ಬ್ರೇಕಿಂಗ್ ನ್ಯೂಸ್
16-09-26 10:51 am HK News Staffer ಕ್ರೈಂ
ಉಳ್ಳಾಲ, ಸೆ.16: ಕುತ್ತಾರುವಿನ ಕೊರಗಜ್ಜನ ಆದಿಕ್ಷೇತ್ರದ ಕಟ್ಟೆಯ ಬಳಿ ಸೋಮವಾರ ರಾತ್ರಿ ನಡೆದ ಬೈಕ್–ಸ್ಕೂಟರ್ ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯಗೊಂಡಿದ್ದು, ವೈದ್ಯರ ಸಲಹೆಯ ಮೇರೆಗೆ ಕುಟುಂಬಸ್ಥರು ಅಂಗಾಂಗ ದಾನಕ್ಕೆ ಮುಂದಾಗಿದ್ದಾರೆ.
ಕುತ್ತಾರುವಿನ ಆಯೆರೆ ಬೆಟ್ಟು ನಿವಾಸಿಗಳಾದ ಗೋಪಾಲ ಮತ್ತು ವೇದಾವತಿ ದಂಪತಿಯ ಕಿರಿಯ ಪುತ್ರ ವರ್ಷಿತ್ ಕುಲಾಲ್ (21) ಮೆದುಳು ನಿಷ್ಕ್ರಿಯಗೊಂಡ ಯುವಕ.
ವರ್ಷಿತ್ ಸೋಮವಾರ ರಾತ್ರಿ ಸುಮಾರು 7.30ರ ವೇಳೆಗೆ ಕುತ್ತಾರುವಿನಿಂದ ತನ್ನ ಮನೆ ಕಡೆಗೆ ಬೈಕ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಕುತ್ತಾರುವಿನ ಕೊರಗಜ್ಜನ ಆದಿಕ್ಷೇತ್ರದ ಬಳಿಯ ದುರ್ಗಾ ಆಟೋ ವರ್ಕ್ಸ್ ಶಾಪ್ ಮುಂಭಾಗದಲ್ಲಿ ರಾಣಿಪುರದಿಂದ ಕುತ್ತಾರು ಕಡೆಗೆ ಬರುತ್ತಿದ್ದ ಸ್ಕೂಟರ್ಗೆ ಮುಖಾಮುಖಿ ಡಿಕ್ಕಿಯಾಗಿದೆ.
ಅಪಘಾತದ ರಭಸಕ್ಕೆ ಬೈಕ್ನಿಂದ ರಸ್ತೆಗೆಸೆಯಲ್ಪಟ್ಟ ವರ್ಷಿತ್ ಅವರ ತಲೆಗೆ ತೀವ್ರ ಗಾಯವಾಗಿತ್ತು. ತಕ್ಷಣ ಅವರನ್ನು ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಅವರ ಮೆದುಳು ನಿಷ್ಕ್ರಿಯಗೊಂಡಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ವೈದ್ಯರ ಸಲಹೆಯ ಮೇರೆಗೆ ವರ್ಷಿತ್ ಅವರ ಪೋಷಕರು ಮಗನ ಅಂಗಾಂಗಗಳನ್ನು ದಾನ ಮಾಡಲು ನಿರ್ಧರಿಸಿದ್ದಾರೆ. ಈಗಾಗಲೇ ವಿವಿಧ ಆಸ್ಪತ್ರೆಗಳಿಂದ ಮೂತ್ರಪಿಂಡ, ಯಕೃತ್ತು, ಹೃದಯ ಹಾಗೂ ಶ್ವಾಸಕೋಶಗಳಿಗೆ ಬೇಡಿಕೆ ಬಂದಿದ್ದು, ಇಂದು ‘ಝೀರೋ ಟ್ರಾಫಿಕ್’ ವ್ಯವಸ್ಥೆಯ ಮೂಲಕ ಅಂಗಾಂಗಗಳನ್ನು ಸಂಬಂಧಪಟ್ಟ ಆಸ್ಪತ್ರೆಗಳಿಗೆ ರವಾನಿಸುವ ಪ್ರಕ್ರಿಯೆ ನಡೆಯಲಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಅಪಘಾತದಲ್ಲಿ ಸ್ಕೂಟರ್ ಸವಾರ ಧೀರಜ್ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವರ್ಷಿತ್ ಅವಿವಾಹಿತರಾಗಿದ್ದು, ಫ್ಯಾಬ್ರಿಕೇಷನ್ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ತಂದೆ, ತಾಯಿ ಹಾಗೂ ಏಕೈಕ ಸಹೋದರನನ್ನು ಅಗಲಿದ್ದಾರೆ.
ಈ ಕುರಿತು ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
A 21-year-old youth who sustained critical head injuries in a bike-scooter collision near the Koragajja Adi Kshetra in Kutharavu on Monday night has been declared brain-dead. Following medical advice, his family has decided to donate his organs.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm