CBI ಹೆಸರಲ್ಲಿ ಬೆದರಿಕೆ, ‘ಡಿಜಿಟಲ್ ಅರೆಸ್ಟ್’ ನಾಟಕ ; ಮಂಗಳೂರಿನ 75ರ ಅಜ್ಜಿಯಿಂದ 2 ಕೋಟಿ ರೂ. ಲೂಟಿ, ಎಚ್ಚೆತ್ತುಕೊಳ್ಳದ ಮಂದಿ !

08-10-26 11:08 am       HK News Staffer   ಕ್ರೈಂ

ಪೊಲೀಸ್‌ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತ ವ್ಯಕ್ತಿಗಳು ಡಿಜಿಟಲ್‌ ಅರೆಸ್ವ್‌ ಹೆಸರಿನಲ್ಲಿ 75 ವರ್ಷದ ಮಹಿಳೆಯೊಬ್ಬರಿಗೆ ಬೆದರಿಕೆ ಹಾಕಿ ಹಂತ ಹಂತವಾಗಿ ಒಟ್ಟು 2 ಕೋಟಿ ರೂ. ವರ್ಗಾಯಿಸಿಕೊಂಡಿರುವ ಬಗ್ಗೆ ಸೈಬರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು, ಅ 08: ಪೊಲೀಸ್‌ ಹಾಗೂ ಸಿಬಿಐ ಅಧಿಕಾರಿಗಳೆಂದು ಪರಿಚಯಿಸಿಕೊಂಡ ಅಪರಿಚಿತ ವ್ಯಕ್ತಿಗಳು ಡಿಜಿಟಲ್‌ ಅರೆಸ್ವ್‌ ಹೆಸರಿನಲ್ಲಿ 75 ವರ್ಷದ ಮಹಿಳೆಯೊಬ್ಬರಿಗೆ ಬೆದರಿಕೆ ಹಾಕಿ ಹಂತ ಹಂತವಾಗಿ ಒಟ್ಟು 2 ಕೋಟಿ ರೂ. ವರ್ಗಾಯಿಸಿಕೊಂಡಿರುವ ಬಗ್ಗೆ ಸೈಬರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರರಿಗೆ ಸೆ.25ರಂದು ಅಪರಿಚಿತ ವ್ಯಕ್ತಿಯೊಬ್ಬರು ಕರೆ ಮಾಡಿ ತಾನು ಬಾಂಬೆ ಕೊಲಾಬಾ ಪೊಲೀಸ್‌ ಅಧಿಕಾರಿ ಸಂದೀಪ್‌ ರಾವ್‌ ಎಂದು ಪರಿಚಯಿಸಿಕೊಂಡಿದ್ದಾನೆ. ಅಂತಾರಾಷ್ಟ್ರೀಯ ಹಣ ಅಕ್ರಮ ವರ್ಗಾವಣೆ ಆರೋಪಿ ನರೇಶ್‌ ಗೋಯಲ್‌ ಜತೆ ಹಣ ವರ್ಗಾವಣೆ, ಮಾದಕವಸ್ತು ವ್ಯವಹಾರ ಹಾಗೂ ಮಕ್ಕಳ ಕಳ್ಳ ಸಾಗಣೆಯಂತಹ ಅಪರಾಧಗಳಲ್ಲಿಭಾಗಿಯಾಗಿದ್ದೀರಿ. ಈ ಬಗ್ಗೆ ಮುಂಬಯಿ ಕೊಲಾಬಾ ಪೊಲೀಸ್‌ ಠಾಣೆಯಲ್ಲಿಪ್ರಕರಣ ದಾಖಲಾಗಿದೆ ಎಂದು ತಿಳಿಸಿದ್ದಾನೆ.

