ಬ್ರೇಕಿಂಗ್ ನ್ಯೂಸ್
10-09-26 02:18 pm HK News Staffer ಕ್ರೈಂ
ಬೈಂದೂರು , ಸೆ.10: ಅಪಘಾತಕ್ಕೀಡಾಗಿದ್ದ ವಾಹನವೊಂದನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದ್ದ ವೇಳೆ ಹೆದ್ದಾರಿಯಲ್ಲಿ ಸಂಭವಿಸಿದ ಸರಣಿ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟ ದಾರುಣ ಘಟನೆ ಬೈಂದೂರು ತಾಲೂಕಿನ ಶಿರೂರು ಸಮೀಪ ಗುರುವಾರ ನಡೆದಿದೆ.
ಮೃತರನ್ನು ಶಿರೂರಿನ ನಾಗೇಂದ್ರ ಮಹಾಲೆ (45) ಎಂದು ಗುರುತಿಸಲಾಗಿದೆ.
ಹೆದ್ದಾರಿಯಲ್ಲಿ ಸರಕು ತುಂಬಿದ್ದ ಲಾರಿಯೊಂದು ಈ ಹಿಂದೆ ಅಪಘಾತಕ್ಕೀಡಾಗಿತ್ತು. ಈ ಲಾರಿಯನ್ನು ತೆರವುಗೊಳಿಸುವ ಹಿನ್ನೆಲೆಯಲ್ಲಿ ಹೆದ್ದಾರಿ ನಿರ್ವಹಣಾ ಸಿಬ್ಬಂದಿ ರಸ್ತೆ ಸಂಚಾರಕ್ಕೆ ತಾತ್ಕಾಲಿಕವಾಗಿ ತಡೆ ಒಡ್ಡಿದ್ದರು. ವಾಹನಗಳ ಸಂಚಾರ ನಿಯಂತ್ರಣಕ್ಕಾಗಿ ಸ್ಥಳದಲ್ಲಿ ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿತ್ತು. ಈ ವೇಳೆ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಮತ್ತೊಂದು ಲಾರಿ ಚಾಲಕನ ನಿಯಂತ್ರಣ ತಪ್ಪಿ ನಿಲ್ಲಿಸಲಾಗಿದ್ದ ಹೈವೇ ಪಟ್ರೋಲ್ ಪೊಲೀಸರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ನಿಯಂತ್ರಣ ತಪ್ಪಿದ ಲಾರಿ ರಸ್ತೆಯಲ್ಲಿದ್ದ ನಾಲ್ಕು ಬೈಕ್ಗಳಿಗೂ ಡಿಕ್ಕಿ ಹೊಡೆದಿದೆ.
ಈ ಸರಣಿ ಅಪಘಾತದಲ್ಲಿ ಬೈಕ್ ಸವಾರ ನಾಗೇಂದ್ರ ಮಹಾಲೆ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಇಳಿಜಾರು ರಸ್ತೆಯಾಗಿದ್ದರಿಂದ ಲಾರಿ ಅತಿವೇಗವಾಗಿ ಬಂದಿದ್ದು, ಚಾಲಕನ ನಿಯಂತ್ರಣ ತಪ್ಪಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತಕ್ಕೆ ಕಾರಣವಾದ ಲಾರಿ ಕೇರಳದಿಂದ ರಬ್ಬರ್ ತುಂಬಿಕೊಂಡು ಮಹಾರಾಷ್ಟ್ರದ ಕಡೆಗೆ ಸಾಗುತ್ತಿತ್ತು ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿದು ವೃತ್ತ ನಿರೀಕ್ಷಕ ಸಂತೋಷ ಕಾಯ್ಕಿಣಿ ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ನಿಖರ ಕಾರಣ ಸೇರಿದಂತೆ ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.
ಈ ಸಂಬಂಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
10-09-26 10:27 am
HK News Staffer
ತುಳು ಮಂಗಳೂರಿಗರ ‘ರಾಷ್ಟ್ರಭಾಷೆ’ ; ಕರಾವಳಿಯ ಮೊದಲ ಸ...
09-09-26 09:04 pm
ಬಾರ್ಕೂರಿನಲ್ಲಿ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ;...
09-09-26 03:29 pm
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
10-09-26 02:18 pm
HK News Staffer
5 ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆಮರೆಸಿಕೊಂಡಿದ...
09-09-26 08:16 pm
ಬೆಳ್ಳಾರೆ ಸರ್ಕಾರಿ ಬಾಲಕಿಯರ ಹಾಸ್ಟೆಲ್ನಲ್ಲಿ ಬಟ್ಟೆ...
09-09-26 07:45 pm
ಮನದಲ್ಲೂ ಹುಲಿ, ಡಿಪಿಯಲ್ಲೂ ಹುಲಿ ; ಕೊನೆಗೆ ಅದೇ ಹುಲ...
09-09-26 07:44 pm
ಹೆಂಡತಿ ಅಡುಗೆ ಮಾಡಲ್ಲ, ಅತಿಯಾಗಿ ಮೊಬೈಲ್ ಫೋನ್ ಬಳಸು...
09-09-26 06:20 pm