ಬ್ರೇಕಿಂಗ್ ನ್ಯೂಸ್
09-09-26 08:16 pm HK News Staffer ಕ್ರೈಂ
ಮಂಗಳೂರು, ಸೆ 09: ಕಳವು ಪ್ರಕರಣವೊಂದಕ್ಕೆ ಸಂಬಂಧಿಸಿ ಕಳೆದ ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಹಿಳೆಯನ್ನು ಕಾವೂರು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬಂಧಿತೆಯನ್ನು ಮಂಗಳೂರು ಆಕಾಶಭವನದ ಆನಂದನಗರ ನಿವಾಸಿ ಲತಾ ಮಾರಿಯಾ (44) ಎಂದು ಪೊಲೀಸರು ತಿಳಿಸಿದ್ದಾರೆ.
ಐದು ವರ್ಷಗಳ ಹಿಂದೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಲತಾ ಮಾರಿಯಾ ಕಳವು ನಡೆಸಿದ್ದಳು ಎನ್ನಲಾಗಿದೆ. ಬಳಿಕ ಪೊಲೀಸರಿಗೆ ಸಿಗದೆ ಹಾಗೂ ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೂ ಹಾಜರಾಗದೆ ತಲೆಮರೆಸಿಕೊಂಡಿದ್ದಳು.
ಆಕೆಯ ಬಂಧನವಾಗದೆ ಪ್ರಕರಣ ಮುಂದುವರಿದ ಹಿನ್ನೆಲೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿ ನ್ಯಾಯಾಲಯ ಲತಾ ಮಾರಿಯಾ ವಿರುದ್ಧ ಬಂಧನ ವಾರಂಟ್ ಹೊರಡಿಸಿತ್ತು.
ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಚುರುಕುಗೊಳಿಸಿದ ಕಾವೂರು ಪೊಲೀಸರು, ಮಂಗಳೂರು ನಗರದ ಜ್ಯೋತಿನಗರದಲ್ಲಿ ಲತಾ ಮಾರಿಯಾಳನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ಬಂಧನದ ಬಳಿಕ ಆಕೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಕಾವೂರು ಪೊಲೀಸರು ಮಾಹಿತಿ ನೀಡಿದ್ದಾರೆ.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
09-09-26 09:04 pm
HK News Staffer
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
09-09-26 08:16 pm
HK News Staffer
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm
ಹೆಂಡತಿ ಅಡುಗೆ ಮಾಡಲ್ಲ, ಅತಿಯಾಗಿ ಮೊಬೈಲ್ ಫೋನ್ ಬಳಸು...
09-09-26 06:20 pm
8 ತಿಂಗಳ ಬಳಿಕ ನಾಪತ್ತೆಯಾಗಿದ್ದ ಬೆಂಗಳೂರು ಪಿಯು ವಿದ...
09-09-26 12:16 pm