Dharwad Accident: ಧಾರವಾಡ ; ಕಾರು - ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ, ಸ್ಥಳದಲ್ಲೇ ನಾಲ್ವರ ಬಲಿ

09-10-26 05:37 pm       HK News Staffer   ಕ್ರೈಂ

ಕಾರು ಮತ್ತು ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮವಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ನವಲಗುಂದ ತಾಲೂಕಿನ ಅಮರಗೋಳ ಗ್ರಾಮದ ಬಳಿ ನಡೆದಿದೆ.

ಧಾರವಾಡ, ಅ 09: ಕಾರು ಮತ್ತು ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮವಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ನವಲಗುಂದ ತಾಲೂಕಿನ ಅಮರಗೋಳ ಗ್ರಾಮದ ಬಳಿ ನಡೆದಿದೆ.

ವಿಜಯಪುರ ಮೂಲದ ಅಜೀತ್, ರಾಕೇಶ್, ಸಂದೀಪ್ ಹಾಗೂ ಸಿದ್ದಾಪೂರದ ಶೃತಿ ಮೃತ ದುರ್ದೈವಿಗಳಾಗಿದ್ದಾರೆ.

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಅಮರಗೋಳ ಗ್ರಾಮ ಬಳಿ ಧಾರವಾಡ - ಹುಬ್ಬಳ್ಳಿ ಕಡೆಯಿಂದ ಕಾರು ಬರುತ್ತಿತ್ತು. ಎದುರು ಬದುರಾಗಿ‌ ಎರಡೂ ವಾಹನಗಳು ಡಿಕ್ಕಿಯಾಗಿವೆ. ನವಲಗುಂದ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಮೃತದೇಹಗಳನ್ನು ನವಲಗುಂದ ತಾಲೂಲು ಆಸ್ಪತ್ರೆಯಲ್ಲಿ ಇರಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.