ಪುತ್ತೂರು ; ವಿದ್ಯುತ್ ಸ್ಪರ್ಶಿಸಿ ಪವರ್‌ಮ್ಯಾನ್‌ ಸಾವು, ಕೆದಿಲ ಶಾಲೆಯ ಬಳಿ ಘಟನೆ

03-10-26 08:46 pm       HK News Staffer   ಕ್ರೈಂ

ಕೆದಿಲ ಶಾಲೆಯ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಪವರ್‌ಮ್ಯಾನ್‌ ಒಬ್ಬರು ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಮೃತರನ್ನು ಕೆಮ್ಮಾಯಿ ನಿವಾಸಿ ರವಿ ಗೌಡ ಎಂದು ಗುರುತಿಸಲಾಗಿದೆ.

ಪುತ್ತೂರು, ಅ.3 : ಕೆದಿಲ ಶಾಲೆಯ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಪವರ್‌ಮ್ಯಾನ್‌ ಒಬ್ಬರು ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಮೃತರನ್ನು ಕೆಮ್ಮಾಯಿ ನಿವಾಸಿ ರವಿ ಗೌಡ ಎಂದು ಗುರುತಿಸಲಾಗಿದೆ. 

ರವಿ ಗೌಡ ಮೆಸ್ಕಾಂ ಬಂಟ್ವಾಳ ತಾಲೂಕಿನ ಮಾಣಿ ಸೆಕ್ಷನ್ ನಲ್ಲಿ ಪವರ್ ಮ್ಯಾನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ. ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಮೂಲಗಳ ಪ್ರಕಾರ, ಎಚ್‌ಟಿ (ಹೈಟೆನ್ಶನ್) ವಿದ್ಯುತ್‌ ಲೈನ್‌ನ ಜಿಒಎಸ್‌ (ಗ್ಯಾಂಗ್‌ ಆಪರೇಟಿಂಗ್‌ ಸ್ವಿಚ್‌) ತೆರೆಯುವ ಸಂದರ್ಭದಲ್ಲಿ ಅರ್ಥ್‌ ಆಗಿ ವಿದ್ಯುತ್‌ ಪ್ರವಹಿಸಿ ರವಿ ಗೌಡ ಅವರು ಆಘಾತಕ್ಕೀಡಾಗಿದ್ದಾರೆ ಎನ್ನಲಾಗಿದೆ. ಕೆದಿಲ ಪಾಟ್ರಕೋಡಿ, ಮಿತ್ತೂರು ಹಾಗೂ ಗಡಿಯಾರ ಭಾಗಗಳಲ್ಲಿ ಪವರ್‌ಮ್ಯಾನ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರವಿ ಗೌಡ ಅವರು, ತಮ್ಮ ಸೇವಾ ಮನೋಭಾವದಿಂದ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರ ಅಕಾಲಿಕ ನಿಧನ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.