ಬ್ರೇಕಿಂಗ್ ನ್ಯೂಸ್
13-02-21 01:59 pm Mangalore Correspondent ಕ್ರೈಂ
ಮಂಗಳೂರು, ಫೆ.13: ನಗರದ ಲಾಲ್ ಬಾಗ್ ಬಳಿಯ ಪಬ್ಬಾಸ್ ಮುಂಭಾಗದಲ್ಲಿ ನಿಂತಿದ್ದ ಹಿಂದು ಸಂಘಟನೆ ಕಾರ್ಯಕರ್ತ ದೀಪಕ್ ಎಂಬವರ ಮೇಲೆ ಹಲ್ಲೆಗೈದು ಪರಾರಿಯಾಗಿದ್ದ ಮೂವರ ತಂಡವನ್ನು ಪೊಲೀಸರು ಬಂಧಿಸಿದ್ದಾರೆ.

ಕುದ್ರೋಳಿ ನಿವಾಸಿಗಳಾದ ಮೊಹಮ್ಮದ್ ಶಾಹಿಲ್ (19), ಮೊಹಮ್ಮದ್ ಫಾಯಿಕ್ (18) ಮತ್ತು ಇನ್ನೋರ್ವ ಅಪ್ರಾಪ್ತನನ್ನು ಪೊಲೀಸರು ಬಂಧಿಸಿದ್ದಾರೆ. ಫೆ.7ರಂದು ರಾತ್ರಿ ಹತ್ತು ಗಂಟೆ ಸುಮಾರಿಗೆ ದೀಪಕ್ ಎಂಬಾತ ತನ್ನ ಬೈಕಿನಲ್ಲಿ ಕುಳಿತಿದ್ದಾಗ ಅಲ್ಲಿಗೆ ಬಂದಿದ್ದ ಮೂವರು ಯುವಕರು ಬೈಕಿನಲ್ಲಿದ್ದ ಶಿವಾಜಿ ಸ್ಟಿಕ್ಕರ್ ಬಗ್ಗೆ ಆಕ್ಷೇಪಿಸಿದ್ದಾರೆ. ಸ್ಟಿಕ್ಕರ್ ಹಾಕಿದ ವಿಚಾರದಲ್ಲಿ ವಾಗ್ವಾದ ನಡೆದು ಬಳಿಕ ದೀಪಕ್ ಮೇಲೆ ಯುವಕರು ಹಲ್ಲೆ ನಡೆಸಿ ಪರಾರಿಯಾಗಿದ್ದರು. ಮುಂಗೈ, ಹೆಬ್ಬೆರಳು ಮತ್ತು ಕೈ ಮಣಿ ಗಂಟು ಭಾಗಕ್ಕೆ ಗಾಯಗೊಂಡಿದ್ದ ದೀಪಕ್ ನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.


ಈ ಬಗ್ಗೆ ಪೊಲೀಸ್ ಕಮಿಷನರ್ ಶಶಿಕುಮಾರ್, ಡಿಸಿಪಿ ವಿನಯ ಗಾಂವ್ಕರ್ ನೇತೃತ್ವದಲ್ಲಿ ಪೊಲೀಸ್ ತಂಡ ರಚಿಸಿ, ತನಿಖೆಗೆ ಸೂಚಿಸಿದ್ದರು. ಉರ್ವಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದ ಪೊಲೀಸರು ತನಿಖೆ ನಡೆಸಿದ್ದರು. ಇದೀಗ ಮೂರು ಯುವಕರನ್ನು ಕೂಡ ಬಂಧಿಸಿದ್ದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
Read: ಬೈಕಿನಲ್ಲಿ ಶಿವಾಜಿ ಸ್ಟಿಕ್ಕರ್ ; ಸಂಘಟನೆ ಕಾರ್ಯಕರ್ತನ ಮೇಲೆ ತಂಡದಿಂದ ದಾಳಿ
A man was attacked by a group of unidentified miscreants near Lalbagh in Mangalore for Shivaji sticker in the bike. The City Police have arrested Three persons.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm