ದ ವಾಹನದಲ್ಲೇ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಸ್ಯಾಂಡಲ್‌ವುಡ್ ನಟ ದುನಿಯಾ ವಿಜಯ್ ಅವರ ಪುತ್ರ ಸಾಮ್ರಾಟ್ ವಿಜಯ್ ಸೇರಿದಂತೆ ಐವರ ವಿರುದ್ಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಹಲ್ಲೆಗೊಳಗಾಗಿರುವ ಮನೀಶ್ ಗೌಡ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಾಮ್ರಾಟ್ ವಿಜಯ್, ಸಮೃದ್ಧ್ ಸಿಂಹ, ವಿಶ್ವಾಸ್ ಸುಚಿ, ಸ್ಕಂದ ವೆಂಕಟೇಶ್ ಹಾಗೂ ಸಮೀದ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಓವರ್‌ಟೇಕ್ ವಿಚಾರದಲ್ಲಿ ಆರಂಭವಾಗಿದ್ದ ಕಿರಿಕ್
ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಸಾಮ್ರಾಟ್ ವಿಜಯ್ ಸೋಮವಾರ (ಆ.31) ಸ್ನೇಹಿತರೊಂದಿಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಅದೇ ಕಾಲೇಜಿನ ವಿದ್ಯಾರ್ಥಿ ಮನೀಶ್ ಗೌಡ ಹಾಗೂ ಆತನ ಸ್ನೇಹಿತರು ಮತ್ತೊಂದು ಕಾರಿನಲ್ಲಿ ಸಾಮ್ರಾಟ್ ಪ್ರಯಾಣಿಸುತ್ತಿದ್ದ ಕಾರನ್ನು ಓವರ್‌ಟೇಕ್ ಮಾಡಿ ರೇಗಿಸಿದ್ದರು ಎನ್ನಲಾಗಿದೆ.
ಈ ವಿಚಾರಕ್ಕೆ ಸಂಬಂಧಿಸಿ ಎರಡೂ ಗುಂಪುಗಳ ನಡುವೆ ಕಿರಿಕ್ ಆರಂಭವಾಗಿತ್ತು. ಓವರ್‌ಟೇಕ್ ಮಾಡಿದ ವಿಚಾರಕ್ಕೆ ಸಾಮ್ರಾಟ್ ವಿಜಯ್ ಮನೀಶ್ ವಿರುದ್ಧ ತೀವ್ರ ಆಕ್ರೋಶಗೊಂಡಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಬೈಕ್ ಪಾರ್ಕ್ ಮಾಡುತ್ತಿದ್ದಾಗ ಕಾರಿನಲ್ಲಿ ಎಳೆದೊಯ್ದರು
ಮಂಗಳವಾರ (ಸೆ.1) ಮಧ್ಯಾಹ್ನ ಸುಮಾರು 12 ಗಂಟೆಗೆ ಮನೀಶ್ ಗೌಡ ಕಾಲೇಜು ಆವರಣದಲ್ಲಿ ತಮ್ಮ ಬೈಕ್ ಪಾರ್ಕ್ ಮಾಡುತ್ತಿದ್ದರು. ಈ ವೇಳೆ ಬಿಳಿ ಬಣ್ಣದ ಸಫಾರಿ ಕಾರಿನಲ್ಲಿ ಬಂದ ಸಾಮ್ರಾಟ್ ವಿಜಯ್ ಹಾಗೂ ಅವರ ಸ್ನೇಹಿತರು ಮನೀಶ್ ಅವರನ್ನು ಬಲವಂತವಾಗಿ ಕಾರಿನೊಳಗೆ ಎಳೆದೊಯ್ದಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬಳಿಕ ಕಾರನ್ನು ಪಟ್ಟಣಗೆರೆ ಮುಖ್ಯ ರಸ್ತೆಯತ್ತ ಚಲಾಯಿಸಿಕೊಂಡು ಹೋಗಲಾಗಿದ್ದು, ಚಲಿಸುತ್ತಿದ್ದ ಕಾರಿನಲ್ಲೇ ಮನೀಶ್ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮುಖ, ಕುತ್ತಿಗೆ, ಎದೆ ಹಾಗೂ ತಲೆಗೆ ಹಲ್ಲೆ ;
ಸಾಮ್ರಾಟ್ ವಿಜಯ್, ಸಮೃದ್ಧ್ ಸಿಂಹ, ವಿಶ್ವಾಸ್, ವೆಂಕಟೇಶ್, ಸಮೀದ್ ಸೇರಿದಂತೆ ಇತರರು ಮನೀಶ್ ಅವರ ಮುಖ, ಕುತ್ತಿಗೆ, ಎದೆ ಹಾಗೂ ತಲೆಯ ಭಾಗಕ್ಕೆ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬಳಿಕ ಮನೀಶ್ ಅವರನ್ನು ನಡುರಸ್ತೆಯಲ್ಲಿ ಬಿಟ್ಟು ಆರೋಪಿಗಳು ಸ್ಥಳದಿಂದ ತೆರಳಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಹಲ್ಲೆಯಿಂದ ಗಾಯಗೊಂಡ ಮನೀಶ್ ಗೌಡ ಕೆಂಗೇರಿ ಪೊಲೀಸ್ ಠಾಣೆಗೆ ತೆರಳಿ ಸಾಮ್ರಾಟ್ ವಿಜಯ್ ಹಾಗೂ ಅವರ ಸ್ನೇಹಿತರ ವಿರುದ್ಧ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಘಟನೆಗೆ ಸಂಬಂಧಿಸಿದಂತೆ ತನಿಖೆ ಮುಂದುವರಿಸಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm