ಬ್ರೇಕಿಂಗ್ ನ್ಯೂಸ್
23-09-26 09:28 pm HK News Staffer ಕ್ರೈಂ
ಉಡುಪಿ, ಸೆ.23: ಶಿರ್ವ ಠಾಣಾ ವ್ಯಾಪ್ತಿಯ ಪಡುಬೆಳ್ಳೆ ಭದ್ರಮ್ಮ ರಸ್ತೆಯಲ್ಲಿ ನಡೆದ ಪೊಲೀಸ್ ಕಾರ್ಯಾಚರಣೆಯಲ್ಲಿ ಬೃಹತ್ ಪ್ರಮಾಣದ ಗಾಂಜಾ- ಮೆಥಾಂಫೆಟಮೈನ್ ಡ್ರಗ್ಸ್ ವಶಕ್ಕೆ ಪಡೆದು, 9 ಮಂದಿಯನ್ನು ಬಂಧಿಸಿ ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಶಿರ್ವ ಪ್ರಕರಣದಲ್ಲಿ 1.354 ಕೆಜಿ ಗಾಂಜಾ, 32.74 ಗ್ರಾಂ ಮೆಥಾಂಫೆಟಮೈನ್, ಎರಡು ಕಾರು, ಸ್ಕೂಟರ್, 9 ಮೊಬೈಲ್ಗಳು, ಎರಡು ತೂಕದ ಯಂತ್ರ ಹಾಗೂ ₹75,010 ನಗದು ಸೇರಿ ₹13.96 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತುಗಳನ್ನು ವಶಪಡಿಸಲಾಗಿದೆ. ಪ್ರಕರಣದಲ್ಲಿ ಅಲ್ನಾಜ್ ಅಲಿಯಾಸ್ ಮೊಹಮ್ಮದ್ ಅನಾಸ್, ಮೊಹಮ್ಮದ್ ಅಲ್ತಾಫ್, ಸ್ಪ್ಯಾನಿ ಸಂದೀಪ್, ಶಾಕೀಬ್, ಮೊಹಮ್ಮದ್ ಫೈಜಲ್, ಇಮ್ಮಿಯಾಜ್, ಅಜಯ್ ಕುಮಾರ್ ಹಾಗೂ ಸಂತೋಷ್ ದೇವಾಡಿಗ ಎಂಬ 8 ಮಂದಿಯನ್ನು ಬಂಧಿಸಲಾಗಿದೆ.
ಇದೇ ವೇಳೆ ಉಡುಪಿ ನಗರ ಠಾಣೆ ವ್ಯಾಪ್ತಿಯ ಶಿವಳ್ಳಿ ಗ್ರಾಮದ ವಾದಿರಾಜ ರಸ್ತೆಯ 3ನೇ ಅಡ್ಡರಸ್ತೆಯ ಮನೆಯೊಂದರ ಮೇಲೆ ದಾಳಿ ನಡೆಸಿ 1.659 ಕೆಜಿ ಗಾಂಜಾ, ₹1.26 ಲಕ್ಷ ನಗದು ಹಾಗೂ ಡಿಜಿಟಲ್ ತೂಕದ ಯಂತ್ರ ವಶಪಡಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ಸಾಗರ ಮೂಲದ, ಪ್ರಸ್ತುತ ಉಡುಪಿಯಲ್ಲಿ ವಾಸಿಸುತ್ತಿದ್ದ 31 ವರ್ಷದ ಶ್ರೀವತ್ಸ ಕೆ.ಜಿ. ಎಂಬಾತನನ್ನು ಬಂಧಿಸಲಾಗಿದೆ.
ಎರಡೂ ಪ್ರಕರಣಗಳಲ್ಲಿ ಒಟ್ಟು ₹16,01,584 ಮೌಲ್ಯದ ಸೊತ್ತುಗಳನ್ನು ವಶಪಡಿಸಲಾಗಿದೆ. ಆರೋಪಿಗಳು ಕೇರಳದ ಉಪ್ಪಳದಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದರೆಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಂಧಿತರ ಪೈಕಿ ಕೆಲವರ ವಿರುದ್ಧ ಉಡುಪಿ, ಮಲ್ಪೆ, ಮಣಿಪಾಲ, ಕಾರ್ಕಳ ಗ್ರಾಮಾಂತರ ಹಾಗೂ ಬ್ರಹ್ಮಾವರ ಪೊಲೀಸ್ ಠಾಣೆಗಳಲ್ಲಿ ಈ ಹಿಂದೆ ಹಲವು ಪ್ರಕರಣಗಳು ದಾಖಲಾಗಿರುವುದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ.
Udupi police have arrested nine people in two separate operations and seized large quantities of ganja and methamphetamine along with cash, vehicles and other items valued at more than ₹16 lakh.
23-09-26 11:02 pm
HK News Desk
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
ಸೆ.26ರಿಂದ ಸತತ 5 ದಿನ ಬ್ಯಾಂಕ್ಗಳು ಬಂದ್ ; ATM, U...
23-09-26 09:28 am
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
23-09-26 04:21 pm
HK News Staffer
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
23-09-26 10:47 pm
HK News Desk
ಉತ್ತರಾಖಂಡದ ಯಮುನೋತ್ರಿಯಲ್ಲಿ ಕುಂಪಲದ ವ್ಯಕ್ತಿ ಹೃದಯ...
23-09-26 09:55 am
ಚಾರ್ಮಾಡಿ ಘಾಟ್ಗೆ ಅಭಿವೃದ್ಧಿಯ ಹೆಸರಿನಲ್ಲಿ ಕುತ್ತು...
23-09-26 09:30 am
ಬೀದರ್ ಶಾಹೀನ್ ವಿದ್ಯಾಸಂಸ್ಥೆಯಲ್ಲಿ ಆರೋಗ್ಯ ನಿರ್ಲಕ್...
22-09-26 08:32 pm
ಆಳ್ವಾಸ್ ಮೆಡಿಕಲ್ ಕಾಲೇಜು ಲೋಕಾರ್ಪಣೆ ; ಡೀಮ್ಡ್ ವಿವ...
21-09-26 10:36 pm
23-09-26 09:28 pm
HK News Staffer
ಕರ್ತವ್ಯ ಲೋಪ, ಲಂಚಬಾಕತನ, ಅನುಚಿತ ವರ್ತನೆ ಬಗ್ಗೆ ದೂ...
23-09-26 09:24 pm
ಶಾರ್ಜಾದಲ್ಲಿ ಆಲ್ವಿನ್ ಪ್ರಕಾಶ್ ಕುಂದರ್ ಬರ್ಬರ ಹತ್ಯ...
23-09-26 09:22 pm
sudarshan jain, murder, manglore: ಮೂಡುಬಿದ್ರೆ...
23-09-26 08:12 pm
ಪತ್ನಿಯ ಮೃತದೇಹ ಕೆರೆಯಲ್ಲಿ ಪತ್ತೆ ಬೆನ್ನಲ್ಲೇ ಪತಿ ನ...
23-09-26 05:12 pm