ಬ್ರೇಕಿಂಗ್ ನ್ಯೂಸ್
05-10-26 10:49 am HK News Staffer ಕ್ರೈಂ
ಬೆಳ್ತಂಗಡಿ, ಅ.5 : ಮಂತ್ರಾಲಯಕ್ಕೆ ತೆರಳುತ್ತಿದ್ದ ಶಿಶಿಲದ ಸ್ನೇಹಿತರಿದ್ದ ಕಾರಿಗೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಶಿಶಿಲ ಗ್ರಾಮದ ಮಂತಾಜೆ ನಿವಾಸಿ ದೀಪೇಶ್(27) ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ನಡುವೆ, ಅಪಘಾತಕ್ಕೆ ಕಾರಣವಾದ ಕಾರಿನ ಚಾಲಕ ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದ ವಿಚಾರವನ್ನು ಪೊಲೀಸರಿಗೆ ತಿಳಿಸಿದ್ದರೂ, ಅದನ್ನು ಎಫ್‌ಐಆರ್‌ನಲ್ಲಿ ದಾಖಲಿಸದೆ ಪ್ರಕರಣವನ್ನು ಮುಚ್ಚಿ ಹಾಕುವ ಯತ್ನ ನಡೆದಿದೆ ಎಂದು ಗಾಯಾಳುಗಳು ಬಣಕಲ್ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಣಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರು ಹಾಗೂ ಎಫ್‌ಐಆರ್ ಪ್ರಕಾರ, ಸೆ.29ರಂದು ನಸುಕಿನ ಜಾವ ಸುಮಾರು 1.30ಕ್ಕೆ ಶಿಶಿಲದ ರಘು(32), ಶಿಶಿಲ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸುಧೀನ್, ಸತೀಶ, ದೀಪೇಶ್, ದೀಪಕ್ ಅಲಿಯಾಸ್ ತಿರುಮಲೇಶ್ವರ ಹಾಗೂ ಶೋಭಿತ್ ಅಲಿಯಾಸ್ ನಾಗರಾಜ್ ಎಂಬವರು ಮಂತ್ರಾಲಯಕ್ಕೆ ತೆರಳಲು ಶಿಶಿಲದಿಂದ ಸ್ನೇಹಿತ ವಸಂತಕುಮಾರ್ ಅವರ ಇನೋವಾ ಕಾರನ್ನು ಪಡೆದು ತೆರಳುತ್ತಿದ್ದರು. ಉಜಿರೆ– ಚಾರ್ಮಾಡಿ ಮಾರ್ಗವಾಗಿ ಬಣಕಲ್ ದಾಟಿ ಮೂಡಿಗೆರೆ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ, ನಸುಕಿನ ಜಾವ ಸುಮಾರು 3.40ಕ್ಕೆ ಸಬ್ಬೇನಹಳ್ಳಿ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಎದುರಿನಿಂದ ಬಂದ ಫೋರ್ಡ್ ಎಂಡೀವರ್ ಕಾರು ಡಿಕ್ಕಿಯಾಗಿದೆ. ಅದನ್ನು ಆಲ್ದೂರು ನಿವಾಸಿ ಸುಂದರೇಶ್ ಎಂಬವರ ಪುತ್ರ ಅಮೋಘ್ ಡಿ.ಎಸ್. ಚಲಾಯಿಸುತ್ತಿದ್ದರು. ಅಪಘಾತದಲ್ಲಿ ಇನೋವಾ ಕಾರಿನಲ್ಲಿದ್ದ ಆರು ಮಂದಿಗೂ ಗಾಯಗಳಾಗಿದ್ದು ಈ ಪೈಕಿ ಹಿಂಬದಿ ಆಸನದಲ್ಲಿದ್ದ ದೀಪೇಶ್ ಅವರ ಕುತ್ತಿಗೆಗೆ ಹಾಗೂ ಸುಧೀನ್ ಅವರ ಎಡ ಭುಜಕ್ಕೆ ಗಂಭೀರ ಪೆಟ್ಟಾಗಿತ್ತು. ಚಾಲಕ ರಘು, ಸತೀಶ, ನಾಗರಾಜ್ ಹಾಗೂ ದೀಪಕ್ ಅವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದವು.