ಬಳಿಕ ಮತ್ತೊಂದು ಮೊಬೈಲ್‌ ಸಂಖ್ಯೆಯಿಂದ ವಾಟ್ಸ್‌ಆ್ಯಪ್‌ ವಿಡಿಯೊ ಕರೆ ಬಂದಿದ್ದು, ಕರೆ ಮಾಡಿದ ವ್ಯಕ್ತಿ ತಾನು ಸಿಬಿಐ ಅಧಿಕಾರಿ ಸಮಾಧಾನ್‌ ಪವಾರ್‌ ಎಂದು ಪರಿಚಯಿಸಿಕೊಂಡಿದ್ದಾನೆ. ನೀವು ಅಂತಾರಾಷ್ಟ್ರೀಯ ಮಟ್ಟದ ಅಪರಾಧದಲ್ಲಿಭಾಗಿಯಾಗಿದ್ದು, ನ್ಯಾಷನಲ್‌ ಸೀಕ್ರೆಸಿ ಆ್ಯಕ್ಟ್ ಪಾಲಿಸಬೇಕು ಎಂದು ಹೇಳಿ ಭಯ ಹುಟ್ಟಿಸಿದ್ದಾರೆ. ಅಲ್ಲದೆ, ತಾವು ಸರ್ವೇಲೈನ್ಸ್‌ನಲ್ಲಿರುವುದರಿಂದ ಈ ವಿಚಾರ ಯಾರಿಗೂ ತಿಳಿಸಬಾರದು ಎಂದು ಬೆದರಿಸಿದ್ದಾರೆ.

ಆಸ್ತಿ ಮತ್ತು ಬ್ಯಾಂಕ್‌ ಖಾತೆಗಳನ್ನು ಪರಿಶೀಲಿಸಿ ಎರಡು ದಿನಗಳಲ್ಲಿ ಕ್ಲಿಯರೆಸ್ಸ್‌ ನೀಡುವುದಾಗಿ ನಂಬಿಸಿದ ಆರೋಪಿಗಳು, ದೂರುದಾರರಿಂದ ಬ್ಯಾಂಕ್‌ ಖಾತೆ ಹಾಗೂ ಆಸ್ತಿ ವಿವರಗಳನ್ನು ಪಡೆದುಕೊಂಡಿದ್ದಾರೆ. ನಂತರ ತಮ್ಮ ಸೂಚನೆಯಂತೆ ನಿರ್ದಿಷ್ಟ ಬ್ಯಾಂಕ್‌ ಖಾತೆಗಳಿಗೆ ಹಣ ವರ್ಗಾಯಿಸುವಂತೆ ತಿಳಿಸಿದ್ದಾರೆ.

ಆರೋಪಿಗಳ ಸೂಚನೆಯಂತೆ ದೂರುದಾರರು 60 ಲಕ್ಷ ರೂ. ಹಾಗೂ ಅ.3ರಂದು 1.40 ಕೋಟಿ ರೂ. ಹಣ ಆರ್‌ಟಿಜಿಎಸ್‌ ಮೂಲಕ ವರ್ಗಾಯಿಸಿದ್ದಾರೆ. ಸೆ.25ರಿಂದ ಅ.5ರವರೆಗೆ ಹಂತ ಹಂತವಾಗಿ ಒಟ್ಟು ಎರಡು ಕೋಟಿ ರೂ. ವಂಚಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ವಂಚನೆ ಪ್ರಕರಣಗಳ ಸಂಖ್ಯೆ ದೊಡ್ಡ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ. ಸಾರ್ವಜನಿಕರಿಗೆ ಈ ಬಗ್ಗೆ ಎಷ್ಟೇ ಅರಿವು ಮೂಡಿಸಿದರೂ ವಂಚನೆ ಪ್ರಕರಣಗಳಿಗೆ ಕಡಿವಾಣ ಹಾಕಲು ಸಾಧ್ಯವಾಗಿಲ್ಲ. ವಿವಿಧ ಸ್ವರೂಪದಲ್ಲಿ ವಂಚನೆ ಪ್ರಕರಣಗಳು ಮುಂದುವರಿಯುತ್ತಲೇ ಇವೆ.

ಡಿಜಿಟಲ್ ವಂಚನೆಯಿಂದ ಕೋಟ್ಯಂತರ ರೂಪಾಯಿ ಹಣವನ್ನು ಅಮಾಯಕರು ಕಳೆದುಕೊಳ್ಳುತ್ತಿದ್ದಾರೆ. ಗೋಲ್ಡನ್ ಅವರ್ ಒಳಗಡೆ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದರೆ ವಂಚನೆ ತಡೆಯಲು ಅವರು ಪ್ರಯತ್ನ ನಡೆಸುತ್ತಾರೆ. ಆದರೆ, ತಡವಾಗಿ ದೂರು ನೀಡಿದರೆ ವಂಚನೆ ತಡೆಯುವುದು ಕಷ್ಟಸಾಧ್ಯವಾಗಲಿದೆ.

A 75-year-old woman was allegedly cheated of ₹2 crore by unidentified persons who posed as police and CBI officers and threatened her under the guise of a “digital arrest.” A case has been registered at the Cyber Police Station.