ಬಂಟ್ವಾಳ ; ಶಾಲೆಯಿಂದ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆರಗಿದ ಲಾರಿ, ಬಾಲಕಿ ಸ್ಥಳದಲ್ಲೇ ಸಾವು

19-11-26 09:20 pm       HK News Staffer   ಕ್ರೈಂ

ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಬಸ್ಸಿನಿಂದ ಇಳಿದು ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಲಾರಿ ಹರಿದ ಪರಿಣಾಮ ಬಾಲಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ ಸಮೀಪದ ನೇರಳಕಟ್ಟೆಯಲ್ಲಿ ಗುರುವಾರ ಸಂಜೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ನೇರಳಕಟ್ಟೆ ನಿವಾಸಿ, ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್ ವಿದ್ಯಾರ್ಥಿನಿ ಫಾತಿಮಾ ಇಝಾ ಇಲ್ಯಾಸ್(14) ಎಂದು ಗುರುತಿಸಲಾಗಿದೆ.

ಬಂಟ್ವಾಳ, ನ.19: ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಬಸ್ಸಿನಿಂದ ಇಳಿದು ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಲಾರಿ ಹರಿದ ಪರಿಣಾಮ ಬಾಲಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ ಸಮೀಪದ ನೇರಳಕಟ್ಟೆಯಲ್ಲಿ ಗುರುವಾರ ಸಂಜೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ನೇರಳಕಟ್ಟೆ ನಿವಾಸಿ, ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್ ವಿದ್ಯಾರ್ಥಿನಿ ಫಾತಿಮಾ ಇಝಾ ಇಲ್ಯಾಸ್(14) ಎಂದು ಗುರುತಿಸಲಾಗಿದೆ.

ಸಂಜೆ ಶಾಲೆ ಬಿಟ್ಟ ಬಳಿಕ ಫಾತಿಮಾ ಬಸ್ಸಿನಲ್ಲಿ ನೇರಳಕಟ್ಟೆಗೆ ಬಂದಿಳಿದಿದ್ದಳು. ಬಳಿಕ ಮನೆಗೆ ತೆರಳಲು ರಸ್ತೆ ದಾಟುತ್ತಿದ್ದ ವೇಳೆ ಅತಿವೇಗವಾಗಿ ಬಂದ ಲಾರಿ ಆಕೆಗೆ ಡಿಕ್ಕಿ ಹೊಡೆದಿದೆ. ಲಾರಿಯ ಚಕ್ರಕ್ಕೆ ಸಿಲುಕಿ ಗಂಭೀರ ಗಾಯಗೊಂಡ ವಿದ್ಯಾರ್ಥಿನಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ. 

ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗುಜರಾತ್ ಮೂಲದ ಚಾಲಕ ಮೊಹಮ್ಮದ್ ಜನಾಫ್ ನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.