ಕರ್ತವ್ಯ ಲೋಪ, ಲಂಚಬಾಕತನ, ಅನುಚಿತ ವರ್ತನೆ ಬಗ್ಗೆ ದೂರಿನ ಸರಮಾಲೆ ; ಉಪ್ಪಿನಂಗಡಿ ಪಂಚಾಯತ್ ಪಿಡಿಓ ವಿಲ್ಫ್ರೆಡ್ ರೋಡ್ರಿಗಸ್ ಅಮಾನತು

23-09-26 09:24 pm       HK News Staffer   ಕ್ರೈಂ

ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಭ್ರಷ್ಟಾಚಾರ, ಲಂಚದ ಬೇಡಿಕೆ ಹಾಗೂ ಅನುಚಿತ ವರ್ತನೆ ಮುಂತಾದ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಪ್ರಸ್ತುತ ಆರ್ಯಾಪು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿದ್ದು ವಾರದ ಹಿಂದಷ್ಟೇ ಉಪ್ಪಿನಂಗಡಿ ಗ್ರಾಮಾಂತರ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ವರ್ಗಾವಣೆಗೊಂಡಿದ್ದ ಪಿಡಿಓ ವಿಲ್ಫ್ರೆಡ್ ಲಾರೆನ್ಸ್ ರೋಡ್ರಿಗಸ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ದಕ್ಷಿಣ ಕನ್ನಡ ಜಿಪಂ ಸಿಇಓ ಆದೇಶ ಹೊರಡಿಸಿದ್ದಾರೆ.

ಮಂಗಳೂರು, ಸೆ.23 : ಸಾರ್ವಜನಿಕ ಸೇವೆಯಲ್ಲಿ ವಿಳಂಬ, ಭ್ರಷ್ಟಾಚಾರ, ಲಂಚದ ಬೇಡಿಕೆ ಹಾಗೂ ಅನುಚಿತ ವರ್ತನೆ ಮುಂತಾದ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ಪ್ರಸ್ತುತ ಆರ್ಯಾಪು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿದ್ದು ವಾರದ ಹಿಂದಷ್ಟೇ ಉಪ್ಪಿನಂಗಡಿ ಗ್ರಾಮಾಂತರ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ವರ್ಗಾವಣೆಗೊಂಡಿದ್ದ ಪಿಡಿಓ ವಿಲ್ಫ್ರೆಡ್ ಲಾರೆನ್ಸ್ ರೋಡ್ರಿಗಸ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ದಕ್ಷಿಣ ಕನ್ನಡ ಜಿಪಂ ಸಿಇಓ ಆದೇಶ ಹೊರಡಿಸಿದ್ದಾರೆ. 

ಕಳೆದ ಸೆಪ್ಟೆಂಬರ್ 09 ರಂದು ಲೋಕಾಯುಕ್ತ ಇಲಾಖೆಯ ಅಧಿಕಾರಿಗಳ ತಂಡವು ಉಪ್ಪಿನಂಗಡಿ ಗ್ರಾಮ ಪಂಚಾಯತ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು. ಈ ಸಂದರ್ಭದಲ್ಲಿ ಪಿಡಿಒ ವಿಲ್ಫ್ರೆಡ್ ಲಾರೆನ್ಸ್ ರೋಡ್ರಿಗಸ್ ಅವರು ಸಾರ್ವಜನಿಕರಿಗೆ ಸಿಗಬೇಕಾದ ಸೇವೆಗಳಲ್ಲಿ ವಿಳಂಬ ಮಾಡಿದ್ದು, ಲಂಚದ ಬೇಡಿಕೆ ಇಟ್ಟಿರುವುದು ಹಾಗೂ ಸಾರ್ವಜನಿಕರೊಂದಿಗೆ ಅನುಚಿತವಾಗಿ ವರ್ತಿಸಿರುವ ಬಗ್ಗೆ 15ಕ್ಕೂ ಹೆಚ್ಚು ಸಾರ್ವಜನಿಕ ದೂರುಗಳು ದಾಖಲಾಗಿದ್ದವು. 

ವ್ಯಾಪಾರ ಪರವಾನಗಿ ನವೀಕರಣದಲ್ಲಿ ವಿಳಂಬ ಮತ್ತು ಲಂಚದ ಆರೋಪ, ವೈಯಕ್ತಿಕ ಕೆಲಸ ಹಾಗೂ ದಾಖಲೆಗಳಿಗೆ ಸಂಬಂಧಿಸಿದಂತೆ ಹಣದ ಬೇಡಿಕೆ, ಕಳಪೆ ಕಾಮಗಾರಿಗಳ ನಿರ್ವಹಣೆ ಮತ್ತು ನಿಗದಿತ ಅನುದಾನ ಸರಿಯಾಗಿ ಬಳಸದಿರುವುದು,    ಸಾರ್ವಜನಿಕರಿಂದ ಬಂದ ಅರ್ಜಿಗಳನ್ನು ಸ್ವೀಕರಿಸಲು ಬಾಕಿ ಉಳಿಸಿರುವುದು ಹಾಗೂ ಕಚೇರಿಯಲ್ಲಿ ನಿಗದಿತ ನಿಯಮಗಳನ್ನು ಪಾಲಿಸದಿರುವ ಬಗ್ಗೆ ದೂರು ಕೇಳಿಬಂದಿತ್ತು. 

ದೂರುಗಳ ಕುರಿತು ಇಲಾಖಾ ವಿಚಾರಣೆ ಕಾಯ್ದಿರಿಸಿ, ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ ನಿಯಂತ್ರಣ ಹಾಗೂ ಅಪೀಲು) ನಿಯಮಗಳು 1957ರ ನಿಯಮ 98ರ ಪ್ರಕಾರ ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಅಮಾನತಿನಲ್ಲಿರುವ ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಕೇಂದ್ರಸ್ಥಾನ ಬಿಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ರೊಡಿಗ್ರಸ್ ಅವರು ಈ ಹಿಂದೆ ಉಪ್ಪಿನಂಗಡಿ ಗ್ರಾಮ ಪಂಚಾಯಿತಿಯಲ್ಲಿ ಪ್ರಭಾರ ಪಿಡಿಒ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಪಂಚಾಯಿತಿಗೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದರು. ಈ ಸಂದರ್ಭದಲ್ಲಿ ಸಾರ್ವಜನಿಕರಿಂದ ವಿವಿಧ ವಿಚಾರಗಳಿಗೆ ಸಂಬಂಧಿಸಿದಂತೆ ದೂರುಗಳು ಸಲ್ಲಿಕೆಯಾಗಿದ್ದು, ಅಧಿಕಾರಿಯ ಕರ್ತವ್ಯ ನಿರ್ವಹಣೆ ಕುರಿತು ಅಸಮಾಧಾನ ವ್ಯಕ್ತವಾಗಿತ್ತು. ಈ ಕುರಿತು ಸಾರ್ವಜನಿಕರು ಶಾಸಕ ಅಶೋಕ್‌ ರೈ ಅವರಿಗೂ ದೂರು ನೀಡಿದ್ದರು ಎಂದು ತಿಳಿದುಬಂದಿದೆ.

Panchayat Development Officer (PDO) Wilfred Lawrence Rodrigues, who was serving at Aryapu Gram Panchayat and had been transferred to Uppinangady Rural Gram Panchayat about a week ago, has been suspended over allegations including delays in public services, demands for bribes and inappropriate conduct.