ಬ್ರೇಕಿಂಗ್ ನ್ಯೂಸ್
04-02-21 11:22 am Mangalore Correspondent ಕ್ರೈಂ
ಉಪ್ಪಿನಂಗಡಿ, ಫೆ.4 : ಇಲ್ಲಿನ ಪೆರ್ನೆ ಸಮೀಪ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಜಾಗಕ್ಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಅಕ್ರಮವಾಗಿ ಸಂಗ್ರಹಿಸಿದ್ದ ಮರಳನ್ನು ಮುಟ್ಟುಗೋಲು ಹಾಕಿದೆ.
ಪೆರ್ನೆ ಗ್ರಾಮದ ಕಳೆಂಜ ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ಸಂಗ್ರಹಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಮಂಗಳೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಭೂವಿಜ್ಞಾನಿ ಮಹದೇಶ್ವರ ಮತ್ತು ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಅಕ್ರಮವಾಗಿ ದೋಣಿಯ ಮೂಲಕ ಮರಳು ಸಂಗ್ರಹಿಸಿ ನದಿ ದಡದಲ್ಲಿ ರಾಶಿ ಹಾಕಿರುವುದನ್ನು ಪತ್ತೆ ಹಚ್ಚಿ ಮರಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಅಲ್ಲದೆ, ನದಿ ದಡದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಶೆಡ್ ಅನ್ನು ತೆರವುಗೊಳಿಸಿದೆ.
ಪೆರ್ನೆ ಗ್ರಾಮದ ಬಿಳಿಯೂರಿನಲ್ಲಿ ಮರಳು ತೆಗೆಯಲು ಪರವಾನಿಗೆ ನೀಡಲಾಗಿತ್ತು. ಆದರೆ ಪೆರ್ನೆಯಲ್ಲಿ ಮರಳು ತೆಗೆಯಲು ಪರವಾನಿಗೆ ನೀಡಿರಲಿಲ್ಲ. ಆದರೆ ಅಲ್ಲಿ ಹನೀಫ್ ಎಂಬಾತ ಅಕ್ರಮವಾಗಿ ಮರಳು ತೆಗೆದು ದಾಸ್ತಾನು ಇರಿಸಿದ್ದು, ಕಂಡು ಬಂದಿದೆ. ಅಲ್ಲಿ ಮಹಜರು ಮಾಡಿ ಮರಳು ಮುಟ್ಟುಗೋಲು ಮಾಡಿ, ಶೆಡ್ ತೆರವು ಮಾಡಿದ್ದೇವೆ. ಈ ಬಗ್ಗೆ ಸೂಕ್ತ ಕ್ರಮಕ್ಕಾಗಿ ಹಿರಿಯ ಅಧಿಕಾರಿಗೆ ವರದಿ ಸಲ್ಲಿಸಲಾಗುವುದು ಎಂದು ಭೂವಿಜ್ಞಾನಿ ಮಹದೇಶ್ವರ ತಿಳಿಸಿದ್ದಾರೆ.
Mines and Geology conduct Raid on Illegal sand mining in Perne River at Uppinangady.
14-08-25 01:48 pm
Bangalore Correspondent
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 11:51 am
HK Staff
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm