ಬ್ರೇಕಿಂಗ್ ನ್ಯೂಸ್
24-09-26 05:10 pm HK News Staffer ಕ್ರೈಂ
ಬಂಟ್ವಾಳ, ಸೆಪ್ಟೆಂಬರ್ 24: ಮೊಬೈಲ್ ಮೂಲಕ ಪರಿಚಯವಾಗಿದ್ದ ಕೇರಳದ ಗಡಿಭಾಗ ಕಾಸರಗೋಡು ಜಿಲ್ಲೆಯ ಅಪ್ರಾಪ್ತ ಬಾಲಕನೊಬ್ಬ ಪಿಯುಸಿ ಕಲಿಯುತ್ತಿದ್ದ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಬಾಲಕಿ ಮಗುವಿಗೆ ಜನ್ಮ ನೀಡಿದ ಬಳಿಕ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಶೂನ್ಯ ಎಫ್‌ಐಆರ್ ದಾಖಲಾಗಿದೆ.
ಸಂತ್ರಸ್ತ ಬಾಲಕಿಗೆ ನೆರೆಯ ಕಾಸರಗೋಡು ಜಿಲ್ಲೆಯ ದೂರದ ಸಂಬಂಧಿಕನೂ ಆಗಿದ್ದ ಅಪ್ರಾಪ್ತ ಬಾಲಕನ ಪರಿಚಯವಾಗಿತ್ತು. ಇಬ್ಬರೂ ಮೊಬೈಲ್ ಮೂಲಕ ನಿರಂತರ ಸಂಪರ್ಕದಲ್ಲಿದ್ದರು ಎನ್ನಲಾಗಿದೆ. 2025ರ ಡಿಸೆಂಬರ್ 21ರಂದು ಬಾಲಕಿಯನ್ನ ತನ್ನ ಮನೆಗೆ ಕರೆಸಿಕೊಂಡು ಯುವಕ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ವಿಚಾರ ಮನೆಯವರಿಗೆ ತಿಳಿದಿರಲಿಲ್ಲ.
2026ರ ಸೆಪ್ಟೆಂಬರ್ 8ರಂದು ಕಾಲೇಜಿಗೆ ತೆರಳಿದ್ದಾಗ ಅಪ್ರಾಪ್ತ ಬಾಲಕಿಯ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದ್ದರಿಂದ ಆತಂಕಗೊಂಡ ಕುಟುಂಬಸ್ಥರು ಆಕೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದರು. ಮರುದಿನ, ಸೆಪ್ಟೆಂಬರ್ 9ರಂದು, ಬಾಲಕಿ ಮಗುವಿಗೆ ಜನ್ಮ ನೀಡಿದ್ದಾಳೆ. ಈ ವೇಳೆ, ಆಕೆ ತನ್ನ ಮೇಲೆ ಯುವಕನೊಬ್ಬ ಪ್ರೀತಿಸುವ ನೆಪದಲ್ಲಿ ಲೈಂಗಿಕ ದೌರ್ಜನ್ಯ ಎಸಗಿರುವುದನ್ನು ತಿಳಿಸಿದ್ದಾಳೆ.
ಘಟನೆಗೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಶೂನ್ಯ ಅ.ಕ್ರ. 01/2026ರಂತೆ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಪೋಕ್ಸೋ ಕಾಯ್ದೆ 2012ರ ಕಲಂ 4, 5(J)(ii), 5(L), 6 ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 64(2)(m) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಘಟನೆ ನಡೆದ ಸ್ಥಳವು ಕೇರಳ ರಾಜ್ಯದ ಮಂಜೇಶ್ವರ ಪೊಲೀಸ್ ಠಾಣೆಯ ವ್ಯಾಪ್ತಿಗೆ ಒಳಪಡುವುದರಿಂದ, ಮುಂದಿನ ಕಾನೂನು ಕ್ರಮಕ್ಕಾಗಿ ಪ್ರಕರಣವನ್ನು ಅಲ್ಲಿನ ಪೊಲೀಸ್ ಠಾಣೆಗೆ ವರ್ಗಾಯಿಸಲಾಗುವುದು ಎಂದು ವಿಟ್ಲ ಪೊಲೀಸರು ತಿಳಿಸಿದ್ದಾರೆ.
A minor boy from Kasaragod district allegedly sexually assaulted a PUC student after becoming acquainted with her through a mobile phone. The incident came to light after the girl gave birth to a baby. Vitla Police have registered a Zero FIR under the POCSO Act.
23-09-26 11:02 pm
HK News Desk
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
ಸೆ.26ರಿಂದ ಸತತ 5 ದಿನ ಬ್ಯಾಂಕ್ಗಳು ಬಂದ್ ; ATM, U...
23-09-26 09:28 am
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
24-09-26 09:42 pm
HK News Staffer
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
24-09-26 06:26 pm
HK News Staffer
ಬಂಗಾಳ ವಾಯುಭಾರ ಕುಸಿತ ; ಕರಾವಳಿ, ಮಲೆನಾಡು, ದಕ್ಷಿಣ...
24-09-26 05:55 pm
ಕುಕ್ಕೆ ಸುಬ್ರಹ್ಮಣ್ಯಕ್ಕೆ ಮಾಜಿ ಕ್ರಿಕೆಟಿಗ ರವಿ ಶಾಸ...
23-09-26 10:47 pm
ಉತ್ತರಾಖಂಡದ ಯಮುನೋತ್ರಿಯಲ್ಲಿ ಕುಂಪಲದ ವ್ಯಕ್ತಿ ಹೃದಯ...
23-09-26 09:55 am
ಚಾರ್ಮಾಡಿ ಘಾಟ್ಗೆ ಅಭಿವೃದ್ಧಿಯ ಹೆಸರಿನಲ್ಲಿ ಕುತ್ತು...
23-09-26 09:30 am
24-09-26 05:10 pm
HK News Staffer
ಸೈಬರ್ ಖದೀಮರ ಹೊಸ ಹೊಸ ತಂತ್ರ: ಒಂದೇ ದಿನ ಮಂಗಳೂರಿನಲ...
24-09-26 11:10 am
bus fire, Greater Noida: ಚಲಿಸುತ್ತಿದ್ದ ಸ್ಲೀಪರ್...
24-09-26 10:09 am
ಶಿರ್ವದಲ್ಲಿ ಭಾರೀ ಪ್ರಮಾಣದ ಗಾಂಜಾ, ಡ್ರಗ್ಸ್ ವಶಕ್ಕೆ...
23-09-26 09:28 pm
ಕರ್ತವ್ಯ ಲೋಪ, ಲಂಚಬಾಕತನ, ಅನುಚಿತ ವರ್ತನೆ ಬಗ್ಗೆ ದೂ...
23-09-26 09:24 pm