ಬ್ರೇಕಿಂಗ್ ನ್ಯೂಸ್
04-10-26 12:51 pm HK News Staffer ಕ್ರೈಂ
ಮಂಗಳೂರು, ಅ.4 : ಖಾಸಗಿ ಕಾಲೇಜಿನ ಅಂತಿಮ ವರ್ಷದ ಬಿಸಿಎ ವಿದ್ಯಾರ್ಥಿಯೊಬ್ಬನ ಮೇಲೆ ಸಹಪಾಠಿ ಹಾಗೂ ಆತನ ಐವರು ಸಹಚರರು ಚೂರಿಯಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ನಡೆದಿದೆ. ಕಾಲೇಜು ಕ್ಯಾಂಟೀನ್ ಬಳಿ ನಡೆದ ದಾಳಿಯಲ್ಲಿ ಗಂಭೀರ ಗಾಯಗೊಂಡ ವಿದ್ಯಾರ್ಥಿಯನ್ನು ಮಂಗಳೂರು ನಗರದ ಸರ್ಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹಲ್ಲೆಗೊಳಗಾದ ವಿದ್ಯಾರ್ಥಿಯನ್ನು ಮಹಮ್ಮದ್ ಉನೈಸ್ ಎಂದು ಗುರುತಿಸಲಾಗಿದೆ. ಶನಿವಾರ ಬೆಳಗ್ಗೆ ಕಾಲೇಜಿಗೆ ಬಂದಿದ್ದ ಉನೈಸ್, ಸುಮಾರು 11.30ರ ವೇಳೆಗೆ ಕಾಲೇಜಿನ ಸಮೀಪದ ‘ಸಿಟಿ ಅರೇನಾ’ ಟರ್ಫ್ಗೆ ಕಬಡ್ಡಿ ಆಡಲು ತೆರಳಿದ್ದರು. ಈ ವೇಳೆ ಟರ್ಫ್ ಎದುರಿನ ರಸ್ತೆಯಲ್ಲಿ ಉನೈಸ್ ಅವರ ಸ್ನೇಹಿತ ಹಾಗೂ ಪ್ರಥಮ ವರ್ಷದ ಬಿ.ಕಾಂ ವಿದ್ಯಾರ್ಥಿ ರಾಯಿಝ್ ಮತ್ತು ಅದೇ ಕಾಲೇಜಿನಲ್ಲಿ ಬಿ.ಕಾಂ ವ್ಯಾಸಂಗ ಮಾಡುತ್ತಿರುವ ಕಾಟಿಪಳ್ಳ ನಿವಾಸಿ ರಿಯಾನ್ ನಡುವೆ ಸಣ್ಣ ವಿಚಾರಕ್ಕೆ ಜಗಳ ನಡೆದಿದೆ.
ಜಗಳ ಬಿಡಿಸಲು ಉನೈಸ್ ಸೇರಿದಂತೆ ಕೆಲ ವಿದ್ಯಾರ್ಥಿಗಳು ಮಧ್ಯಪ್ರವೇಶಿಸಿದಾಗ, ರಿಯಾನ್ ಉನೈಸ್ಗೆ ಕೈಯಿಂದ ಹೊಡೆದಿದ್ದಾನೆ ಎಂದು ದೂರಲಾಗಿದೆ. ಬಳಿಕ ಉನೈಸ್ ಹಾಗೂ ಇತರ ವಿದ್ಯಾರ್ಥಿಗಳು ಕಾಲೇಜಿಗೆ ವಾಪಸ್ ತೆರಳಿದ್ದಾರೆ. ಮಧ್ಯಾಹ್ನ ಸುಮಾರು 1.45ರ ವೇಳೆಗೆ ಉನೈಸ್ ಕಾಲೇಜಿನ ಕ್ಯಾಂಟೀನ್ ಬಳಿ ನಿಂತಿದ್ದಾಗ, ಎರಡು ದ್ವಿಚಕ್ರ ವಾಹನಗಳಲ್ಲಿ ರಿಯಾನ್ ಹಾಗೂ ಐವರು ಸಹಚರರು ಅಲ್ಲಿಗೆ ಬಂದಿದ್ದಾರೆ.
ಆರೋಪಿಗಳು ಉನೈಸ್ ಅವರನ್ನು ಸುತ್ತುವರಿದು ಏಕಾಏಕಿ ಹಲ್ಲೆ ನಡೆಸಿದ್ದು, “ನಿನ್ನನ್ನು ಕೊಲೆ ಮಾಡದೇ ಬಿಡುವುದಿಲ್ಲ” ಎಂದು ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ವೇಳೆ ಚೂರಿಯಿಂದ ಉನೈಸ್ ಅವರ ತಲೆ, ಬೆನ್ನು, ಎಡ ಕಿವಿ ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಇರಿದು ಗಾಯಗೊಳಿಸಿ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಗಾಯಗೊಂಡಿದ್ದ ಉನೈಸ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ದಾಳಿ ನಡೆಸಿದ ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
04-10-26 12:34 pm
HK News Staffer
Smith Machar, Mankind Pharma: 180 ಜೀವ ಉಳಿಸಿದ...
03-10-26 01:00 pm
ಹನುಮಾನ್ ಚಾಲೀಸಾ ಜಪಿಸುತ್ತಲೇ ಕಾಕ್ಪಿಟ್ ಬಾಗಿಲು ತೆ...
02-10-26 05:28 pm
ಇಸ್ರೇಲ್ ತೆರಳುತ್ತಿದ್ದ ವಿಮಾನ ಹೈಜಾಕ್ ಯತ್ನ ? ಒಮಾ...
02-10-26 10:23 am
ವಿಮಾನ ಅಪಘಾತದ ತನಿಖಾ ವರದಿಗಳೇ ನೆರವಾಯ್ತು..! ದುಬೈ...
01-10-26 11:46 am
03-10-26 09:56 pm
HK News Staffer
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
KSCA, Mangaluru: ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕ...
02-10-26 05:20 pm
Sowjanya case, Lokesh Jagalsar: ಸೌಜನ್ಯ ಪ್ರಕರಣ...
02-10-26 10:25 am
Madoor Yusuf Murder Case: ಜೈಲಿನಲ್ಲಿ ಮಾಡೂರು ಯೂ...
01-10-26 10:45 pm
04-10-26 12:51 pm
HK News Staffer
ಪುತ್ತೂರು ; ವಿದ್ಯುತ್ ಸ್ಪರ್ಶಿಸಿ ಪವರ್ಮ್ಯಾನ್ ಸಾ...
03-10-26 08:46 pm
Mangalore Crime, Mangalore Police, Delhi Thie...
03-10-26 06:39 pm
Kasaragod crime: ಕಾಸರಗೋಡು ; ಮನೆ ಮೇಲೆ ಬಿದ್ದ ಬೋ...
03-10-26 05:05 pm
Infra Developers, Vasudevan: ಬೆಂಗಳೂರಿನಲ್ಲಿ ಫ್...
03-10-26 03:41 pm