ಬ್ರೇಕಿಂಗ್ ನ್ಯೂಸ್
22-02-21 05:48 pm Mangalore Correspondent ಕ್ರೈಂ
ಉಳ್ಳಾಲ, ಫೆ.22: ತಲಪಾಡಿ ಗಡಿಯಲ್ಲಿ ಅಕ್ರಮ ಮರಳು ಸಾಗಣೆ ಅವ್ಯಾಹತ ಆಗಿರುವುದಕ್ಕೆ ಮತ್ತೊಂದು ತಾಜಾ ನಿದರ್ಶನ ಲಭಿಸಿದೆ. ತಲಪಾಡಿ ದೇವಿಪುರ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಜಾಗದ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿ ಆಗಿ ಬಿದ್ದಿದ್ದು, ದೇವಸ್ಥಾನದಿಂದ ಹೊರಬರುತ್ತಿದ್ದ ಮಹಿಳೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತಲಪಾಡಿಯ ವಿಜಯಾ ಬ್ಯಾಂಕ್ ಬಳಿಯ ನದಿಯಿಂದ ದಿನ ನಿತ್ಯವೂ ಅಕ್ರಮವಾಗಿ ಮರಳನ್ನು ಎತ್ತಿ ತಲಪಾಡಿ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗದಿಂದ ಕೇರಳಕ್ಕೆ ಮರಳನ್ನು ಸರಬರಾಜು ಮಾಡಲಾಗುತ್ತಿದೆ. ಕಳೆದ ಜನವರಿ 19 ರಂದು ಕಿನ್ಯ ಗ್ರಾಮದ ನಡುಕುಮೇರ್ ಪಡುವಳ್ ಫಾರ್ಮ್ಸ್ ಬಳಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್ ಮತ್ತು ಓಮ್ನಿ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓಮ್ನಿ ಕಾರಿನಲ್ಲಿದ್ದ ಇಬ್ಬರು ಕಾಲು ತುಂಡಾಗಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆ ಸೇರಿದ ಘಟನೆ ನಡೆದಿತ್ತು. ನಂತರ 24 ಜನವರಿಯಂದು ತೊಕ್ಕೊಟ್ಟಿನ ಸಹರಾ ಆಸ್ಪತ್ರೆ ಮುಂಭಾಗದಲ್ಲಿ ವೃದ್ಧನೋರ್ವನಿಗೆ ಮರಳು ಸಾಗಿಸುತ್ತಿದ್ದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ವೃದ್ಧ ಸ್ಥಳದಲ್ಲೇ ಮೃತಪಟ್ಟಿದ್ದು ಹಿಟ್ & ರನ್ ಮಾಡಿದ ಟಿಪ್ಪರನ್ನು ಪೊಲೀಸರು ವಶಕ್ಕೆ ತೆಗೆದು ಪ್ರಕರಣ ದಾಖಲಿಸಿದ್ದರು.
ಇಂದು ಮಧ್ಯಾಹ್ನ ಮುಖ್ಯ ರಸ್ತೆ ತಪ್ಪಿಸಿ ತಲಪಾಡಿಯ ಒಳ ರಸ್ತೆಯಲ್ಲಿ ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿದ್ದ ಟಿಪ್ಪರ್ ನಿಯಂತ್ರಣ ತಪ್ಪಿ ಖಾಸಗಿ ಜಾಗದ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿ ಆಗಿ ಬಿದ್ದಿದೆ.
ದುರ್ಗಾಪರಮೇಶ್ವರಿ ದೇವಸ್ಥಾನದ ಎದುರು ದಿನನಿತ್ಯವೂ ಅಕ್ರಮ ಮರಳು ಸಾಗಾಟ ಆಗುವುದರ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಸ್ಥಳೀಯರು ದೂರಿದರೂ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಮರಳು ಮಾಫಿಯಾದಲ್ಲಿ ಸ್ಥಳೀಯ ಪಕ್ಷ ರಹಿತರಾಗಿ ಯುವಕರು ಮತ್ತು ಸಹೋದರರಿಬ್ಬರು ಶಾಮೀಲಾಗಿರುವುದಾಗಿ ತಿಳಿದು ಬಂದಿದೆ. ಟಿಪ್ಪರ್ ಪಲ್ಟಿ ಆದ ವಿಷಯ ತಿಳಿದ ಕೂಡಲೇ ಉಳ್ಳಾಲ ಇನ್ಸ್ ಪೆಕ್ಟರ್ ಸಮೇತ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಈ ಪ್ರದೇಶದಲ್ಲಿ ನಿತ್ಯ ಮರಳು ಸಾಗಣೆ ಆಗುತ್ತಿದ್ದರೂ, ಪೊಲೀಸರು ಕಣ್ಣಿದ್ದೂ ಕುರುಡರಾಗಿದ್ದಾರೆ. ಇವರ ನಿರ್ಲಕ್ಷ್ಯದಿಂದಾಗಿ ಅಕ್ರಮ ಮರಳು ಸಾಗಣೆ ಎಷ್ಟಿದೆ ಎನ್ನುವುದಕ್ಕೆ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅಳವಡಿಸಿರುವ ಸಿ.ಸಿ ಕ್ಯಾಮೆರಾಗಳೇ ಮೂಕ ಸಾಕ್ಷಿ ಎಂದು ಸ್ಥಳೀಯರು ತಿಳಿಸಿದ್ದಾರೆ.
A truck that was illegally transporting sand toppled at Ullal in Mangalore.
06-10-25 10:47 pm
Bangalore Correspondent
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
06-10-25 07:56 pm
HK News Desk
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
06-10-25 10:42 pm
Mangalore Correspondent
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಹೃದ್ರೋಗ...
06-10-25 04:57 pm
ಟ್ರಾಫಿಕ್ ಸಿಬಂದಿ ಕಾರು ನಿಲ್ಲಿಸಲೆತ್ನಿಸಿ ಒಡೆದ ಗಾಜ...
06-10-25 02:58 pm
Ullal, UT Khader, Sharadotsava Clash: ಉಳ್ಳಾಲ...
04-10-25 10:29 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm