ಬ್ರೇಕಿಂಗ್ ನ್ಯೂಸ್
23-11-26 02:24 pm HK News Staffer ಕ್ರೈಂ
ಉಡುಪಿ, ನ.23: ಪ್ರವಾಸಕ್ಕೆಂದು ಬಂದಿದ್ದ ದಾವಣಗೆರೆ ಮೂಲದ ಒಂದೇ ಕುಟುಂಬದ ಮೂವರು ಬಾಲಕರು ಕಾಪು ಬೀಚ್ನಲ್ಲಿ ಸಮುದ್ರದ ಅಲೆಗಳ ಸೆಳೆತಕ್ಕೆ ಸಿಲುಕಿದ್ದು, ಓರ್ವ ಬಾಲಕನನ್ನು ರಕ್ಷಿಸಲಾಗಿದೆ. ಇನ್ನಿಬ್ಬರು ಸಮುದ್ರ ಪಾಲಾಗಿದ್ದು, ಅವರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ಉಡುಪಿಯ ಕಾಪು ಬೀಚ್ನಲ್ಲಿ ಘಟನೆ ನಡೆದಿದ್ದು ದಾವಣಗೆರೆ ಮೂಲದ ಮೂವರು ಸಮುದ್ರದ ಅಲೆಗಳ ಸೆಳೆತಕ್ಕೆ ಸಿಲುಕಿದ್ದಾರೆ. ಮೂವರಲ್ಲಿ ಓರ್ವ ಬಾಲಕನನ್ನು ರಕ್ಷಿಸಲಾಗಿದ್ದು, 20 ವರ್ಷದ ಸಮೀರ್ ಬಾಷಾ ಹಾಗೂ 15 ವರ್ಷದ ಮಲ್ಲಿಕ್ ರಿಯಾನ್ ಸಮುದ್ರದಲ್ಲಿ ನಾಪತ್ತೆಯಾಗಿದ್ದಾರೆ. ಸ್ಥಳದಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ದಾವಣಗೆರೆಯಿಂದ ಪ್ರವಾಸಕ್ಕೆ ಬಂದಿದ್ದ ಕುಟುಂಬದ ಮೊಹಮ್ಮದ್ ಇಸಾಕ್, ಸಮೀರ್ ಭಾಷಾ (20) ಹಾಗೂ ಮಲ್ಲಿಕ್ ರಿಯಾನ್ (15) ಸಮುದ್ರದಲ್ಲಿ ಆಟವಾಡುತ್ತಿದ್ದ ವೇಳೆ ದಿಢೀರ್ ಎದ್ದ ಬೃಹತ್ ಅಲೆಗಳ ಸೆಳೆತಕ್ಕೆ ಸಿಲುಕಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ತಕ್ಷಣವೇ ಸ್ಥಳೀಯರು ಹಾಗೂ ಬೀಚ್ ಲೈಫ್ ಗಾರ್ಡ್ ಸಿಬ್ಬಂದಿ ಸಮುದ್ರಕ್ಕೆ ಧುಮುಕಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದು ಮುಳುಗುತ್ತಿದ್ದ ಮೊಹಮ್ಮದ್ ಇಸಾಕ್ನನ್ನು ಸುರಕ್ಷಿತವಾಗಿ ದಡಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಸಮೀರ್ ಬಾಷಾ ಹಾಗೂ ಮಲ್ಲಿಕ್ ರಿಯಾನ್ ಅಲೆಗಳ ರಭಸಕ್ಕೆ ಸಿಲುಕಿ ನಾಪತ್ತೆಯಾಗಿದ್ದಾರೆ. ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿದ್ದು, ಕರಾವಳಿ ಕಾವಲು ಪಡೆ, ಲೈಫ್ ಗಾರ್ಡ್ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರ ನೆರವಿನೊಂದಿಗೆ ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.
23-11-26 12:02 pm
HK News Staffer
ಬಸವಣ್ಣ ಬಗ್ಗೆ ಅವಹೇಳನ ಆರೋಪ ; 'ಬಸವ ಮಂಟಪ' ಕೃತಿ ಮು...
20-11-26 05:15 pm
2028ರ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ; ಮಾಜಿ ಸಿಎಂ...
20-11-26 12:04 pm
ಹಿರಿಯೂರು ಅಭ್ಯರ್ಥಿ ; ನಾವು ಕುಮಾರಸ್ವಾಮಿ ಜೊತೆ ಮಾತ...
19-11-26 12:32 pm
ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ ; ಕಾರು - ಬೊಲೆರೋ...
18-11-26 11:03 pm
21-11-26 11:44 am
HK News Staffer
ಜಾಗತಿಕ ಜನಸಂಖ್ಯೆಯಲ್ಲಿ ಇಸ್ಲಾಂ ಪಾರಮ್ಯ ; 2035ಕ್ಕೆ...
20-11-26 12:58 pm
ಬಾಂಗ್ಲಾದೇಶದಲ್ಲಿ ಮತ್ತೆ ಹಿಂಸಾಚಾರ ; ಮಾಜಿ ಮುಖ್ಯಸ್...
19-11-26 07:30 pm
"ಧರ್ಮ ಯಾವುದೇ ಇರಲಿ, ಪ್ರತಿಯೊಬ್ಬ ಭಾರತೀಯನ ರಕ್ತದಲ್...
19-11-26 01:19 pm
ಸೌದಿಗೆ ನವೆಂಬರ್ 30ರ ವರೆಗೆ ವಿಮಾನ ಸೇವೆ ರದ್ದು ; ಇ...
18-11-26 11:28 pm
23-11-26 02:26 pm
HK News Staffer
ಡಿಕೆಶಿ ವಿದೇಶಕ್ಕೆ ; ಮಂಗಳೂರಿಗೆ ಹೆಲಿಕಾಪ್ಟರಿನಲ್ಲಿ...
23-11-26 01:13 pm
ಬಂಟ್ವಾಳ ; ರಸ್ತೆ ಬದಿ ನಿಲ್ಲಿಸಿದ್ದ ಕಾರು, ಕ್ರೇನ್...
22-11-26 04:17 pm
ಮಂಗಳೂರು ಏರ್ಪೋರ್ಟ್ ನಲ್ಲಿ ಪಾರ್ಕಿಂಗ್ ಶುಲ್ಕ ದುಬಾರ...
21-11-26 10:59 pm
‘ಮಹಾತ್ಮೆ ಕುದ್ಮುಲ್’ ; ಸೂರಿಲ್ಲದ, ತುಂಡು ಭೂಮಿ ಇಲ್...
21-11-26 10:29 pm
23-11-26 02:24 pm
HK News Staffer
ತಲೆ ಕಡಿದು ಧ್ವನಿ ಅಡಗಿಸಬಹುದು, ನ್ಯಾಯದ ಧ್ವನಿಯನ್ನಲ...
23-11-26 11:59 am
ಸತ್ತಿದ್ದಾಳೆ ಎಂದ ಮಹಿಳೆ 7 ವರ್ಷಗಳ ಬಳಿಕ ಪ್ರತ್ಯಕ್ಷ...
21-11-26 04:41 pm
ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಹಣಕ್ಕಾಗಿ ಅಜ್ಜಿಯನ್ನೇ ಕ...
21-11-26 12:41 pm
'ಬಸವ ಮಂಟಪ' ಕೃತಿ ವಿವಾದ ಹಿನ್ನೆಲೆ ; ಲೇಖಕ ರವಿ ಹಂಜ...
21-11-26 12:33 pm