ಬ್ರೇಕಿಂಗ್ ನ್ಯೂಸ್
11-09-26 06:38 pm HK News Staffer ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 11: ಕ್ರಿಪ್ಟೊ ಕರೆನ್ಸಿಯಲ್ಲಿ ಹೂಡಿಕೆ ಮಾಡಿದರೆ, ಅಧಿಕ ಲಾಭ ಕೊಡಿಸುವ ಆಮಿಷವೊಡ್ಡಿದ ಮಹಿಳೆ ಮತ್ತು ಆಕೆಯ ಸಹಚರರು, ವೈದ್ಯರೊಬ್ಬರಿಗೆ 4.47 ಕೋಟಿ ರೂ. ವಂಚಿಸಿದ್ದಾರೆ.
ದೊಡ್ಡ ದುನ್ನಸಂದ್ರ ನಿವಾಸಿ 50 ವರ್ಷದ ವೈದ್ಯರ ದೂರು ಆಧರಿಸಿ ಕೇಂದ್ರ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ. ಆಗಸ್ಟ್ ತಿಂಗಳಿನಲ್ಲಿ ಆಯುಷಿ ಶರ್ಮಾ ಎಂಬಾಕೆ ವಾಟ್ಸ್ ಆ್ಯಪ್ ಮೂಲಕ ವೈದ್ಯರನ್ನು ಸಂಪರ್ಕಿಸಿ ಕ್ರಿಪ್ಟೊ ವ್ಯವಹಾರದಲ್ಲಿ ಹಣ ಹೂಡಿದರೆ ಹೆಚ್ಚಿನ ಲಾಭ ಗಳಿಬಹುದೆಂದು ಹೇಳಿ, ಮಾಹಿತಿಗೆ ವಿಜಯ್ ಅನಂತ ಎಂಬುವರ ಮೊಬೈಲ್ ನಂಬರ್ ನೀಡಿದ್ದಳು.
ಅದರಂತೆ, ದೂರುದಾರರು ವಿಜಯ್‌ನನ್ನು ಸಂಪರ್ಕಿಸಿದಾಗ, ‘ಕ್ರಿಪ್ಟೊ ವ್ಯವಹಾರದಲ್ಲಿ ಹೆಚ್ಚಿನ ಲಾಭ ಗಳಿಸಿ ಕೊಡುತ್ತೇನೆ. ಅದಕ್ಕೆ ಶೇಕಡ 30ರಷ್ಟು ಲಾಭದ ಹಣವನ್ನು ಕಮಿಷನ್ ರೂಪದಲ್ಲಿ ಕೊಡಬೇಕು’ ಎಂದು ತಿಳಿಸಿ, ಕಾಯಿನ್ ಟಿಆರ್ಎಸ್ ಟ್ರಾನ್ಸಾಕ್ಷನ್ ಹೆಸರಿನ ವಾಟ್ಸ್ ಆ್ಯಪ್ ಗ್ರೂಪ್ಗೆ ಸೇರಿಸಿದ್ದ. ಈ ಗ್ರೂಪ್ನಲ್ಲಿ ಹೆಚ್ಚು ಲಾಭ ಮಾಡಿಕೊಂಡಿರುವವರ ಸ್ಕ್ರೀನ್ ಶಾಟ್ಗಳನ್ನು ಕಳುಹಿಸಿ ನಂಬಿಸಿದ್ದ ಎಂದು ದೂರುದಾರರು ತಿಳಿಸಿದ್ಧಾರೆ.
ವಂಚಕರ ಸೂಚನೆಯಂತೆ ಆಗಸ್ಟ್ 23ರಿಂದ ಸೆಪ್ಟೆಂಬರ್ 3ರವರೆಗೆ ಹಂತ ಹಂತವಾಗಿ ವಿವಿಧ ಬ್ಯಾಂಕ್ ಖಾತೆಗಳ ಮೂಲಕ ವೈದ್ಯರು ₹4.47 ಕೋಟಿ ಹಣ ವರ್ಗಾಯಿಸಿದ್ದರು. ನಕಲಿ ಕಾಯಿನ್ ಟಿಆರ್ಎಸ್ ಪ್ಲಾಟ್ ಫಾರ್ಮ್‌ನಲ್ಲಿ ಒಟ್ಟು ₹14 ಕೋಟಿ ಲಾಭ ಗಳಿಕೆಯಾಗಿದೆ ಎಂದು ವಂಚಕರು ಬಿಂಬಿಸಿದ್ದರು.
ಲಾಭಾಂಶ ಪಡೆಯಲು ಸಾಧ್ಯವಾಗದಿದ್ದಾಗ, ವಿಜಯ್ ಅನಂತ್ ಅವರನ್ನು ದೂರುದಾರರು ಸಂಪರ್ಕಿಸಿದ್ದರು. ಹಣ ವಾಪಸ್ ಪಡೆಯಲು ಹೆಚ್ಚಿನ ಹಣ ವರ್ಗಾಯಿಸಬೇಕೆಂದು ಬೇಡಿಕೆ ಇಟ್ಟಿದ್ದ. ತೆರಿಗೆ, ಕೆಲವು ಶುಲ್ಕ ಸೇರಿ ವಿವಿಧ ಕಾರಣಗಳನ್ನು ನೀಡಿ ಹೆಚ್ಚುವರಿ ಹಣಕ್ಕೆ ಒತ್ತಾಯಿಸಿದಾಗ ವಂಚನೆಗೆ ಒಳಗಾಗಿರುವುದು ವೈದ್ಯರಿಗೆ ಗೊತ್ತಾಗಿದೆ.
ತಕ್ಷಣ ಸೈಬರ್ ಕ್ರೈಂ ಸಹಾಯವಾಣಿಗೆ 1930ಕ್ಕೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಕೇಂದ್ರ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ವಂಚನೆಗೆ ಬಳಸಿದ ಬ್ಯಾಂಕ್ ಖಾತೆಗಳನ್ನು ತಾತ್ಕಾಲಿಕವಾಗಿ ‘ಫ್ರೀಜ್’ ಮಾಡಿ, ಆರೋಪಿಗಳ ಪತ್ತೆಗೆ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
11-09-26 10:58 pm
HK News Staffer
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
ದೈವದ ಚಿನ್ನ ಕಳ್ಳರ ಬಂಧನ ; ಕಲ್ಲಾಪು ಮಹಾಲಕ್ಷ್ಮಿ ಕ್...
11-09-26 03:51 pm
DC A B Ibrahim, SIR Notice: ಹೆಸರಿನಲ್ಲಿ ತಪ್ಪಿದ...
11-09-26 01:56 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm