ಬ್ರೇಕಿಂಗ್ ನ್ಯೂಸ್
12-09-26 07:41 pm HK News Staffer ಕ್ರೈಂ
ಬೆಂಗಳೂರು, ಸೆ.12: ಮನೆ ಕೆಲಸದಾಕೆಯನ್ನೂ ಬಿಡದೆ ಬೆದರಿಸಿ ಅತ್ಯಾಚಾರ ಎಸಗಿದ್ದಲ್ಲದೆ, ಅದರ ವಿಡಿಯೋ ರೆಕಾರ್ಡ್ ಮಾಡಿಟ್ಟು ಸಿಕ್ಕಿಬಿದ್ದು ಜೈಲು ಪಾಲಾಗಿರುವ ಪ್ರಜ್ವಲ್ ರೇವಣ್ಣ ಜೈಲಿನಲ್ಲಿದ್ದರೂ ತನ್ನ ಹಳೆಯ ಚಾಳಿಯನ್ನು ಬಿಟ್ಟಿಲ್ಲ. ಮೊಬೈಲ್ ಬಳಸುತ್ತಿದ್ದುದು ಮಾತ್ರವಲ್ಲದೆ, ಅಲ್ಲಿಯೂ ಪೆನ್ ಡ್ರೈವ್ ಬಳಸಿ ಅಶ್ಲೀಲ ವಿಡಿಯೋ ವೀಕ್ಷಿಸುತ್ತಿರುವುದು ಕಂಡುಬಂದಿದೆ.
ಮೊಬೈಲ್ ಬಳಸುತ್ತಿದ್ದ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಎಫ್‌ಎಸ್‌ಎಲ್ ವರದಿ ಸಿಕ್ಕಿದೆ. ಮೊಬೈಲ್ ಪರಿಶೀಲನೆಯಲ್ಲಿ ಹಲವು ವಿವರಗಳು ಪತ್ತೆಯಾಗಿದ್ದು, ಪೆನ್ ಡ್ರೈವ್ ನೋಡಿ ಸ್ವತಃ ಪೊಲೀಸರೇ ಶಾಕ್ ಆಗಿದ್ದಾರೆ. ಪ್ರಜ್ವಲ್ ಪೆನ್ ಡ್ರೈವ್ ನಲ್ಲಿ ಬರೋಬ್ಬರಿ 173 ಅಶ್ಲೀಲ ವೀಡಿಯೋಗಳು ಪತ್ತೆಯಾಗಿವೆ. ಅದರಲ್ಲಿ ಆತನದ್ದೇ 3 ವೀಡಿಯೊಗಳಿವೆ. ಸುಮಾರು ನೂರಕ್ಕೂ ಹೆಚ್ಚು ಅಶ್ಲೀಲ ವೀಡಿಯೋಗಳು ಪತ್ತೆಯಾಗಿದ್ದು, ತನ್ನದೇ ಆದ ವೀಡಿಯೊಗಳನ್ನು ವೀಕ್ಷಿಸಿ ವಿಕೃತ ಆನಂದ ಪಡ್ತಿದ್ನಾ ಎಂಬ ಅನುಮಾನ ವ್ಯಕ್ತವಾಗಿದೆ. ಇದರ ಜೊತೆಗೆ ಕೆಲವು ಮಹಿಳೆಯರ ಜೊತೆ ವೀಡಿಯೋ ಕಾಲ್ ಮಾಡಿರೋದು ಬೆಳಕಿಗೆ ಬಂದಿದೆ. ಇದಲ್ಲದೆ, ಪ್ರಜ್ವಲ್ ರೇವಣ್ಣಗೆ ಮೊಬೈಲ್ ತಲುಪಿಸಿದ್ದು ಜೈಲು ಸಿಬಂದಿಯೇ ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ.
ಇದೇ ಮೊಬೈಲ್ ಬಳಸಿ ಹಲವು ಯುವತಿಯರಿಗೆ ಕರೆ ಮಾಡಿದ್ದಾರೆ ಎನ್ನಲಾಗಿದೆ. ಮೊಬೈಲ್ ಪಡೆಯಲು ಒಂದು ಲಕ್ಷ ರೂ. ನೀಡಿದ್ದು, ಸಿಮ್ ಕಾರ್ಡ್‌ಗೆ 50 ಸಾವಿರ ಕೊಟ್ಟು ಖರೀದಿಸಿದ್ದಾರೆ ಎಂಬ ಮಾಹಿತಿ ಇದೆ. ಸದ್ಯ ಕೆಲವು ವೀಡಿಯೋಗಳು ಮಾತ್ರ ಎಫ್‌ಎಸ್‌ಎಲ್‌ನಿಂದ ರಿಟ್ರೀವ್ ಆಗಿವೆ. ವೀಡಿಯೋಗಳ ಆಧಾರದಲ್ಲಿ ಪ್ರಜ್ವಲ್ ಅನ್ನು ಮತ್ತೊಮ್ಮೆ ವಿಚಾರಣೆ ನಡೆಸುವ ಸಾಧ್ಯತೆಯಿದೆ. ವೀಡಿಯೋ ಕಾಲ್ ಮಾಡಿದ ಮಹಿಳೆಯರನ್ನು ಸಹ ನೋಟಿಸ್ ನೀಡಿ ವಿಚಾರಣೆ ಮಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಪರಪ್ಪನ ಅಗ್ರಹಾರ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ. ಈ ಹಿಂದೆ ಸಿಸಿಬಿ ದಾಳಿ ವೇಳೆ ಒಂದು ಮೊಬೈಲ್ ಮತ್ತು ಪೆನ್ ಡ್ರೈವ್ ಪತ್ತೆಯಾಗಿತ್ತು. ಪ್ರಜ್ವಲ್ ರೇವಣ್ಣ ವಿರುದ್ಧ ಈಗಾಗಲೇ ಹಲವು ಪ್ರಕರಣಗಳಿದ್ದು ಜೈಲಿನಲ್ಲೂ ಹಳೆ ಚಾಳಿ ಮುಂದುವರಿಸಿದ್ದು ತನಿಖೆಗೆ ಹೊಸ ತಿರುವು ನೀಡಿವೆ.
ಮೊಬೈಲ್ ವೀಡಿಯೋಗಳು ಮತ್ತು ಕರೆ ವಿವರಗಳನ್ನು ಆಧರಿಸಿ ಮತ್ತಷ್ಟು ಜನರನ್ನು ವಿಚಾರಣೆಗೆ ಒಳಪಡಿಸುವ ಸಾಧ್ಯತೆಯಿದೆ. ಜೈಲು ಆಡಳಿತ ಮತ್ತು ಸಂಬಂಧಪಟ್ಟವರ ವಿರುದ್ಧವೂ ಕ್ರಮ ಕೈಗೊಳ್ಳಬಹುದು. ಮೊಬೈಲ್ ತಲುಪಿಸಿದ್ದಾರೆ ಎನ್ನಲಾದ ವಾರ್ಡನ್ ಬಗ್ಗೆಯೂ ತನಿಖೆ ನಡೆಯಲಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm