ಬ್ರೇಕಿಂಗ್ ನ್ಯೂಸ್
05-02-21 09:16 pm Mangaluru Correspondent ಕ್ರೈಂ
ಬಂಟ್ವಾಳ, ಫೆ.5: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ವಿಟ್ಲ, ಉಪ್ಪಿನಂಗಡಿ, ಪುತ್ತೂರು ಭಾಗದಲ್ಲಿ ತಲೆನೋವಿಗೆ ಕಾರಣವಾಗಿದ್ದ ಸರಣಿ ಕಳ್ಳತನ ಪ್ರಕರಣವನ್ನು ಬಂಟ್ವಾಳ ಸರ್ಕಲ್ ಇನ್ಸ್ ಪೆಕ್ಟರ್ ನಾಗರಾಜ್ ನೇತೃತ್ವದ ಪೊಲೀಸರು ಭೇದಿಸಿದ್ದಾರೆ.
ಎರಡು ತಿಂಗಳಲ್ಲಿ ಸರಣಿಯಾಗಿ ನಡೆದಿದ್ದ ಕಳವು ಪ್ರಕರಣ ಹಿನ್ನೆಲೆಯಲ್ಲಿ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ ನಾಗರಾಜ್ ನೇತೃತ್ವದಲ್ಲಿ ಬಂಟ್ವಾಳ ನಗರ ಠಾಣಾ ಉಪನಿರೀಕ್ಷಕ ಅವಿನಾಶ್ ಮತ್ತು ಕಲೈಮಾರ್, ಬಂಟ್ವಾಳ ಗ್ರಾಮಾಂತರ ಠಾಣಾ ಉಪ ನಿರೀಕ್ಷಕರಾದ ಪ್ರಸನ್ನ ಮತ್ತು ಸಂಜೀವ್, ವಿಟ್ಲ ಠಾಣಾ ಉಪ ನಿರೀಕ್ಷಕರಾದ ವಿನೋದ್ ರೆಡ್ಡಿ, ಉಪ್ಪಿನಂಗಡಿ ಠಾಣಾ ಉಪನಿರೀಕ್ಷಕರಾದ ಈರಯ್ಯ , ಡಿಸಿಐಬಿ ಮತ್ತು ಠಾಣಾ ಸಿಬ್ಬಂದಿಗಳನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು.
ತನಿಖೆ ಆರಂಭಿಸಿದ ಪೊಲೀಸರ ತಂಡ ಹಲವು ಕಡೆಗಳ ಸಿಸಿಟಿವಿ, ಅಲ್ಲಿ ಬಿಟ್ಟು ಹೋದ ಸಾಕ್ಷ್ಯಗಳನ್ನು ಕಲೆಹಾಕಿದ್ದು ಕೃತ್ಯದ ಸುಳಿವನ್ನು ಪಡೆದು ಕಾರ್ಯಾಚರಣೆ ನಡೆಸಿತ್ತು. ಸುರಭಿ ಬಾರ್ ನಲ್ಲಿ ಇತ್ತೀಚೆಗೆ ಜನವರಿ ಕೊನೆಯಲ್ಲಿ ನಡೆದಿದ್ದ ಕಳವು ಮತ್ತು ಪರ್ಲ ಚರ್ಚ್ ನಲ್ಲಿ ನಡೆದ ಪ್ರಕರಣ ಖಚಿತ ಸಾಕ್ಷ್ಯ ನೀಡಿತ್ತು. ಸಂಶಯದ ಮೇರೆಗೆ ಹಫೀಸ್ ಯಾನೆ ಅಪ್ಪಿ ಎಂಬಾತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ವಿವಿಧ ಕಳವು ಪ್ರಕರಣಗಳ ಬಯಲಿಗೆ ಬಂದಿದೆ. ಐವರು ಆರೋಪಿಗಳನ್ನು ಬಂಧಿಸಿದ್ದು ಎರಡು ತಿಂಗಳಲ್ಲಿ 13 ಕಡೆ ಕಳವು ನಡೆಸಿರುವುದನ್ನು ಒಪ್ಪಿಕೊಂಡಿದ್ದಾರೆ.