ಅಪಘಾತದ ಬಳಿಕ ಆಂಬುಲೆನ್ಸ್ ಮೂಲಕ ದೀಪೇಶ್ ಹಾಗೂ ಸುಧೀನ್ ಅವರನ್ನು ಬಣಕಲ್‌ನ ಕೃಷ್ಣ ಆಸ್ಪತ್ರೆಗೆ ದಾಖಲಿಸಿದ್ದು ಬಳಿಕ ವೈದ್ಯರ ಸಲಹೆಯಂತೆ ಇಬ್ಬರನ್ನೂ ಉಜಿರೆಯ ಎಸ್‌ಡಿಎಂ ಆಸ್ಪತ್ರೆಗೆ ತರಲಾಗಿತ್ತು. ಸುಧೀನ್ ಅವರನ್ನು ಎಸ್‌ಡಿಎಂ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಿಸಿದ್ದು, ದೀಪೇಶ್ ಅವರಿಗೆ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದ ಕಾರಣ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ದೀಪೇಶ್ ಮೃತಪಟ್ಟಿದ್ದಾರೆ. ಮೃತರು ತಾಯಿ, ಇಬ್ಬರ ಸಹೋದರರನ್ನು ಅಗಲಿದ್ದಾರೆ.
ಗಾಯಾಳುಗಳ ಚಿಕಿತ್ಸೆಯ ಕಾರಣ ಆಸ್ಪತ್ರೆಯಲ್ಲಿದ್ದ ಹಿನ್ನೆಲೆಯಲ್ಲಿ ಪೊಲೀಸ್ ದೂರು ನೀಡಲು ವಿಳಂಬವಾಯಿತು ಎಂದು ಇನೋವಾ ಕಾರು ಚಾಲಕ ರಘು ದೂರಿನಲ್ಲಿ ತಿಳಿಸಿದ್ದಾರೆ. ಅವರ ಲಿಖಿತ ದೂರಿನ ಮೇರೆಗೆ ಅ.1ರಂದು ಸಂಜೆ 5ಕ್ಕೆ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಒದಗಿಸಲಾದ ಎಫ್‌ಐಆರ್ ಪ್ರತಿಯಲ್ಲಿ ಎಂಡೀವರ್ ಕಾರಿನ ಚಾಲಕ ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಕುರಿತು ಯಾವುದೇ ಉಲ್ಲೇಖವಿಲ್ಲ ಎಂದು ಗಾಯಾಳುಗಳು ಆರೋಪಿಸಿದ್ದಾರೆ.
ಅಪಘಾತಕ್ಕೆ ಕಾರಣ ಎನ್ನಲಾದ ಎಂಡೀವರ್ ಕಾರಿನ ಚಾಲಕ ಅಮೋಘ್ ಅತಿ ಹೆಚ್ಚಿನ ರೀತಿಯಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದ ಬಗ್ಗೆ ಬಣಕಲ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ದಿಲೀಪ್ ಅವರಿಗೆ ತಿಳಿಸಲಾಗಿತ್ತು. ಚಾಲಕನನ್ನು ವೈದ್ಯಕೀಯ ಪರೀಕ್ಷೆಗೂ ಒಳಪಡಿಸಲಾಗಿತ್ತು. ಆದರೂ ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆರೋಪವನ್ನು ಎಫ್‌ಐಆರ್‌ನಲ್ಲಿ ದಾಖಲಿಸಿಲ್ಲ ಎಂದು ಗಾಯಾಳುಗಳು ಆರೋಪಿಸಿದ್ದಾರೆ. ಈ ಕುರಿತು ಪ್ರಶ್ನಿಸಿದಾಗ ಸಬ್‌ಇನ್ಸ್‌ಪೆಕ್ಟರ್ ದಿಲೀಪ್ ಅವರು ತಮ್ಮೊಂದಿಗೆ ದುರ್ವರ್ತನೆ ತೋರಿದ್ದಾರೆ ಎಂದು ಗಾಯಾಳುಗಳು ಆರೋಪಿಸಿದ್ದಾರೆ.
ಈ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಎಂಎಲ್ಸಿ ಸಿ.ಟಿ.ರವಿ ಹಾಗೂ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಅವರ ಗಮನಕ್ಕೂ ತರಲಾಗಿತ್ತು. ಅವರು ಕುಡಿದು ವಾಹನ ಚಲಾಯಿಸಿರುವ ಆರೋಪವಿದ್ದರೂ ಅದನ್ನು ಎಫ್‌ಐಆರ್‌ನಲ್ಲಿ ಏಕೆ ಸೇರಿಸಿಲ್ಲ ಎಂದು ಪೊಲೀಸ್ ಅಧಿಕಾರಿಯನ್ನು ಪ್ರಶ್ನಿಸಿದ್ದರು. ಆದರೂ ಪೊಲೀಸರು ಕ್ರಮ ಜರುಗಿಸಿಲ್ಲ. ಹೀಗಾಗಿ ಪ್ರಕರಣವನ್ನು ದಾರಿ ತಪ್ಪಿಸುವ ಪ್ರಯತ್ನ ನಡೆದಿದೆ ಎಂದು ಗಾಯಾಳುಗಳು ಆರೋಪಿಸಿದ್ದಾರೆ.
ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯನ್ನು ನಿಷ್ಪಕ್ಷಪಾತವಾಗಿ ನಡೆಸಬೇಕು ಹಾಗೂ ಅಪಘಾತಕ್ಕೆ ಕಾರಣವಾದ ಅಂಶಗಳನ್ನು ತನಿಖೆಯಲ್ಲಿ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮೃತಪಟ್ಟ ಯುವಕನ ಕುಟುಂಬದವರು ಒತ್ತಾಯಿಸಿದ್ದಾರೆ.
A 27-year-old man from Shishila village, who was critically injured in a road accident while travelling to Mantralaya with friends, died during treatment at a private hospital in Mangaluru. The deceased has been identified as Deepesh, a resident of Mantaje in Shishila.
03-10-26 05:30 pm
HK News Staffer
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
05-10-26 11:40 am
HK News Staffer
Ramesh Chennithala: ಕೇರಳದಲ್ಲಿ ಪಿಡಬ್ಲ್ಯೂಡಿ ರಸ್...
04-10-26 07:07 pm
Smith Machar, benjamin netanyahu: ಸ್ಮಿತ್ ಮಚ್ಚ...
04-10-26 12:34 pm
Smith Machar, Mankind Pharma: 180 ಜೀವ ಉಳಿಸಿದ...
03-10-26 01:00 pm
ಹನುಮಾನ್ ಚಾಲೀಸಾ ಜಪಿಸುತ್ತಲೇ ಕಾಕ್ಪಿಟ್ ಬಾಗಿಲು ತೆ...
02-10-26 05:28 pm
05-10-26 11:41 am
HK News Staffer
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
KSCA, Mangaluru: ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕ...
02-10-26 05:20 pm
Sowjanya case, Lokesh Jagalsar: ಸೌಜನ್ಯ ಪ್ರಕರಣ...
02-10-26 10:25 am
05-10-26 10:49 am
HK News Staffer
bantwal rain: ಕರಾವಳಿ ಭಾಗದಲ್ಲಿ ಹಿಂಗಾರು ಮಳೆ ಅಬ್...
05-10-26 10:04 am
ಕಾಲೇಜು ಕ್ಯಾಂಟೀನ್ ಬಳಿ ಬಿಸಿಎ ವಿದ್ಯಾರ್ಥಿಗೆ ಚೂರಿ...
04-10-26 12:51 pm
ಪುತ್ತೂರು ; ವಿದ್ಯುತ್ ಸ್ಪರ್ಶಿಸಿ ಪವರ್ಮ್ಯಾನ್ ಸಾ...
03-10-26 08:46 pm
Mangalore Crime, Mangalore Police, Delhi Thie...
03-10-26 06:39 pm