ಬ್ರೇಕಿಂಗ್ ನ್ಯೂಸ್
07-09-26 08:56 pm HK News Staffer ಕ್ರೈಂ
ಬೆಂಗಳೂರು, ಸೆ 07: ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವೈದ್ಯರೊಬ್ಬನ ವಿರುದ್ಧ ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಸಹಕಾರ ನಗರದಲ್ಲಿನ ಡಯಾಗ್ನಾಸ್ಟಿಕ್ ಸೆಂಟರ್ವೊಂದರಲ್ಲಿ ವೈದ್ಯರಾಗಿರುವ ಯುವರಾಜ್ ಮನೋಹರ್ ವಿರುದ್ಧ ಆರೋಪ ಕೇಳಿ ಬಂದಿದ್ದು, 30 ವರ್ಷದ ಸಂತ್ರಸ್ತ ಯುವತಿ ನೀಡಿರುವ ದೂರಿನನ್ವಯ ಅತ್ಯಾಚಾರ ಮತ್ತು ಬೆದರಿಕೆ ಕಾಯ್ದೆಗಳು ಹಾಗೂ ಪರಿಶಿಷ್ಟ ಜಾತಿ & ಪಂಗಡಗಳ ವಿರುದ್ಧದ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತ ಯುವತಿಯೂ ಅದೇ ಡಯಾಗ್ನಾಸ್ಟಿಕ್ ಸೆಂಟರ್ನಲ್ಲಿ ಕೆಲಸ ಮಾಡುತ್ತಿದ್ದಳು. ಕಳೆದ ವರ್ಷ ಡಿಸೆಂಬರ್ 15ರಂದು ಬೆಳಗ್ಗೆ ಕಚೇರಿಯಲ್ಲಿದ್ದಾಗ ಫೈಲ್ಗಳನ್ನ ಹುಡುಕುವ ನೆಪದಲ್ಲಿ ಡಯಾಗ್ನಾಸ್ಟಿಕ್ ಸೆಂಟರ್ನ ಮೊದಲನೇ ಮಹಡಿಗೆ ಕರೆದೊಯ್ದಿದ್ದ ಆರೋಪಿ ಮುಖಕ್ಕೆ ಪೆಪ್ಪರ್ ಸ್ಪ್ರೇ ಹೊಡೆದಿದ್ದಾನೆ. ಅಸ್ವಸ್ಥಗೊಂಡು ಪ್ರಜ್ಞೆ ಕಳೆದುಕೊಂಡಾಗ ಅತ್ಯಾಚಾರ ಎಸಗಿ, ಇಡೀ ಕೃತ್ಯವನ್ನು ಮೊಬೈಲ್ನಲ್ಲಿ ವಿಡಿಯೋ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಎಚ್ಚರಗೊಂಡ ಬಳಿಕ ಕೃತ್ಯದ ಬಗ್ಗೆ ಪ್ರಶ್ನಿಸಿದಾಗ, 'ತಾನು ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ' ಬೆದರಿಸಿದ್ದಾನೆ. ಬಳಿಕ ಅಮೃತನಗರದಲ್ಲಿ ಬಾಡಿಗೆ ಮನೆ ಮಾಡಿಕೊಟ್ಟು ತನ್ನ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ವರ್ಷ ಜುಲೈ 2ರಂದು ತನ್ನ ಜಾತಿಯ ಬಗ್ಗೆ ತಿಳಿದ ನಂತರ ಅವ್ಯಾಚ್ಯ ಶಬ್ದಗಳಿಂದ ಜಾತಿ ನಿಂದನೆ ಮಾಡಿ, ಇನ್ಮುಂದೆ ಕೆಲಸಕ್ಕೆ ಬರಬಾರದೆಂದು ಬೆದರಿಕೆ ಹಾಕಿ ಕಳುಹಿಸಿದ್ದಾನೆ ಎಂದು ಸಂತ್ರಸ್ತೆ ತನ್ನ ದೂರಿನಲ್ಲಿ ಆರೋಪಿಸಿದ್ದಾಳೆ.
ಸಂತ್ರಸ್ತೆ ನೀಡಿರುವ ದೂರಿನನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
30-10-26 08:26 pm
HK News
ಸ್ಟಿಂಗ್ ಪ್ರಕರಣಕ್ಕೆ ಟ್ವಿಸ್ಟ್ ; ಕೇಂದ್ರ ಸಚಿವ ಕುಮ...
30-10-26 05:15 pm
ರಾಜ್ಯದ ಜನತೆಗೆ ಮತ್ತೆ ದರ ಏರಿಕೆ ಶಾಕ್ ; ನಂದಿನಿ ಹಾ...
29-10-26 08:21 pm
'ಮೈಸೂರು ಅರಮನೆ ಸರ್ಕಾರಕ್ಕೆ ಸೇರಿದ್ದು' ತನ್ನ ಹೇಳಿಕ...
28-10-26 10:52 pm
ವಿಧಾನ ಪರಿಷತ್ತಿನ ನಾಲ್ಕು ಸ್ಥಾನಕ್ಕೆ ಚುನಾವಣೆ ; ನಾ...
27-10-26 09:47 pm
29-10-26 09:28 pm
HK News Staffer
ಆಡಳಿತ ಬದಲಾವಣೆ ಉದ್ದೇಶದ ಹಿಂಸಾತ್ಮಕ ಪ್ರತಿಭಟನೆಗಳಲ್...
29-10-26 08:23 pm
'ಮೋದಿ ಅಪ್ಪನೂ ಜೈಲಿಗೆ ಹೋಗಬೇಕಾಗುತ್ತೆ!' ; ವಿವಾದಕ್...
25-10-26 09:40 pm
ಹಿಂದೂ ರಾಷ್ಟ್ರ ಎಂದರೆ ಮುಸ್ಲಿಮರನ್ನು ಹೊರಗಿಡುವುದಲ್...
21-10-26 04:21 pm
ಫ್ರಾನ್ಸ್, ಬಾಂಗ್ಲಾ ರೀತಿ ಭಾರತದಲ್ಲಿ ಆಗೋದು ಸಾಧ್ಯವ...
20-10-26 01:18 pm
30-10-26 12:51 pm
HK News Staffer
ಸೌಜನ್ಯಾ ಪ್ರಕರಣ ತನಿಖೆಯಲ್ಲಿ ಭಾಗಿಯಾಗಿದ್ದ ಎಲ್ಲ ಪೊ...
30-10-26 12:19 pm
UPSCಯಲ್ಲಿ 42ನೇ ರ್ಯಾಂಕ್ನಿಂದ ರಫೇಲ್ ಪೈಲಟ್ ವರೆ...
30-10-26 12:16 pm
ಕುಸುಮಾವತಿಯೇ, ಇಂದಿರಾವತಿಯೇ ? ಸರ್ಕಾರಿ ಜಮೀನು ಅಕ್ರ...
29-10-26 08:19 pm
ಸೌಜನ್ಯಾ ಕೊಲೆ ಪ್ರಕರಣದ ಮರುತನಿಖೆ ; ಪಿಎಸ್ಐ ಯೋಗೀಶ್...
29-10-26 02:12 pm
30-10-26 11:01 pm
HK News Staffer
Cyprian Pinto, Mangalore: 50ಕ್ಕೂ ಹೆಚ್ಚು ಬಾಲಕರ...
30-10-26 09:57 pm
ಆನ್ಲೈನಲ್ಲಿ ಕೇರಳ ಲಾಟರಿ ಗೆದ್ದ ಮಂಗಳೂರಿನ ವ್ಯಕ್ತಿಗ...
30-10-26 05:16 pm
ಉತ್ತರಾಖಂಡದಲ್ಲಿ ಭೀಕರ ಹೆಲಿಕಾಪ್ಟರ್ ದುರಂತ: ಬೆಂಗಳೂ...
30-10-26 05:13 pm
ಶಿವಮೊಗ್ಗದಿಂದ ಮಂಗಳೂರಿಗೆ 1.15 ಕೋಟಿ ನಗದು ರವಾನೆ ;...
29-10-26 11:02 pm