ಅರ್ಕುಳ ವಳಚ್ಚಿಳ್ ನಿವಾಸಿ ಅಮ್ಮೀ ಯಾನೆ ಅಮರುದ್ದಿನ್, ಮಂಗಳೂರಿನ ಕಣ್ಣೂರು ನಿವಾಸಿಗಳಾದ ಮಹಮದ್ ಯೂನಸ್ ಮತ್ತು ಹಫೀಸ್ ಯಾನೆ ಅಪ್ಪಿ, ಸಜಿಪಮೂಡ ಗ್ರಾಮದ ಪೆರ್ವಾ ನಿವಾಸಿ ಫಾರೂಕ್ ಯಾನೆ ಉಮ್ಮರ್ ಫಾರೂಕ್ ಯಾನೆ ಕಳ್ಳ ಫಾರೂಕ್ (27) ಹಾಗೂ ಮಂಗಳೂರು ಬೆಂಗ್ರೆ ನಿವಾಸಿ ಮಹಮ್ಮದ್ ಸಫ್ವಾನ್ ಯಾನೆ ಸರತ್ ಯಾನೆ ಕರೂ ಯಾನೆ ಸಫ್ವಾನ್ (19) ಎಂಬವರನ್ನು ಬಂಧಿಸಲಾಗಿದೆ. ಫಾರೂಕ್ ನಟೊರಿಯಸ್ ಕಳ್ಳನಾಗಿದ್ದು ಒಂದುವರೆ ತಿಂಗಳ ಹಿಂದಷ್ಟೆ ಜೈಲಿನಿಂದ ಹೊರಬಂದಿದ್ದ. ಈತನ ಮೇಲೆ 13ಕ್ಕೂ ಹೆಚ್ಚು ಕೇಸುಗಳಿವೆ. ಇವರ ಕೃತ್ಯದ ಶೈಲಿ ಎಲ್ಲ ಕಡೆಯೂ ಒಂದೇ ರೀತಿಯಾಗಿದ್ದು ಪೊಲೀಸರಿಗೆ ಮಹತ್ವದ ಸುಳಿವು ನೀಡಿತ್ತು.
ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಸುರಭಿ ಬಾರ್ ಕಳ್ಳತನ, ನರಿಕೊಂಬು ದೇವಸ್ಥಾನ ಹುಂಡಿ ಕಳವು, ಮೆಲ್ಕಾರ್ ಕಾಲೇಜ್ ಕಳ್ಳತನ, ಅಮ್ಟೂರು ಚರ್ಚ್ ಕಳ್ಳತನ, ಚಂಡಿಕಾ ಪರಮೇಶ್ವರಿ ದೇವಸ್ಥಾನ ಹುಂಡಿ ಕಳ್ಳತನ, ವಿಟ್ಲ ಪೊಲೀಸ್ ಠಾಣೆಯಲ್ಲಿ ERSS ಪೆಟ್ರೋಲ್ ಬಂಕ್ ಕಳ್ಳತನ ಪ್ರಕರಣ, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಶಂಭೂರು ಸ್ಕೂಲ್ ಕಳ್ಳತನ, ಪರ್ಲ ಚರ್ಚ್ ಕಳ್ಳತನ, ರಾಜೇಶ್ ಬಾರ್ ಕಳ್ಳತನ ಮಂಗಳೂರು ಕಂಕನಾಡಿ ಗ್ರಾಮಾಂತರ ಪೊಲೀಸ್ ಠಾಣೆ ಪಲ್ಸರ್ ಬೈಕ್ ಕಳ್ಳತನ, ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಉಲ್ಲಾಸ್ ಬಾರ್ ಕಳ್ಳತನ, ಕೇರಳ ರಾಜ್ಯದ ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪಲ್ಸರ್ ಬೈಕ್ ಕಳ್ಳತನ ಹೀಗೆ ಒಟ್ಟು 13 ಕಳ್ಳತನ ಕೃತ್ಯಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.
ಆರೋಪಿಗಳಿಂದ 3 ಬೈಕ್ , ಒಂದು ಮೊಬೈಲ್, 6 DVR set box , 14 ಜೀವಂತ ಗುಂಡು, 2 ಮಾನಿಟರ್, ಬ್ರಾಡ್ ಬ್ಯಾಂಡ್ ಒ ಎಲ್ ಟಿ ಬಾಕ್ಸ್ ಪತ್ತೆ ಹಚ್ಚುವ ಮತ್ತು ರೂ 40,000 ಸಾವಿರ ಹಣ ಸೇರಿದಂತೆ ಒಟ್ಟು ಅಂದಾಜು ರೂ 4,80,000 ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶಪಡಿಸಿದ್ದಾರೆ.
The Bantwal Police crime branch arrested five persons from a chain-snatching gang in Dakshina Kannada. The gang had started robbing women of gold chains shortly after the lockdown. They operated in a group of four men riding two motorbikes.
14-08-25 01:48 pm
Bangalore Correspondent
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 11:51 am
HK Staff
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm